Please enable javascript.KAS Recruitment 2023,ಭರ್ಜರಿ ಗುಡ್‌ ನ್ಯೂಸ್‌: ಶೀಘ್ರದಲ್ಲೇ ಕೆಎಎಸ್ ಹುದ್ದೆಗಳಿಗೆ ಅಧಿಸೂಚನೆ! - karnataka govt to release kas recruitment 2023 notification soon for upto 200 vacancy - Vijay Karnataka

ಭರ್ಜರಿ ಗುಡ್‌ ನ್ಯೂಸ್‌: ಶೀಘ್ರದಲ್ಲೇ ಕೆಎಎಸ್ ಹುದ್ದೆಗಳಿಗೆ ಅಧಿಸೂಚನೆ!

Authored byಸುನೀಲ್ ಬಿ ಎನ್ | Vijaya Karnataka Web 18 Jul 2023, 10:57 am
Subscribe

Karnataka govt job vacancy 2023: ರಾಜ್ಯ ಸರ್ಕಾರದಿಂದ ಸುಮಾರು 200 ಕೆಎಎಸ್‌ / ಗೆಜೆಟೆಡ್‌ ಪ್ರೊಬೇಷನರಿ ಆಫೀಸರ್‌ಗಳ ಹುದ್ದೆಗೆ ಪ್ರಸ್ತಾವನೆ ಸಲ್ಲಿಕೆ ಆಗಿದ್ದು, ಆರ್ಥಿಕ ಇಲಾಖೆಯಿಂದ ಸಮ್ಮತಿ ದೊರೆತಲ್ಲಿ, ಈ ಹುದ್ದೆಗಳಿಗೆ ಮುಂದಿನ ಡಿಸೆಂಬರ್ ವೇಳೆಗೆ ಅಧಿಸೂಚನೆ ಹೊರಬೀಳುವ ಸಾಧ್ಯತೆಗಳಿವೆ.

ಹೈಲೈಟ್ಸ್‌:

  • ಕೆಎಎಸ್‌ ಹುದ್ದೆಗೆ ಆಕಾಂಕ್ಷಿಗಳಿಗೆ ಗುಡ್ ನ್ಯೂಸ್.
  • ಶೀಘ್ರದಲ್ಲೇ ಗೆಜೆಟೆಡ್ ಪ್ರೊಬೇಷನರಿ ಹುದ್ದೆಗೆ ಅಧಿಸೂಚನೆ.
  • ಸುಮಾರು 200 ಹುದ್ದೆಗಳಿಗೆ ಪ್ರಸ್ತಾವನೆ ಸಲ್ಲಿಕೆ.
karnataka govt to release kas recruitment 2023
karnataka govt to release kas recruitment 2023 notification soon
ಕರ್ನಾಟಕ ಸರ್ಕಾರದಿಂದ ಭರ್ಜರಿ ಗುಡ್‌ ನ್ಯೂಸ್‌ ಒಂದು ಸಿಕ್ಕಿದೆ. ಶೀಘ್ರದಲ್ಲೇ ಕೆಎಎಸ್‌ / ಗೆಜೆಟೆಡ್‌ ಪ್ರೊಬೇಷನರಿ ಹುದ್ದೆಗಳಿಗೆ ಅಧಿಸೂಚನೆ ಹೊರಬೀಳುವ ಸಾಧ್ಯತೆಗಳಿವೆ.
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್‌ ಇಲಾಖೆಯ ವೃಂದ ಮತ್ತು ನೇಮಕಾತಿ ನಿಯಮಗಳನ್ವಯ ನೇರ ನೇಮಕಾತಿ ಮೂಲಕ ಭರ್ತಿ ಮಾಡಿಕೊಳ್ಳಬಹುದಾದ ಕಾರ್ಯನಿರ್ವಾಹಕ ಅಧಿಕಾರಿ / ಸಹಾಯಕ ಕಾರ್ಯದರ್ಶಿ (ಗೆಜೆಟೆಡ್ ಪ್ರೊಬೆಷನರಿ) ಅಧಿಕಾರಿ ಸಂಖ್ಯೆ : 110. ಅವುಗಳ ಪೈಕಿ ಪ್ರಸ್ತುತ ನೇರ ನೇಮಕಾತಿ ಮೂಲಕ ಭರ್ತಿ ಮಾಡಿಕೊಳ್ಳಬಹುದಾದ ಕಾರ್ಯನಿರ್ವಾಹಕ ಅಧಿಕಾರಿ / ಸಹಾಯಕ ಕಾರ್ಯದರ್ಶಿ ಖಾಲಿ ಹುದ್ದೆಗಳ ಸಂಖ್ಯೆ 59 ಇವೆ. ಈ ಸದರಿ ಹುದ್ದೆಗಳನ್ನು ಭರ್ತಿ ಮಾಡಲು ಅಗತ್ಯ ಕ್ರಮ ಕೈಗೊಳ್ಳುವಂತೆ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಗೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಮತ್ತು ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವರು ವಿಧಾನ ಪರಿಷತ್ತಿನಲ್ಲಿ ಹೇಳಿದ್ದಾರೆ.

ಪ್ರಸ್ತುತ 42 ಅಸಿಸ್ಟಂಟ್‌ ಕಮಿಷನರ್ (ಕಂದಾಯ) ಮತ್ತು 110 ಎಕ್ಸಿಕ್ಯೂಟಿವ್ ಆಫೀಸರ್ ಹುದ್ದೆಗಳು ಸೇರಿದಂತೆ 540 ಕ್ಕೂ ಅಧಿಕ ಹುದ್ದೆಗಳು ಖಾಲಿ ಇವೆ. 2023-24ನೇ ಸಾಲಿನಲ್ಲಿ 20 ಎಸಿ ಮತ್ತು 59 ಇಒ ಹುದ್ದೆಗಳು ಸೇರಿದಂತೆ ಸುಮಾರು 200 ಕ್ಕೂ ಹೆಚ್ಚು ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲು ಪ್ರಸ್ತಾವನೆ ಸಲ್ಲಿಕೆಯಾಗಿದೆ ಎಂದು ಮೂಲಗಳು ತಿಳಿಸಿವೆ.

ರಾಜ್ಯದ ನಿರುದ್ಯೋಗಿಗಳಿಗೆ ಗುಡ್‌ ನ್ಯೂಸ್: 13,000 ಹುದ್ದೆ ಶೀಘ್ರದಲ್ಲಿ ಭರ್ತಿ ಎಂದ ಸಿಎಂ ಸಿದ್ದರಾಮಯ್ಯ

ಕರ್ನಾಟಕ ಲೋಕಸೇವಾ ಆಯೋಗವು 2011ನೇ ಬ್ಯಾಚಿನಲ್ಲಿ ಆಯ್ಕೆಯಾಗಿದ್ದ ಒಟ್ಟು 60 ಕಾರ್ಯನಿರ್ವಾಹಕ ಅಧಿಕಾರಿ / ಸಹಾಯಕ ಕಾರ್ಯದರ್ಶಿಗಳ ಪೈಕಿ ದಾಖಲೆಗಳ ಪರಿಶೀಲನೆಗೆ ಹಾಜರಾದ ಒಟ್ಟು 41 ಅಧಿಕಾರಿಗಳಿಗೆ ನೇಮಕಾತಿ ಆದೇಶ ನೀಡಿದ್ದು, ಪ್ರಸ್ತುತ ಸದರಿ ಅಧಿಕಾರಿಗಳು ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಹಾಗೂ ಕಳೆದ 04 ವರ್ಷಗಳಲ್ಲಿ ಒಟ್ಟು 140 ಸಹಾಯಕ ನಿರ್ದೇಶಕರು ಕಾರ್ಯನಿರ್ವಾಹಕ ಅಧಿಕಾರಿ / ಸಹಾಯಕ ಕಾರ್ಯದರ್ಶಿ ಹುದ್ದೆಗೆ ಮುಂಬಡ್ತಿ ಪಡೆದಿರುತ್ತಾರೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಮತ್ತು ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವರು ತಿಳಿಸಿದ್ದಾರೆ.

ಗಣಿ, ಭೂವಿಜ್ಞಾನ ಇಲಾಖೆಯಲ್ಲಿ ಕಾನೂನು ಸಮಾಲೋಚಕರ ಉದ್ಯೋಗ: ಅರ್ಜಿ ಆಹ್ವಾನ
ಸುನೀಲ್ ಬಿ ಎನ್
ಲೇಖಕರ ಬಗ್ಗೆ
ಸುನೀಲ್ ಬಿ ಎನ್
"ಸುನೀಲ್ ಬಿ ಎನ್ ರವರು ಅನುಭವಿ ಬರಹಗಾರರಾಗಿದ್ದು, ಕಳೆದ 7 ವರ್ಷಗಳಿಂದ ಪತ್ರಿಕೋದ್ಯಮ ಕ್ಷೇತ್ರದಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ. ಇವರು 2015 ರಲ್ಲಿ ತಮ್ಮ ವೃತ್ತಿ ಜೀವನ ಆರಂಭಿಸಿದರು. ನಂತರ ಹಲವು ಡೊಮೈನ್‌ಗಳಲ್ಲಿ ಕೆಲಸ ಮಾಡುವ ಮೂಲಕ ತಮ್ಮ ವೃತ್ತಿ ಕೌಶಲ್ಯಗಳನ್ನು ಅಭಿವೃದ್ಧಿಪಡಿಸಿಕೊಂಡಿದ್ದಾರೆ. ಸುನೀಲ್ ರವರು ವೈವಿಧ್ಯಮಯ ಪರಿಣತಿಯನ್ನು ಹೊಂದಿದ್ದು, ತಂತ್ರಜ್ಞಾನ, ಸಿನಿಮಾ, ಉದ್ಯೋಗ, ಶಿಕ್ಷಣ, ಜೀವನಶೈಲಿ ಸೇರಿದಂತೆ ಸುದ್ದಿ ವಿಭಾಗದಲ್ಲೂ ಕೆಲಸದ ಅನುಭವ ಹೊಂದಿದ್ದಾರೆ. ಕಳೆದ 3.6 ವರ್ಷಗಳಿಂದ ಸುನೀಲ್‌ ರವರು ಉದ್ಯೋಗ ಮತ್ತು ಶಿಕ್ಷಣ ವಿಭಾಗದಲ್ಲಿ ತಮ್ಮ ಬರವಣಿಗೆ ಕೃಷಿಯನ್ನು ಕೇಂದ್ರೀಕರಿಸಿದ್ದು, ಈ ವಿಷಯಗಳಲ್ಲಿ ಉದ್ಯಮದ ಸೂಕ್ಷ್ಮ ವ್ಯತ್ಯಾಸಗಳ ಬಗ್ಗೆ ಆಳವಾದ ತಿಳುವಳಿಕೆಯನ್ನು ಬೆಳೆಸಿಕೊಂಡಿದ್ದಾರೆ. ಈ ಎರಡು ಡೊಮೇನ್‌ಗಳಲ್ಲಿನ ಬೆಳವಣಿಗೆ ಹಾಗೂ ಬದಲಾವಣೆ ಕುರಿತು ಲೇಟೆಸ್ಟ್‌ ಮಾಹಿತಿಗಳನ್ನು ರಚಿಸುವ ಮೂಲಕ ಓದುಗರಿಗೆ ಸಹಾಯ ಮಾಡುವ ಹಾಗೂ ಅವರಿಗೆ ಉಪಯುಕ್ತ ಮಾಹಿತಿ ನೀಡುವಲ್ಲಿ ಸದಾ ಉತ್ಸುಕರಾಗಿ ಕೆಲಸ ಮಾಡುತ್ತಿದ್ದಾರೆ. ಬರವಣಿಗೆ ಹೊರತಾಗಿ, ಸುನೀಲ್‌ ಬಿ ಎನ್‌ ರವರು ಹಲವು ಉತ್ತಮ ಹವ್ಯಾಸಗಳಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದಾರೆ. ಬಿಡುವಿನ ವೇಳೆ ಪ್ರಯಾಣಿಸಲು ಹಾಗೂ ಹೊಸ ಸ್ಥಳಗಳನ್ನು ಅನ್ವೇಷಿಸಲು ಇಷ್ಟಪಡುತ್ತಾರೆ. ಪ್ರಯಾಣವನ್ನು ಶಿಕ್ಷಣದ ಒಂದು ಭಾಗ ಎಂದುಕೊಂಡಿರುವ ಇವರು, ತಮ್ಮ ಈ ಹವ್ಯಾಸದಿಂದ ಅವರ ದೃಷ್ಟಿಕೋನವನ್ನು ವಿಸ್ತರಿಸಲು ಮತ್ತು ವಿಭಿನ್ನ ಸಂಸ್ಕೃತಿಗಳ ಉತ್ತಮ ತಿಳುವಳಿಕೆಯನ್ನು ಪಡೆಯಲು ಸಹಾಯ ಮಾಡುತ್ತದೆ ಎಂದು ಭಾವಿಸಿದ್ದಾರೆ. ಅತ್ಯಾಸಕ್ತಿಯ ಓದುಗರು ಆಗಿದ್ದು ಕಥೆ, ಕಾದಂಬರಿ, ನಾಟಕಗಳ ಪುಸ್ತಕಗಳನ್ನು ಓದುವುದನ್ನು ಇಷ್ಟಪಡುತ್ತಾರೆ. ಬಿಡುವಿನ ವೇಳೆ ಚೆಸ್‌ ಆಡುವುದು ಮತ್ತು ಕೃಷಿ ಕೆಲಸಗಳಲ್ಲಿ ತೊಡಗಿಸಿಕೊಳ್ಳುವ ಮೂಲಕವು ವಿಶ್ರಾಂತಿ ಪಡೆಯುತ್ತಾರೆ. "... ಇನ್ನಷ್ಟು ಓದಿ

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ