ಆ್ಯಪ್ನಗರ

ಆದಿಜಾಂಬವ ಅಭಿವೃದ್ಧಿ ನಿಗಮದಿಂದ ಉದ್ಯಮ ಶೀಲತಾ ಯೋಜನೆ ಸದುಪಯೋಗಕ್ಕೆ ಅರ್ಜಿ ಆಹ್ವಾನ

ಉದ್ಯಮ ಶೀಲತಾ ಅಭಿವೃದ್ಧಿ ಯೋಜನೆ-3 ಅಡಿಯಲ್ಲಿ ದ್ವಿ-ಚಕ್ರ / ತ್ರಿಚಕ್ರ ಸರಕು ಸಾಗಾಣಿಕೆ ವಾಹನ ಖರೀದಿಸಲು ಅರ್ಜಿಗಳನ್ನು ಸೇವಾ ಸಿಂಧು ಪೋರ್ಟಲ್‌ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಈ ಕುರಿತು ಹೆಚ್ಚಿನ ಮಾಹಿತಿಗಳನ್ನು ಈ ಕೆಳಗಿನಂತೆ ನೀಡಲಾಗಿದೆ.

Vijaya Karnataka Web 23 Dec 2022, 1:22 pm

ಹೈಲೈಟ್ಸ್‌:

  • ಆದಿಜಾಂಬವ ಅಭಿವೃದ್ಧಿ ನಿಗಮದಿಂದ ಸಹಾಯಧನ.
  • ದ್ವಿ-ಚಕ್ರ / ತ್ರಿಚಕ್ರ ಸರಕು ಸಾಗಾಣಿಕೆ ವಾಹನ ಖರೀದಿಸಲು ಸಬ್ಸಿಡಿ.
  • ಅರ್ಜಿ ಸಲ್ಲಿಸಲು ಬೇಕಾದ ಅಗತ್ಯ ಮಾಹಿತಿಗಳು ಕೆಳಗಿನಂತಿವೆ.
ಹೈಲೈಟ್ಸ್‌ ಮಾತ್ರವೇ ಓದಲು ಆ್ಯಪ್‌ ಡೌನ್‌ಲೋಡ್‌ ಮಾಡಿ
Vijaya Karnataka Web karnataka adijambava development authority self employement loan 2022 23
ಆದಿಜಾಂಬವ ಅಭಿವೃದ್ಧಿ ನಿಗಮದಿಂದ ಸಹಾಯಧನ.
2022-23ನೇ ಸಾಲಿನ ಪರಿಶಿಷ್ಟ ಜಾತಿಯ ಜನರ ಆರ್ಥಿಕ ಅಭಿವೃದ್ಧಿಗಾಗಿ ಕರ್ನಾಟಕ ಆದಿಜಾಂಬವ ಅಭಿವೃದ್ಧಿ ನಿಗಮದಿಂದ ಈ ಕೆಳಕಂಡ ಯೋಜನೆಗಳಿಗೆ ಅರ್ಹ ಫಲಾಪೇಕ್ಷಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಉದ್ಯಮ ಶೀಲತಾ ಅಭಿವೃದ್ಧಿ ಯೋಜನೆ-3 ಅಡಿಯಲ್ಲಿ ದ್ವಿ-ಚಕ್ರ / ತ್ರಿಚಕ್ರ ಸರಕು ಸಾಗಾಣಿಕೆ ವಾಹನ ಖರೀದಿಸಲು ಅರ್ಜಿಗಳನ್ನು ಸೇವಾ ಸಿಂಧು ಪೋರ್ಟಲ್‌ ಮೂಲಕ ಅರ್ಜಿ ಸಲ್ಲಿಸಬಹುದು. ಅರ್ಜಿಗಳನ್ನು ಗ್ರಾಮ ಒನ್, ಕರ್ನಾಟಕ ಒನ್ ಮತ್ತು ಬೆಂಗಳೂರು ಒನ್ ಕೇಂದ್ರದಲ್ಲಿ ಆನ್‌ಲೈನ್‌ ಮುಖಾಂತರ ಆಸಕ್ತರು ಅರ್ಜಿ ಸಲ್ಲಿಸಬಹುದು.

ಸೇವಾ ಸಿಂಧುವಿನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 31-12-2022
ಕರ್ನಾಟಕ ಆದಿಜಾಂಬವ ಅಭಿವೃದ್ಧಿ ನಿಗಮದ ಅಧಿಕೃತ ವೆಬ್‌ಸೈಟ್‌ ವಿಳಾಸ : https://adijambava.karnataka.gov.in/
ಅರ್ಜಿ ಸಲ್ಲಿಸಲು ಸೇವಾ ಸಿಂಧು ಪೋರ್ಟಲ್ ವೆಬ್ ವಿಳಾಸ : https://sevasindhu.karnataka.gov.in

1 ಲಕ್ಷ ಹುದ್ದೆಗಳ ಭರ್ತಿ 1 ವರ್ಷದೊಳಗೆ: ಸಿಎಂ ನುಡಿದಂತೆ ನಡೆಯುವರೇ?

ಸೌಲಭ್ಯ ಪಡೆಯಲು ಇರಬೇಕಾದ ಸಾಮಾನ್ಯ ಅರ್ಹತೆಗಳು ಮತ್ತು ಷರತ್ತುಗಳು

- ಅರ್ಜಿದಾರರು ಪರಿಶಿಷ್ಟ ಜಾತಿಯ ಮಾದಿಗ, ಸಂಬಂಧಿತ ಜಾತಿಗೆ ಸೇರಿದವರಾಗಿರಬೇಕು ಹಾಗೂ ಕರ್ನಾಟಕ ರಾಜ್ಯದ ವಾಸಿಯಾಗಿರಬೇಕು.

- ಅರ್ಜಿದಾರರ ಕುಟುಂಬದ ವಾರ್ಷಿಕ ಆದಾಯವು ಗ್ರಾಮೀಣ ಪ್ರದೇಶದಲ್ಲಿ ರೂ.1,50,000 ಮತ್ತು ನಗರ ಪ್ರದೇಶದಲ್ಲಿ ರೂ.2,00,000 ಗಳ ಮಿತಿಯಲ್ಲಿರಬೇಕು.

- ಅರ್ಜಿದಾರರು ಅಥವಾ ಅವರ ಕುಟುಂಬದವರು ಈ ಹಿಂದೆ ನಿಗಮದಿಂದ ಯಾವುದೇ ಸೌಲಭ್ಯ ಪಡೆದಿರಬಾರದು. ಮತ್ತು ಸರ್ಕಾರಿ / ಅರೆ ಸರ್ಕಾರಿ ಸಂಸ್ಥೆಯಲ್ಲಿ ನೌಕರಿಯಲ್ಲಿರಬಾರದು.

- ಉದ್ಯಮ ಶೀಲತಾ ಅಭಿವೃದ್ಧಿ ಯೋಜನೆಯಡಿ ದ್ವಿಚಕ್ರ / ತ್ರಿ-ಚಕ್ರ ಸರಕು ಸಾಗಾಣಿಕೆ ವಾಹನ ಉದ್ದೇಶಗಳಿಗೆ ಘಟಕ ವೆಚ್ಚದಲ್ಲಿ ರೂ.50,000 ಗಳ ಸಹಾಯಧನ ಹಾಗೂ ರೂ.20,000 ಸಾಲ ಮಂಜೂರು ಮಾಡಿ ಒಟ್ಟು ರೂ.70,000 ಘಟಕ ವೆಚ್ಚದಲ್ಲಿ ಯೋಜನೆಯನ್ನು ಅನುಷ್ಠಾನಗೊಳಿಸಲಾಗುತ್ತದೆ.

ಘಟಕ ವೆಚ್ಚ ಮೀರಿದಲ್ಲಿ ಸದರಿ ವ್ಯತ್ಯಾಸದ ಮೊತ್ತವನ್ನು ಅರ್ಜಿದಾರರ ಸೇವಾ ವ್ಯಾಪ್ತಿಯ ಬ್ಯಾಂಕ್‌ಗಳಿಂದ ಮಂಜೂರಾತಿ ಪಡೆಯುವ ಷರತ್ತಿಗೆ ಒಳಪಟ್ಟು ಸಹಾಯಧನ ಮತ್ತು ಸಾಲ ಮಂಜೂರು ಮಾಡಲಾಗುತ್ತದೆ.

ಅರ್ಜಿದಾರರು ಸಂಬಂಧಪಟ್ಟಂತೆ ಡ್ರೈವಿಂಗ್ ಲೈಸೆನ್ಸ್‌ ಹೊಂದಿರಬೇಕು.

ರಾಜ್ಯದ ಸರ್ಕಾರಿ ಪ್ರಾಥಮಿಕ, ಪ್ರೌಢಶಾಲೆಗಳಲ್ಲಿ ಖಾಲಿ ಇರುವ ಶಿಕ್ಷಕರ ಹುದ್ದೆಗಳೆಷ್ಟು ಗೊತ್ತೇ?

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ