Please enable javascript.ಕಾಲೇಜು ವಾರ್ಷಿಕೋತ್ಸವಕ್ಕೆ ಚಾಲನೆ - College annual day - Vijay Karnataka

ಕಾಲೇಜು ವಾರ್ಷಿಕೋತ್ಸವಕ್ಕೆ ಚಾಲನೆ

ವಿಕ ಸುದ್ದಿಲೋಕ 30 Apr 2015, 6:34 am
Subscribe

ಸರಳಾದೇವಿ ಸತೀಶ್ಚಂದ್ರ ಅಗರವಾಲ್ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಹಮ್ಮಿಕೊಂಡಿದ್ದ ಕಾಲೇಜು ವಾರ್ಷಿಕೋತ್ಸವ ಸಮಾರಂಭ ಬುಧವಾರ ನಡೆಯಿತು. ಮಹಾನಗರ ಪಾಲಿಕೆಯ ಮಹಾಪೌರರಾದ ನಾಗಮ್ಮ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಅಧ್ಯಕ್ಷತೆ ವಹಿಸಿದ್ದ ಪ್ರಾಂಶುಪಾಲರಾದ ಪ್ರೊ.ಎ.ಹೇಮಣ್ಣ ಮಾತನಾಡಿದರು.

college annual day
ಕಾಲೇಜು ವಾರ್ಷಿಕೋತ್ಸವಕ್ಕೆ ಚಾಲನೆ
ಬಳ್ಳಾರಿ; ಸರಳಾದೇವಿ ಸತೀಶ್ಚಂದ್ರ ಅಗರವಾಲ್ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಹಮ್ಮಿಕೊಂಡಿದ್ದ ಕಾಲೇಜು ವಾರ್ಷಿಕೋತ್ಸವ ಸಮಾರಂಭ ಬುಧವಾರ ನಡೆಯಿತು. ಮಹಾನಗರ ಪಾಲಿಕೆಯ ಮಹಾಪೌರರಾದ ನಾಗಮ್ಮ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಅಧ್ಯಕ್ಷತೆ ವಹಿಸಿದ್ದ ಪ್ರಾಂಶುಪಾಲರಾದ ಪ್ರೊ.ಎ.ಹೇಮಣ್ಣ ಮಾತನಾಡಿದರು.

ಲೇಖಕ ಇಂದುಮತಿ ಸಾಲಿಮಠ, ಹಾಸ್ಯ ಚಾಟಕಿ ಹಾರಿಸಿದರು. ಕಾಲೇಜಿನ ವಾರ್ಷಿಕ ವರದಿಯನ್ನು ಸಿ.ಎಚ್.ಸೋಮನಾಥ, ಡಾ.ಬಿ.ಸರೋಜಾ ವಾಚಿಸಿದರು. ಕಾಲೇಜು ಅಭಿವದ್ಧಿ ಸಮಿತಿಯ ಸದಸ್ಯರುಗಳಾದ ಸಿದ್ಮಲ್ ಮಂಜುನಾಥ,ಮಹಮ್ಮದ್ ನಯೂಮ್, ಎ.ಮಾನಯ್ಯ, ಗಣಿತಶಾಸ್ತ್ರ ವಿಭಾಗದ ಮುಖ್ಯಸ್ಥ ನಾಗರಾಜ ಇದ್ದರು.

ಬಯಲಾಟ ಕಲಾವಿದೆ ಬಿ.ಸುಜಾತಮ್ಮ, ಕಚೇರಿ ಅಧೀಕ್ಷಕರಾಗಿ ಇತ್ತೀಚೆಗೆ ನಿವತ್ತರಾದ ಗಿರಿಸ್ವಾಮಿ ಇವರನ್ನು ಸನ್ಮಾನಿಸಲಾಯಿತು. ಎಂ.ಕಾಂನಲ್ಲಿ ಸ್ವರ್ಣ ಪದಕ ಗಳಿಸಿದ ಕಾಲೇಜಿನ ವಿದ್ಯಾರ್ಥಿನಿ ಪೋನಂಕೌರ್ ರಾಥೋಡ್, ಅರ್ಥಶಾಸ್ತ್ರದಲ್ಲಿ ಪ್ರಥಮ ರ‌್ಯಾಂಕ್ ಪಡೆದ ಕೆ.ನೀತು, ದ್ವಿತೀಯ ಕಮಲಾ ಇವರನ್ನು ಸನ್ಮಾನಿಸಲಾಯಿತು. ಆರ್.ಎಂ.ಶ್ರೀದೇವಿ ಮಾತನಾಡಿದರು. ಡಾ.ಬಿ.ಜಿ.ಕಲಾವತಿ ಮತ್ತು ಮಧುಸೂದನ, ಕೆ.ಎನ್.ರಾಮಾಂಜನೇಯ, ಕೆ.ನಾಗೇಂದ್ರಪ್ಪ ನಿರ್ವಹಿಸಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ