Please enable javascript.ನಿವೃತ್ತ ಶಿಕ್ಷಕರಿಗೆ ಬೀಳ್ಕೊಡುಗೆ - ನಿವೃತ್ತ ಶಿಕ್ಷಕರಿಗೆ ಬೀಳ್ಕೊಡುಗೆ - Vijay Karnataka

ನಿವೃತ್ತ ಶಿಕ್ಷಕರಿಗೆ ಬೀಳ್ಕೊಡುಗೆ

ವಿಕ ಸುದ್ದಿಲೋಕ 4 Jul 2015, 3:25 pm
Subscribe

ಚಿಂತಾಮಣಿ: ನಗರದ ಮಹಾತ್ಮಾಗಾಂಧಿ ಬಾಲಕರ ಸರಕಾರಿ ಪ್ರೌಢಶಾಲೆಯಲ್ಲಿ ಸೇವೆ ಸಲ್ಲಿಸಿ ನಿವೃತ್ತರಾದ ಎಂ.ರಾಮಕೃಷ್ಣಪ್ಪ ಮತ್ತು ಎಸ್.ಆರ್. ಲಕ್ಷ್ಮಮ್ಮ ಅವರಿಗೆ ಶಾಲೆಯ ಸಿಬ್ಬಂದಿ ಗುರುವಾರ ಆತ್ಮೀಯ ಬೀಳ್ಕೊಡುಗೆ ನೀಡಿದರು.

ನಿವೃತ್ತ ಶಿಕ್ಷಕರಿಗೆ ಬೀಳ್ಕೊಡುಗೆ


ಚಿಂತಾಮಣಿ: ನಗರದ ಮಹಾತ್ಮಾಗಾಂಧಿ ಬಾಲಕರ ಸರಕಾರಿ ಪ್ರೌಢಶಾಲೆಯಲ್ಲಿ ಸೇವೆ ಸಲ್ಲಿಸಿ ನಿವೃತ್ತರಾದ ಎಂ.ರಾಮಕೃಷ್ಣಪ್ಪ ಮತ್ತು ಎಸ್.ಆರ್. ಲಕ್ಷ್ಮಮ್ಮ ಅವರಿಗೆ ಶಾಲೆಯ ಸಿಬ್ಬಂದಿ ಗುರುವಾರ ಆತ್ಮೀಯ ಬೀಳ್ಕೊಡುಗೆ ನೀಡಿದರು.

ಸಮಾರಂಭದ ಅಧ್ಯಕ್ಷತೆವಹಿಸಿ ಮಾತನಾಡಿದ ಮುಖ್ಯ ಶಿಕ್ಷಕ ರಮಣಾರೆಡ್ಡಿ ಕೆ.ಎನ್., ‘‘ಇಬ್ಬರೂ ಶಿಕ್ಷಕರು ಶಾಲೆಗೆ ಅವಿಸ್ಮರಣೀಯ ಸೇವೆ ಸಲ್ಲಿಸಿದ್ದಾರೆ. ಅವರ ಶ್ರಮದಿಂದ ಶಾಲೆಗೆ ಉತ್ತಮ ಲಿತಾಂಶ ಬಂದಿದೆ,’’ ಎಂದು ಪ್ರಶಂಸೆ ವ್ಯಕ್ತಪಡಿಸಿದರು.

‘‘ಮಕ್ಕಳ ಭವಿಷ್ಯ ರೂಪಿಸಿದ ಅವರ ವಿಶ್ರಾಂತ ಜೀವನ ಸುಖಮಯವಾಗಿರಲಿ,’’ ಎಂದು ಹಾರೈಸಿದರು.

ಪ್ರತಿಭಾ ಪುರಸ್ಕಾರ: ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಅತಿಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ನಿವೃತ್ತ ದೈಹಿಕ ಶಿಕ್ಷಣ ಶಿಕ್ಷಕ ಸುಬ್ಬರಾಮಶಾಸ್ತ್ರಿ ಅವರು ಪ್ರತಿಭಾ ಪುರಸ್ಕಾರ ಮಾಡಿದರು.

2014- 15ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಪಡೆದ ಮಹಾತ್ಮಗಾಂಧಿ ಸರಕಾರಿ ಫ್ರೌಢಶಾಲೆಯ ವೆಂಕಟೇಶ್, ಬಾಬಾಜಾನ್ ಮತ್ತು ನಾತಿಕ್‌ಖಾನ್ ಎಂಬ ವಿದ್ಯಾರ್ಥಿಗಳಿಗೆ ಸಾಹಿತ್ಯ ಮತ್ತು ಸಾಮಾನ್ಯ ಜ್ಞಾನಕ್ಕೆ ಸಂಬಂಧಿಸಿದ ಪುಸ್ತಕಗಳನ್ನು ಕೊಡುಗೆಯಾಗಿ ನೀಡಿ ಸನ್ಮಾನಿಸಿದರು.

‘‘ವಿದ್ಯೆಯ ಜತೆಗೇ ವಿನಯ, ಶಿಸ್ತು, ಸಮಯಪಾಲನೆ, ಶಾಂತಿ ಇತ್ಯಾದಿ ವಿಷಯಗಳ ಬಗ್ಗೆ ಹೆಚ್ಚು ಗಮನ ನೀಡುವಂತೆ, ’’ ಕಿವಮಾತು ಹೇಳಿದರು.

ಈ ಸಂದರ್ಭದಲ್ಲಿ ಶಾಲೆಯ ಶಿಕ್ಷಕರಾದ ಶಿವಪ್ಪ, ಸಂಪಂಗಿ, ಕಷ್ಣಮೂರ್ತಿ ಮತ್ತಿತರರು ಹಾಜರಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ