ಕಲ್ಯಾಣ ಕರ್ನಾಟಕ ಪ್ರವಾಸೋದ್ಯಮ ಅಭಿವೃದ್ಧಿಗೆ ಅನುದಾನಕಲ್ಯಾಣ ಕರ್ನಾಟಕ ಭಾಗದ ವ್ಯಾಪ್ತಿಯಲ್ಲಿ ಬರುವ ಪ್ರವಾಸಿ ತಾಣಗಳಾದ ಹಂಪಿ, ಮೈಲಾರ, ಗಾಣಗಾಪುರ, ಸನ್ನತಿ ಮತ್ತು ಮಳಖೇಡ, ಬೀದರ್, ರಾಯಚೂರು ಹಾಗೂ ಕಲಬುರಗಿ ಕೋಟೆಗಳ ಸಮಗ್ರ ಅಭಿವೃದ್ಧಿಗಾಗಿ 75 ಕೋಟಿ ರೂ. ಗಳನ್ನು ಒದಗಿಸಲಾಗುವುದು.ಕಿತ್ತೂರು ಕರ್ನಾಟಕ ಭಾಗದಲ್ಲಿನ ಸವದತ್ತಿ ಯಲ್ಲಮ್ಮನ ಗುಡ್ಡ, ದೇವರಗುಡ್ಡ, ಕಪ್ಪತ್ತಗುಡ್ಡ, ಬಾದಾಮಿ ಬನಶಂಕರಿ, ಲಕ್ಕುಂಡಿ ಪ್ರವಾಸಿ ತಾಣಗಳನ್ನು ಮತ್ತು ಗದಗ ಜಿಲ್ಲೆಯ ಮಾಗಡಿ ಪಕ್ಷಿಧಾಮವನ್ನು ಸಮಗ್ರವಾಗಿ ಅಭಿವೃದ್ಧಿಪಡಿಸಲಾಗುವುದು ಎಂದು ಸಿಎಂ ತಿಳಿಸಿದ್ದಾರೆ.