ಆ್ಯಪ್ನಗರ

ರಾಜಕೀಯದಲ್ಲಿ ಮಹಿಳೆಯರಿಗೆ ಸಿಗಲಿ ಮೀಸಲು

ಉತ್ತಮ ಜೀವನಕ್ಕೆ ಆರೋಗ್ಯವಂತವಾಗಿರುವುದು ಮುಖ್ಯವಾಗಿದೆ. ಈ ನಿಟ್ಟಿನಲ್ಲಿ ಆರೋಗ್ಯ ಇಲಾಖೆ ಸಹಾಯಕಿಯರು ಮತ್ತು ಮೇಲ್ವಿಚಾರಕರ ಗ್ರಾಮೀಣ ಭಾಗದಲ್ಲಿ ಉತ್ತಮವಾಗಿ ಸೇವೆ ಸಲ್ಲಿಸುತ್ತಿರುವುದು ಸಂತೋಷದ ವಿಷಯ ಎಂದು ಜಿಪಂ ಅಧ್ಯಕ್ಷೆ ಭಾರತಿಬಾಯಿ ಸೇರಿಕಾರ್‌ ಹೇಳಿದರು.

Vijaya Karnataka 18 Feb 2018, 4:25 pm

ಬೀದರ್‌: ಉತ್ತಮ ಜೀವನಕ್ಕೆ ಆರೋಗ್ಯವಂತವಾಗಿರುವುದು ಮುಖ್ಯವಾಗಿದೆ. ಈ ನಿಟ್ಟಿನಲ್ಲಿ ಆರೋಗ್ಯ ಇಲಾಖೆ ಸಹಾಯಕಿಯರು ಮತ್ತು ಮೇಲ್ವಿಚಾರಕರ ಗ್ರಾಮೀಣ ಭಾಗದಲ್ಲಿ ಉತ್ತಮವಾಗಿ ಸೇವೆ ಸಲ್ಲಿಸುತ್ತಿರುವುದು ಸಂತೋಷದ ವಿಷಯ ಎಂದು ಜಿಪಂ ಅಧ್ಯಕ್ಷೆ ಭಾರತಿಬಾಯಿ ಸೇರಿಕಾರ್‌ ಹೇಳಿದರು.

ನಗರದ ಸರಕಾರಿ ಭವನದಲ್ಲಿ ಶನಿವಾರ ನಡೆದ ರಾಜ್ಯ ಆರೋಗ್ಯ ಸಹಾಯಕರ ಮತ್ತು ಮೇಲ್ವಿಚಾರಕರ ಕೇಂದ್ರ ಸಂಘದ ಜಿಲ್ಲಾ ಮಟ್ಟದ ಸಮ್ಮೇಳನದಲ್ಲಿ ಮಾತನಾಡಿ, ತಮ್ಮ ಸಮಸ್ಯೆಯನ್ನು ಬಗೆಹರಿಸುವಲ್ಲಿ ಜಿಪಂ ಹಾಗೂ ಜಿಲ್ಲಾಧಿಕಾರಿಗಳು ಪ್ರಾಮಾಣಿಕ ಪ್ರಯತ್ನ ಮಾಡುವುದಾಗಿ ಭರವಸೆ ನೀಡಿದರು.

ಮಹಿಳೆಯರು ಪುರುಷ ಪ್ರಧಾನ ವ್ಯವಸ್ಥೆಯಿಂದ ಬಿಡುಗಡೆ ಹೊಂದಬೇಕು. ಅಂದಾಗ ಮಾತ್ರ ಸ್ವತಂತ್ರವಾಗಿ ನಮ್ಮ ಹಕ್ಕು ಚಲಾಯಿಸಲು ಸಾಧ್ಯವಾಗುತ್ತದೆ ಎಂದು ಜನವಾದಿ ಮಹಿಳಾ ಸಂಘಟನೆಯ ರಾಜ್ಯ ಉಪಾಧ್ಯಕ್ಷೆ ನೀಲಾ ಕೆ. ತಿಳಿಸಿದರು.

ಆರೋಗ್ಯ ಇಲಾಖೆಯಲ್ಲಿ ಸಾಕಷ್ಟು ಮಹಿಳೆಯರು, ಸಹಾಯಕರು ಮತ್ತು ಮೇಲ್ವಿಚಾರಕರಾಗಿ ಕೆಲಸ ಮಾಡುತ್ತಿದ್ದಾರೆ. ಆದರೆ ಅವರಿಗೆ ಯಾವುದೆ, ಭದ್ರತೆ ಇಲ್ಲ ಹಾಗೂ ಉತ್ತಮವಾದ ಸಂಬಳ ಇಲ್ಲದಿರುವುದು ಆತಂಕಕಾರಿ ವಿಷಯ. ಮಹಿಳೆಯರಿಗೆ ರಾಜಕೀಯ ಸೇರಿದಂತೆ ಪ್ರತಿಯೊಂದು ಕ್ಷೇತ್ರದಲ್ಲಿ ಶೇ.50 ಮೀಸಲಾತಿ ನೀಡಬೇಕು ಎಂದು ಸರಕಾರಕ್ಕೆ ಒತ್ತಾಯಿಸಿದರು.

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ವೈದ್ಯಕೀಯ ಶಿಕ್ಷ ಣ ಇಲಾಖೆ ನೌಕರರ ಸಂಘದ ಜಿಲ್ಲಾಧ್ಯಕ್ಷ ರಾಜಕುಮಾರ ಮಾಳಗೆ ಮಾತನಾಡಿ, ಸಂಬಳ ತಾರತಮ್ಯ ನಿವಾರಣೆ ಮಾಡಬೇಕು, ಇಲಾಖೆ ವರ್ಗಾವಣೆಗಳು ಜಿಲ್ಲಾ ಮಟ್ಟದಲ್ಲಿ ಮಾಡಬೇಕು ಮತ್ತು ಶೇ.35 ರಷ್ಟು ಸಂಬಳ ಹೆಚ್ಚಿಗೆ ಮಾಡುವಂತೆ ಸರಕಾರದ ಮೇಲೆ ಒತ್ತಡ ಹೆರಬೇಕು ಎಂದು ಸಂಘದ ರಾಜ್ಯಾಧ್ಯಕ್ಷ ಕೆ.ಪ್ರಕಾಶ ಅವರಿಗೆ ಮನವಿ ಮಾಡಿದರು.

ಸಂಘದ ಜಿಲ್ಲಾ ಪ್ರಧಾನ ಕಾರ‍್ಯದರ್ಶಿ ಶಿವಾನಂದ ಹಿರೇಮಠ ಪ್ರಾಸ್ತಾವಿಕವಾಗಿ ಮಾತನಾಡಿ, ಸಹಾಯಕರು ಮತ್ತು ಮೇಲ್ವಿಚಾರಕ ಸಾಕಷ್ಟು ಸಮಸ್ಯೆಗಳನ್ನು ಎದುರಿಸುವಂತಾಗಿದೆ. ಗ್ರಾಮೀಣ ಪ್ರದೇಶಕ್ಕೆ ಭೇಟಿ ನೀಡಿದಾಗ ಭತ್ಯ ನೀಡಬೇಕು, ಆರೋಗ್ಯ ಕೇಂದ್ರದಲ್ಲಿ ಹಿರಿಯ ಮತ್ತು ಕಿರಿಯ ಸಹಾಯಕರನ್ನು ನೇಮಕ ಮಾಡಿಕೊಳ್ಳಬೇಕು ಎಂದರು.

ಜಿಲ್ಲಾ ಆರೋಗ್ಯ ಅಧಿಕಾಡಿ ಡಾ. ಜಬ್ಬಾರ ಮಾತನಾಡಿದರು. ಸಂಘದ ಜಿಲ್ಲಾಧ್ಯಕ್ಷೆ ಶಕುಂತಲಾ ದಂಡಿ ಅಧ್ಯಕ್ಷ ತೆ ವಹಿಸಿದ್ದರು.

ಜಿಲ್ಲಾ ಶಸ್ತ್ರ ಚಿಕಿತ್ಸಕ ಸಿ.ಎಸ್‌.ರಗಟೆ, ಸಂಘದ ಗೌರವಾಧ್ಯಕ್ಷ ಪರಮರೆಡ್ಡಿ ಕಂದಕುರ, ವೈದ್ಯಾಧಿಕಾರಿಗಳ ಸಂಘದ ರಾಜ್ಯ ಜಂಟಿ ಕಾರ‍್ಯದರ್ಶಿ ಡಾ. ಕಿರಣ ಎಂ.ಪಾಟೀಲ್‌, ರಾಜ್ಯ ಸರಕಾರ ನೌಕರರ ಸಂಘದ ಜಿಲ್ಲಾಧ್ಯಕ್ಷ ರಾಜೇಂದ್ರ ಗಂದಗೆ, ಡಾ. ಇಂದುಮತಿ ಪಾಟೀಲ್‌, ದೀಪಾ ಖಂಡ್ರೆ, ಡಾ. ಶಿವಶಂಕರ, ಡಾ. ಅನಿಲ ಚಿಂತಾಮಣಿ, ಡಾ. ರವಿ ಸಿರ್ಸೆ, ಡಾ. ಪ್ರವೀಣಕುಮಾರ ಹೂಗಾರ ಮತ್ತಿತರರು ಇದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ