ಆ್ಯಪ್ನಗರ

ನಾಮಫಲಕ ಕಡ್ಡಾಯವಾಗಿ ಅಳವಡಿಸಿ

ಜಿಲ್ಲಾ ತಂಬಾಕು ನಿಷೇಧ ಕೋಶ ಪ್ರಗತಿ ಪರಿಶೀಲನಾ ಸಭೆಯಲ್ಲಿ ಎಡಿಸಿ ಸೂಚನೆ ವಿಕ ಸುದ್ದಿಲೋಕ ಚಾಮರಾಜನಗರ ಸಾರ್ವಜನಿಕ ಸ್ಥಳಗಳಲ್ಲಿ ತಂಬಾಕು ಸೇವನೆ ನಿಷೇಧ ನಾಮ ಫಲಕಗಳನ್ನು ...

ವಿಕ ಸುದ್ದಿಲೋಕ 16 Feb 2017, 9:00 am

ಚಾಮರಾಜನಗರ: ಸಾರ್ವಜನಿಕ ಸ್ಥಳಗಳಲ್ಲಿ ತಂಬಾಕು ಸೇವನೆ ನಿಷೇಧ ನಾಮ ಫಲಕಗಳನ್ನು ಕಡ್ಡಾಯವಾಗಿ ಅಳವಡಿಸಲು ನಗರಸಭೆ, ಪುರಸಭೆ ಹಾಗೂ ಸ್ಥಳೀಯ ಸಂಸ್ಥೆಗಳು ಅಗತ್ಯ ಕ್ರಮಕೈಗೊಳ್ಳಬೇಕು ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಡಿ.ಭಾರತಿ ಸೂಚಿಸಿದರು.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ 'ಜಿಲ್ಲಾ ತಂಬಾಕು ನಿಷೇಧ ಕೋಶ ಪ್ರಗತಿ ಪರಿಶೀಲನಾ ಸಭೆ ಅಧ್ಯಕ್ಷ ತೆ ವಹಿಸಿ ಮಾತನಾಡಿದರು.

ನಾನಾ ಕಡೆ ತಂಬಾಕು ನಿಷೇಧ ಕುರಿತ ಫಲಕಗಳನ್ನು ಅಳವಡಿಸದೇ ಇರುವ ಬಗ್ಗೆ ಜಿಲ್ಲಾಡಳಿತದ ಗಮನಕ್ಕೆ ಬಂದಿದೆ. ತಂಬಾಕು ಸೇವನೆಯಿಂದ ಆರೋಗ್ಯದ ಮೇಲೆ ಉಂಟಾಗುವ ಪರಿಣಾಮಗಳನ್ನು ತಿಳಿಸುವ ಅಂಶಗಳನ್ನು ಒಳಗೊಂಡಂತೆ ಚಲನಚಿತ್ರ ಮಂದಿರ, ಹೋಟೆಲ್‌, ಬಾರ್‌ ಇನ್ನಿತರ ಸಾರ್ವಜನಿಕ ಸ್ಥಳಗಳಲ್ಲಿ ತಂಬಾಕು ಸೇವನೆ ನಿಷೇಧಿಸಿರುವ ಬಗ್ಗೆ ಪ್ರಧಾನವಾಗಿ ಫಲಕಗಳನ್ನು ಕಡ್ಡಾಯವಾಗಿ ಹಾಕಬೇಕು.

ತಂಬಾಕು ಉತ್ಪನ್ನ ಮಾರಾಟ ಮಾಡುವ ಮಾಲೀಕರಿಗೆ ಕೋಟ್ಪಾ ಕಾಯ್ದೆ 2003ರ ಪ್ರಕಾರ ಟ್ರೇಡ್‌ ಲೈಸೆನ್ಸ್‌ ರದ್ದುಪಡಿಸುವ ಹಾಗೂ ಸಂಬಂಧಪಟ್ಟ ಇಲಾಖೆಗಳಿಂದ ವ್ಯಾಪಾರ ಮಾಡಲು ಪರವಾನಗಿ ನೀಡುವ ನಿಬಂಧನೆಗಳಲ್ಲಿನ ಕಾಯ್ದೆ ಅಂಶಗಳನ್ನು ಸ್ಪಷ್ಟವಾಗಿ ತಿಳಿಸಬೇಕು. ಜಾರಿಯಲ್ಲಿರುವ ಕಾಯ್ದೆಯು ಪರಿಣಾಮಕಾರಿಯಾಗಿ ಅನುಷ್ಠಾನಗೊಳ್ಳಲು ಅವಶ್ಯಕ ಪ್ರಕ್ರಿಯೆಗಳನ್ನು ಕೈಗೊಳ್ಳಬೇಕು ಎಂದು ನಿರ್ದೇಶನ ನೀಡಿದರು.

ಜಿಲ್ಲೆಯಲ್ಲಿ ತಂಬಾಕು ನಿಯಂತ್ರಣಕ್ಕೆ ಸಂಬಂಧಿಸಿದಂತೆ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆಗಳನ್ನು ಕಾಲಕಾಲಕ್ಕೆ ಆಯೋಜಿಸಿ ವರದಿ ನೀಡಲು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮುಂದಾಗುವಂತೆ ಅವರು ತಿಳಿಸಿದರು.

ನಗರಸಭೆ, ಪುರಸಭೆ ಇನ್ನಿತರ ಸ್ಥಳೀಯ ಸಂಸ್ಥೆಗಳು ಪೊಲೀಸ್‌ ಇಲಾಖೆ ಸಹಕಾರದೊಂದಿಗೆ ಕಾಯ್ದೆ ಅನುಸಾರ ಹೇಗೆ ಪಾಲನೆಯಾಗುತ್ತಿದೆ ಎಂಬ ಬಗ್ಗೆ ಪರಿಶೀಲಿಸಿ ದಾಳಿ ಕಾರ್ಯ ನಡೆಸಬೇಕು. ಕೋಟ್ಪಾ ಕಾಯ್ದೆ ಬಗ್ಗೆ ನಾನಾ ಇಲಾಖೆಗಳು ನಡೆಸುವ ಸಭೆಯಲ್ಲಿಯೂ ಚರ್ಚಿಸಬೇಕು. ಪ್ರತಿ ತಿಂಗಳಲ್ಲಿ ಒಂದು ದಿನ ತಂಬಾಕು ವಿರೋಧಿ ದಿನವನ್ನು ಶಾಲಾ ಮತ್ತು ಕಾಲೇಜುಗಳಲ್ಲಿ ಆಯೋಜಿಸಲು ಕ್ರಮವಹಿಸಬೇಕು ಎಂದು ತಿಳಿಸಿದರು.

ರಾಜ್ಯ ತಂಬಾಕು ನಿಯಂತ್ರಣ ಘಟಕದ ವಿಭಾಗೀಯ ಸಂಯೋಜಕ ಡಾ.ಹನುಮಂತರಾಯಪ್ಪ ಮಾತನಾಡಿ, ಶೈಕ್ಷ ಣಿಕ ಸಂಸ್ಥೆಯ 100 ಅಡಿ ಸುತ್ತಮುತ್ತಲಿನ ಪ್ರದೇಶದಲ್ಲಿ ಗುಲಾಬಿ ಚಳವಳಿ ಮತ್ತು ಕೆಂಪು ಬಣ್ಣದ ಗೆರೆಯನ್ನು ಹಾಕುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳುವ ಮೂಲಕ ತಂಬಾಕು ಸೇವನೆ ನಿಷೇಧದ ಬಗ್ಗೆ ಅರಿವು ಮೂಡಿಸಬಹುದು ಎಂದು ಸಲಹೆ ಮಾಡಿದರು.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಕೆ.ಎಚ್‌.ಪ್ರಸಾದ್‌, ಡಿವೈಎಸ್ಪಿ ಎಸ್‌.ಇ.ಗಂಗಾಧರಸ್ವಾಮಿ, ತಹಸೀಲ್ದಾರ್‌ ಚಂದ್ರಮೌಳಿ, ಜಿಲ್ಲಾ ತಂಬಾಕು ನೋಡಲ್‌ ಅಧಿಕಾರಿ ಡಾ. ನಾಗರಾಜು, ನಗರಸಭೆ, ಪುರಸಭೆ ಇತರೆ ಇಲಾಖೆ ಅಧಿಕಾರಿಗಳು ಸಭೆಯಲ್ಲಿ ಹಾಜರಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ