ಆ್ಯಪ್ನಗರ

ಮಹದಾಯಿ ಯೋಜನೆ ಪೂರ್ಣಗೊಳಿಸಿ

ಮಹದಾಯಿ ಯೋಜನೆ ಪೂರ್ಣಗೊಳಿಸಲು ರಾಜ್ಯ ಸರಕಾರ ತಕ್ಷಣ ಮುಂದಾಗಬೇಕು ಎಂದು ಉತ್ತರ ಕರ್ನಾಟಕ ಕೂಗು ಸಂಘಟನೆಯ ರಾಜ್ಯ ಘಟಕ ಅಪರ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದೆ.

ವಿಕ ಸುದ್ದಿಲೋಕ 21 Feb 2017, 10:53 pm

ಬಾಗಲಕೋಟ: ಮಹದಾಯಿ ಯೋಜನೆ ಪೂರ್ಣಗೊಳಿಸಲು ರಾಜ್ಯ ಸರಕಾರ ತಕ್ಷಣ ಮುಂದಾಗಬೇಕು ಎಂದು ಉತ್ತರ ಕರ್ನಾಟಕ ಕೂಗು ಸಂಘಟನೆಯ ರಾಜ್ಯ ಘಟಕ ಅಪರ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದೆ.

ಜಿಲ್ಲಾಡಳಿತ ಭವನಕ್ಕೆ ಆಗಮಿಸಿದ ಸಂಘಟನೆಯ ಮುಖಂಡರು ಮನವಿ ಸಲ್ಲಿಸಿ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದರು. 'ಮಹದಾಯಿ ಯೋಜನೆಗೆ ಗೋವಾ ರಾಜ್ಯ ಅಡ್ಡಿಯನ್ನುಂಟುಮಾಡುತ್ತಿದೆ. ರಾಜ್ಯ ತೀವ್ರ ಬರ ಎದುರಿಸುತ್ತಿರುವ ಸಂದರ್ಭದಲ್ಲಿ ಕಳಸಾ ಬಂಡೂರಿ ನಾಲೆಗೆ ನೀರು ಹರಿಸುವ ಅವಶ್ಯಕತೆಯಿದೆ. ಜನರು ತೀವ್ರ ಹೋರಾಟ ನಡೆಸಿದ್ದರೂ ರಾಜ್ಯ ಸರಕಾರ ನಿರ್ಲಕ್ಷ್ಯ ವಹಿಸಿದೆ' ಎಂದು ಮನವಿಯಲ್ಲಿ ತಿಳಿಸಲಾಗಿದೆ. 'ಗೋವಾ ರಾಜ್ಯದ ಕಾಂಗ್ರೆಸ್‌ ಘಟಕದ ಅಧ್ಯಕ್ಷರು ಮಲಪ್ರಭಾ ನದಿ ಜೋಡಣೆ ವಿಷಯದಲ್ಲಿ ಪ್ರತಿರೋಧ ವ್ಯಕ್ತಪಡಿಸಿದ್ದಾರೆ. ಮೇಕೆದಾಟು ಯೋಜನೆಗಾಗಿ ರಾಜ್ಯ ಸರಕಾರ ತಕ್ಷಣ ಕ್ರಮ ಕೈಗೊಂಡಿತು. ಆದರೆ ಮಹದಾಯಿ ವಿಷಯದಲ್ಲಿ ಇಚ್ಛಾ ಶಕ್ತಿ ಪ್ರದರ್ಶಿಸುತ್ತಿಲ್ಲ. ರಾಜ್ಯ ಸರಕಾರ ಮಲತಾಯಿ ಧೋರಣೆ ಬಿಟ್ಟು ತಕ್ಷಣ ಯೋಜನೆ ಪೂರ್ಣಗೊಳಿಸಲು ಮುಂದಾಗಬೇಕು. ಉತ್ತರ ಕರ್ನಾಟಕದ ಜನತೆಗೆ 7 ಟಿಎಂಸಿ ನೀರು ಒದಗಿಸಿದರೆ ಬರದ ಸಮಸ್ಯೆ ನೀಗುತ್ತದೆ' ಎಂದು ಆಗ್ರಹಿಸಲಾಗಿದೆ. ಸಂಘಟನೆಯ ರಾಜ್ಯ ಉಪಾಧ್ಯಕ್ಷ ಪರಶುರಾಮ ಗಡದಿನ್ನಿ, ಮುಖಂಡರಾದ ಬಸವರಾಜ ಹೊನ್ನಳ್ಳಿ, ಪ್ರಶಾಂತ ನಾಟೀಕಾರ, ರಾಜು ನಾಯಕ, ಶಿವಕುಮಾರ ಜಾಲಗಾರ, ಬಸವರಾಜ ಬಿಚ್ಚೇಲಿ, ಮೋಹನ ಗೋಣಿ, ಬಾಬು ಇಟಗಿ ಮನವಿ ಸಲ್ಲಿಸಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ