ಆ್ಯಪ್ನಗರ

ಹಾಸನ ಪೆನ್ ಡ್ರೈವ್ ಕೇಸ್: ಎಸ್‌ಐಟಿ ಹೆಲ್ಪ್ ಲೈನ್ ಗೆ ಬರ್ತಿವೆ ನೂರಾರು ಕರೆಗಳು!

Hassan Pen Drive Case: ಹಾಸನ ಸಂಸದ ಪ್ರಜ್ವಲ್ ರೇವಣ್ಣ ಪೆನ್‌ಡ್ರೈವ್ ಪ್ರಕರಣಕ್ಕೆ ಸಂಬಂಧಿಸಿದಂತೆ ದೂರು ನೀಡಲು ಸಂತ್ರಸ್ತ ಮಹಿಳೆ ಭಯಪಡುತ್ತಿದ್ದಾರೆ. ತಮಗಾದ ಅನ್ಯಾಯವನ್ನು ಹೇಳಿಕೊಳ್ಳಲು ಮುಂದೆ ಬರುತ್ತಿಲ್ಲ. ಪ್ರಭಾವಿಗಳನ್ನು ಎದುರು ಹಾಕಿಕೊಳ್ಳುವುದು ಹೇಗೆ? ಎಂಬ ಭಯದಲ್ಲಿದ್ದಾರೆ. ತನಿಖೆಯ ಸಂದರ್ಭದಲ್ಲಿ ಈ ಘಟನೆಗೆ ಸಂಬಂಧಿಸಿದಂತೆ ಇನ್ನಷ್ಟು ಸಂತ್ರಸ್ತರು ಇರುವುದು ತಿಳಿದು ಬಂದಿದೆ. ಹೀಗಾಗಿ ರಾಜ್ಯ ಸರ್ಕಾರ ಎಸ್ ಐ ಟಿ ರಚನೆಯ ಬೆನ್ನಲ್ಲೇ ಹೆಲ್ಪ್ ಲೈನ್ ಕೂಡಾ ಆರಂಭಿಸಿದೆ. ಈ ಹೆಲ್ಪ್‌ಲೈನ್‌ಗೆ ನೂರಾರು ಕರೆಗಳು ಬರುತ್ತಿವೆ.

ಹೈಲೈಟ್ಸ್‌:

  • ಹಾಸನ ಪೆನ್ ಡ್ರೈವ್ ಪ್ರಕರಣ: ರಾಜ್ಯ ಸರ್ಕಾರದಿಂದ ಹೆಲ್ಪ್ ಲೈನ್ ಆರಂಭ
  • ಹೆಲ್ಪ್ ಲೈನ್ ಗೆ ನಿತ್ಯ ನೂರಾರು ಕರೆಗಳು ಬರುತ್ತಿವೆ
  • ಕರೆ ಮಾಡಿದ ಸಂತ್ರಸ್ತರ ಅಥವಾ ಬಾತ್ಮೀದಾರರ ವಿವರಗಳನ್ನು ಗುಪ್ತವಾಗಿಡಲಾಗಿದೆ
ಹೈಲೈಟ್ಸ್‌ ಮಾತ್ರವೇ ಓದಲು ಆ್ಯಪ್‌ ಡೌನ್‌ಲೋಡ್‌ ಮಾಡಿ
Vijaya Karnataka Web ಎಚ್‌ಡಿ ರೇವಣ್ಣ ಹಾಗೂ ಪ್ರಜ್ವಲ್‌ ರೇವಣ್ಣ
ಎಚ್‌ಡಿ ರೇವಣ್ಣ ಹಾಗೂ ಪ್ರಜ್ವಲ್‌ ರೇವಣ್ಣ
ಬೆಂಗಳೂರು: ಹಾಸನ ಪೆನ್ ಡ್ರೈವ್ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಎಸ್ ಐ ಟಿ ರಚನೆಯ ಬೆನ್ನಲ್ಲೇ ಹೆಲ್ಪ್ ಲೈನ್ ಕೂಡಾ ಆರಂಭಿಸಿದೆ. ಸಂತ್ರಸ್ತರಿಗೆ ಮುಕ್ತವಾಗಿ ತಮಗಾದ ಅನ್ಯಾಯವನ್ನು ಹಂಚಿಕೊಳ್ಳುವ ನಿಟ್ಟಿನಲ್ಲಿ ಹೆಲ್ಪ್ ಲೈನ್ ಆರಂಭಿಸಿದೆ. ಹೆಲ್ಪ್ ಲೈನ್ ಗೆ ನಿತ್ಯ ನೂರಾರು ಕರೆಗಳು ಬರುತ್ತಿವೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ ಐ ಟಿ ರಚನೆ ಮಾಡಿದರೂ ದೂರು ಕೊಡಲು ಯಾರೂ ಮುಂದಾಗುತ್ತಿಲ್ಲ. ಈಗಾಗಲೇ ಓರ್ವ ಸಂತ್ರಸ್ತ ಮಹಿಳೆ ಕೊಟ್ಟ ದೂರಿನ ಆಧಾರದಲ್ಲಿ ಎಚ್ ಡಿ ರೇವಣ್ಣ ಹಾಗೂ ಪ್ರಜ್ವಲ್ ರೇವಣ್ಣ ವಿರುದ್ಧ ಎಫ್ ಐ ಆರ್ ದಾಖಲಾಗಿದೆ. ಇನ್ನು ಕೆ ಆರ್ ನಗರದಲ್ಲಿ ಮಹಿಳೆಯ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಎಚ್ ಡಿ ರೇವಣ್ಣ ಬಂಧನ ಆಗಿದೆ.

ಇದರ ಹೊರತಾಗಿ ಪ್ರಕರಣದಲ್ಲಿ ಹಲವು ಮಹಿಳೆಯರು ಸಂತ್ರಸ್ತರಾದರೂ ಅವರು ಯಾರೂ ದೂರು ಕೊಡಲು ಮುಂದಾಗುತ್ತಿಲ್ಲ. ಈ ನಿಟ್ಟಿನಲ್ಲಿ ಎಸ್ ಐ ಟಿ ಹೆಲ್ಪ್ ಲೈನ್ ಆರಂಭಿಸಿತ್ತು. ಇದೀಗ ಕೆಲವು ಸಂತ್ರಸ್ತರು ಹಾಗೂ ಮಾಹಿತಿದಾರರು ಎಸ್ ಐ ಟಿಗೆ ಕರೆ ಮಾಡಿ ಮಾಹಿತಿ ಹಂಚಿಕೊಳ್ಳುತ್ತಿದ್ದಾರೆ.

ಎಸ್‌ಐಟಿ ವಶದಲ್ಲಿ ಎಚ್‌ಡಿ ರೇವಣ್ಣ, ಮುಂದೆ ಏನಾಗಲಿದೆ? ಕಾನೂನು ಪ್ರಕ್ರಿಯೆಗಳೇನು?

ಎಸ್ ಐ ಟಿ ಹೆಲ್ಪ್ ಲೈನ್ ಗೆ ಹಲವರ ಸ್ಪಂದನೆ!

ಸಂತ್ರಸ್ತರು ಅಥವಾ ಬಾತ್ಮೀದಾರರಿಗೆ ಕಾನೂನಿನ ನೆರವು ಮತ್ತು ರಕ್ಷಣೆ ಹಾಗೂ ಇನ್ನಿತರ ಯಾವುದೇ ಸಹಾಯ ಬೇಕಾದಲ್ಲಿ ಕರೆ ಮಾಡಲು ಎಸ್ ಐ ಟಿ ಹೆಲ್ಪ್ ಲೈನ್ ನಂಬರ್ 6360938947 ನೀಡಿತ್ತು. ಕರೆ ಮಾಡಿದ ಸಂತ್ರಸ್ತರ ಅಥವಾ ಬಾತ್ಮೀದಾರರ ವಿವರಗಳನ್ನು ಗುಪ್ತವಾಗಿಡಲಾಗುವುದು ಎಂದು ತಿಳಿಸಲಾಗಿತ್ತು.

ಈ ಹಿನ್ನೆಲೆಯಲ್ಲಿ ಈ ಹೆಲ್ಪ್ ಲೈನ್ ಗೆ ಸಾಕಷ್ಟು ಕರೆಗಳು ಬರುತ್ತಿವೆ ಎಂಬ ಮಾಹಿತಿ ಸಿಗುತ್ತಿದೆ. ಬಂದ ಕರೆಗಳನ್ನು ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ. ಕರೆ ಮಾಡಿದ ಮಾಹಿತಿದಾರರು ಹಾಗೂ ಸಂತ್ರಸ್ತರ ಮಾಹಿತಿಗಳನ್ನು ಪರಿಶೀಲನೆ ಮಾಡಲಾಗುತ್ತಿದೆ. ಸತ್ಯಾಸತ್ಯತೆಯ ಆಧಾರದಲ್ಲಿ ಮುಂದಿನ ಕ್ರಮ ಕೈಗೊಳ್ಳಲಾಗುತ್ತದೆ‌.

ಪೆನ್ ಡ್ರೈವ್ ಕೇಸ್: ಸಂತ್ರಸ್ತರ ಮುಂದಿರೋ ಅವಕಾಶಗಳೇನು? ಡಿಎನ್‌ಎ, ಡಿಜಿಟಲ್ ಸಾಕ್ಷಿ ಮಹತ್ವವೇನು? ಕಾನೂನು ತಜ್ಞರು ಏನನ್ನುತ್ತಾರೆ?
ಹಾಸನ ಪೆನ್ ಡ್ರೈವ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಸದ ಪ್ರಜ್ವಲ್ ರೇವಣ್ಣ ವಿದೇಶದಲ್ಲಿದ್ದಾರೆ. ಅವರನ್ನು ದೇಶಕ್ಕೆ ಕರೆತರುವ ನಿಟ್ಟಿನಲ್ಲಿ ಲುಕ್ ಔಟ್ ನೋಟಿಸ್ ಹೊರಡಿಸಲಾಗಿದೆ. ಇನ್ನು ಕೆ ಆರ್ ನಗರದಲ್ಲಿ ದಾಖಲಾದ ಕಿಡ್ನಾಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ಎಚ್ ಡಿ ರೇವಣ್ಣ ಅವರನ್ನು ಎಸ್ ಐ ಟಿ ಬಂಧಿಸಿದೆ.
ಲೇಖಕರ ಬಗ್ಗೆ
ಇರ್ಷಾದ್ ಉಪ್ಪಿನಂಗಡಿ
ವಿಜಯ ಕರ್ನಾಟಕ ಡಿಜಿಟಲ್ ವಿಭಾಗದಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದಾರೆ. ದೃಶ್ಯ ಹಾಗೂ ಡಿಜಿಟಲ್ ಮಾಧ್ಯಮ ವರದಿಗಾರಿಕೆಯಲ್ಲಿ 12 ವರ್ಷಗಳ ಅನುಭವ ಹೊಂದಿದ್ದಾರೆ. ಸಿನಿಮಾ ನೋಡುವುದು, ಪುಸ್ತಕ ಓದುವುದು, ಸಮಯ ಸಿಕ್ಕಾಗ ಸುತ್ತಾಟ ಹವ್ಯಾಸಗಳು.... ಇನ್ನಷ್ಟು ಓದಿ

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ