Please enable javascript.ಚರಂಡಿ ದುರಸ್ತಿಗೆ ಆಗ್ರಹ - ಚರಂಡಿ ದುರಸ್ತಿಗೆ ಆಗ್ರಹ - Vijay Karnataka

ಚರಂಡಿ ದುರಸ್ತಿಗೆ ಆಗ್ರಹ

Vijaya Karnataka Web 22 May 2015, 8:57 pm
Subscribe

ಬನಹಟ್ಟಿಯ 1 ನೇ ವಾರ್ಡ್‌ನ ಮುಲ್ಲಾ ಗಲ್ಲಿಯ ಬೃಹತ್ ಚರಂಡಿ ಸ್ವಚ್ಛಗೊಳಿಸಬೇಕು ಎಂದು ಅಲ್ಲಿನ ನಿವಾಸಿಗಳು ಆಗ್ರಹಿಸಿದ್ದಾರೆ.

ಚರಂಡಿ ದುರಸ್ತಿಗೆ ಆಗ್ರಹ
ರಬಕವಿ/ಬನಹಟ್ಟಿ : ಬನಹಟ್ಟಿಯ 1 ನೇ ವಾರ್ಡ್‌ನ ಮುಲ್ಲಾ ಗಲ್ಲಿಯ ಬೃಹತ್ ಚರಂಡಿ ಸ್ವಚ್ಛಗೊಳಿಸಬೇಕು ಎಂದು ಅಲ್ಲಿನ ನಿವಾಸಿಗಳು ಆಗ್ರಹಿಸಿದ್ದಾರೆ.

ಚರಂಡಿಯನ್ನು 30 ವರ್ಷದಿಂದ ಸ್ವಚ್ಛಗೊಳಿಸಿಲ್ಲ. ಇದರಿಂದ ಮಳೆಗಾಲದಲ್ಲಿ ಮನೆಯೊಳಗೆ ನೀರು ನುಗ್ಗಿ ದುರ್ವಾಸನೆ ಬೀರುತ್ತಿದೆ. ಅಲ್ಲದೇ ಅನಾರೋಗ್ಯಕ್ಕೂ ಕಾರಣವಾಗಿದೆ. ನಗರದಲ್ಲಿ ಅನೇಕ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳಲಾಗುತ್ತಿದೆ. ಆದರೆ ಈ ಬೃಹತ್ ಚರಂಡಿ ಕಾಮಗಾರಿ ಕೈಗೊಳ್ಳುತ್ತಿಲ್ಲ. ಈ ಕುರಿತು ಹಲವು ಬಾರಿ ನಗರಸಭೆ ಅಧಿಕಾರಿಗಳಿಗೆ ಮನವಿ ಸಲ್ಲಿಸಲಾಗಿದೆ. ಆದರೂ ಕ್ರಮ ಕೈಗೊಳ್ಳದೇ ಹಾರಿಕೆ ಉತ್ತರ ನೀಡುತ್ತಿದ್ದಾರೆ ಎಂದು ನಿವಾಸಿ ಬಸಪ್ಪ ಕೊಣ್ಣೂರ ಸೇರಿದಂತೆ ಇತರರು ದೂರಿದ್ದಾರೆ.

ಕೂಡಲೇ ಚರಂಡಿ ದುರಸ್ತಿಗೆ ಕ್ರಮ ಕೈಗೊಳ್ಳಬೇಕು. ಇಲ್ಲದಿದ್ದರೆ ರಸ್ತೆ ಬಂದ್ ಮಾಡಿ ಹೋರಾಟ ಮಾಡಲಾಗುವುದು ಎಂದು ಎಚ್ಚರಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ