ಆನೇಕಲ್ ಬಳಿಯ 60ಕ್ಕೂ ಹೆಚ್ಚು ಪಿಯು ವಿದ್ಯಾರ್ಥಿನಿಯರಿಗೆ ಕೊರೊನಾ ಸೋಂಕು!

ಆನೇಕಲ್ ಬಳಿಯ ಶ್ರೀ ಚೈತನ್ಯ ಶಿಕ್ಷಣ ಸಂಸ್ಥೆಯ 60ಕ್ಕೂ ಹೆಚ್ಚು ಪಿಯು ವಿದ್ಯಾರ್ಥಿನಿಯರು ಕೊರೊನಾ ವೈರಸ್ ಸೋಂಕಿಗೆ ತುತ್ತಾಗಿದ್ದಾರೆ. ಈ ಕಾಲೇಜಿನಲ್ಲಿ ಒಟ್ಟು 480 ವಿದ್ಯಾರ್ಥಿಗಳಿದ್ದಾರೆ ಹಾಗೂ 55ಕ್ಕೂ ಹೆಚ್ಚು ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ ಇದ್ದಾರೆ.ಭಾನುವಾರ ಈ ಕಾಲೇಜಿನ ವಿದ್ಯಾರ್ಥಿನಿಯೋರ್ವಳು ವಾಂತಿ ಹಾಗೂ ಭೇದಿಯಿಂದ ಬಳಲುತ್ತಿದ್ದಳು.

ಈ ವೇಳೆ ಆಕೆಯನ್ನು ಕೊರೊನಾ ಪರೀಕ್ಷೆಗೆ ಒಳಪಡಿಸಿದಾಗ ಕೋವಿಡ್ ಸೋಂಕು ದೃಢಪಟ್ಟಿತ್ತು. ಸೋಮವಾರ ಆರ್‌ಟಿಪಿಸಿಆರ್‌ ಪರೀಕ್ಷೆಯ ಮೂಲಕವೂ ಆಕೆಗೆ ಕೊರೊನಾ ಸೋಂಕು ಇರೋದನ್ನು ದೃಢಪಡಿಸಿಕೊಳ್ಳಲಾಯ್ತು.ವಿಷಯ ತಿಳಿದ ಕೂಡಲೇ ಆಸ್ಪತ್ರೆ ಸಿಬ್ಬಂದಿ ಕಾಲೇಜಿಗೆ ಧಾವಿಸಿ ಶಿಕ್ಷಣ ಸಂಸ್ಥೆಯಲ್ಲಿ ಇರುವ ಪ್ರತಿಯೊಬ್ಬರನ್ನೂ ಪರೀಕ್ಷೆಗೆ ಒಳಪಡಿಸಿತು.

ಬೆಂಗಳೂರಿನ ಕಾಲೇಜ್‌ನಲ್ಲಿ ಕೋವಿಡ್ ಸ್ಫೋಟ..! 60 ವಿದ್ಯಾರ್ಥಿನಿಯರಿಗೆ ಸೋಂಕು..!

ಈ ವೇಳೆ 60 ವಿದ್ಯಾರ್ಥಿಗಳಲ್ಲಿ ಸೋಂಕು ಪತ್ತೆಯಾಗಿದೆ ಎಂದು ಬೆಂಗಳೂರು ನಗರ ಜಿಲ್ಲಾ ಡೆಪ್ಯುಟಿ ಕಮೀಷನರ್ ಜೆ ಮಂಜುನಾಥ್ ತಿಳಿಸಿದ್ದಾರೆ.ಇದೀಗ ಪತ್ತೆಯಾಗಿರುವ 60 ಪ್ರಕರಣಗಳಲ್ಲಿ ಇಬ್ಬರಿಗೆ ಮಾತ್ರ ಸೋಂಕಿನ ಲಕ್ಷಣಗಳಿವೆ. ಮಿಕ್ಕ 58 ಮಂದಿಗೆ ಯಾವುದೇ ಸೋಂಕಿನ ಲಕ್ಷಣ ಇಲ್ಲ. ಒಟ್ಟು 60 ಸೋಂಕಿತ ವಿದ್ಯಾರ್ಥಿಗಳ ಪೈಕಿ 14 ವಿದ್ಯಾರ್ಥಿಗಳು ತಮಿಳುನಾಡು ಮೂಲದವರು. ಮಿಕ್ಕವರು ಕರ್ನಾಟಕದ ವಿವಿಧ ಜಿಲ್ಲೆಗಳ ವಿದ್ಯಾರ್ಥಿನಿಯರು ಎಂದು ಮಾಹಿತಿ ಲಭ್ಯವಾಗಿದೆ.

Vijaya Karnataka Web 29 Sep 2021, 2:16 pm
Loading ...