ಆ್ಯಪ್ನಗರ

ಬಲಿಜ ಸಮುದಾಯದವರಿಗೆ ನ್ಯಾಯ ನೀಡುತ್ತೇನೆ: ಯಡಿಯೂರಪ್ಪ ಭರವಸೆ

“ಬಲಿಜ ಸಮುದಾಯವನ್ನು 2ಎಗೆ ಸೇರಿಸಬೇಕು ಎಂದು ಸಂಸದ ಪಿ.ಸಿ.ಮೋಹನ್ ಸೇರಿದಂತೆ ಹಲವರು ಬೇಡಿಕೆಯನ್ನಿಟ್ಟಿದ್ದಾರೆ. ಈ ಬಗ್ಗೆ ಕ್ರಮ ಕೈಗೊಳ್ಳುತ್ತೇನೆ,” ಎಂದು ಮುಖ್ಯಮಂತ್ರಿ ಬಿಎಸ್‌ ಯಡಿಯೂರಪ್ಪ ಭರವಸೆ ನೀಡಿದ್ದಾರೆ.

Vijaya Karnataka Web 8 Nov 2019, 8:05 pm
ಚಿಕ್ಕಬಳ್ಳಾಪುರ: ಬಲಿಜ ಸಮುದಾಯವನ್ನು 2ಎಗೆ ಸೇರಿಸಬೇಕೆಂದು ಜನಾಂಗದ ಪ್ರಮುಖ ಬೇಡಿಕೆಯಾಗಿದೆ. ಈಗಾಗಲೇ ಶಿಕ್ಷಣದಲ್ಲಿ 2ಎ ಮೀಸಲಾತಿ ಕಲ್ಪಿಸಲಾಗಿದ್ದು, ಅದನ್ನು ಉದ್ಯೋಗಕ್ಕೂ ನೀಡುವ ಬಗ್ಗೆ ಪರಿಶೀಲಿಸುತ್ತೇನೆ. ಆ ಬಗ್ಗೆ ಸೂಕ್ತ ತಿರ್ಮಾನ ತೆಗೆದುಕೊಂಡು ಬಲಿಜ ಸಮುದಾಯದವರಿಗೆ ನ್ಯಾಯ ಕೋಡುತ್ತೇನೆ ಎಂದು ಮುಖ್ಯಮಂತ್ರಿ ಬಿಎಸ್‌ ಯಡಿಯೂರಪ್ಪ ಭರವಸೆ ನೀಡಿದ್ದಾರೆ.
Vijaya Karnataka Web BSYediyurappa


ಚಿಕ್ಕಬಳ್ಳಾಪುರದಲ್ಲಿ ವಿವಿಧ ಕಾಮಗಾರಿಗಳಿಗೆ ಚಾಲನೆ ನೀಡಿ ಮಾತನಾಡಿದ ಅವರು, “ಬಲಿಜ ಸಮುದಾಯವನ್ನು 2ಎಗೆ ಸೇರಿಸಬೇಕು ಎಂದು ಸಂಸದ ಪಿ.ಸಿ.ಮೋಹನ್ ಸೇರಿದಂತೆ ಹಲವರು ಬೇಡಿಕೆಯನ್ನಿಟ್ಟಿದ್ದಾರೆ. ಈ ಬಗ್ಗೆ ಕ್ರಮ ಕೈಗೊಳ್ಳುತ್ತೇನೆ,” ಎಂದರು.

ಜನಪ್ರಿಯ ನಾಯಕ ಹೇಗಿರಬೇಕೋ ಹಾಗೆ ಡಾ.ಕೆ.ಸುಧಾಕರ್ ಇದ್ದಾರೆ. ಈಗಾಗಲೇ ನೀವೆಲ್ಲಾ ನಿರ್ಧಾರ ತೆಗೆದುಕೊಂಡಿದ್ದು, ಅವರ ಗೆಲುವನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ ಎಂದು ಯಡಿಯೂರಪ್ಪ ಅಭಿಪ್ರಾಯಟ್ಟರು.

ಇದೇ ಸಂದರ್ಭದಲ್ಲಿ ಮಾತನಾಡಿದ ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ, “ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರ ನಡೆಸಿದ 20 ವರ್ಷಗಳಲ್ಲಿ 15 ವರ್ಷ ಬರ ಪರಿಸ್ಥಿತಿ ಇತ್ತು. ಯಡಿಯೂರಪ್ಪ ಸಿಎಂ ಆದ ಮೇಲೆ 3 ತಿಂಗಳಿಂದ ಉತ್ತಮ ಮಳೆ ಬೆಳೆಯಾಗುತ್ತಿದೆ. ರಾಜ್ಯದಲ್ಲಿ ಉತ್ತಮ ಮಳೆಯಾಗಲು ಯಡಿಯೂರಪ್ಪ ಕಾಲ್ಗುಣವೇ ಕಾರಣ,” ಎಂದರು.

“ನಾವು ಈ ಬಾರಿ ಅಧಿಕಾರಕ್ಕೆ ಬಂದ ಸಂದರ್ಭದಲ್ಲಿ ರಾಜ್ಯದಲ್ಲೆಡೆ ಪ್ರವಾಹ ಸ್ಥಿತಿ ಇದ್ದ ಕಾರಣ, ನಮಗೆ ಕಳೆದ ಮೂರು ತಿಂಗಳುಗಳಿಂದ ನೆರೆ ಸಂತ್ರಸ್ತರ ಸಂಕಷ್ಟಕ್ಕೆ ಸ್ಪಂದಿಸುವುದರಲ್ಲೇ ಕಾಲ ಕಳೆದುಹೋಯಿತು. ಇದು ಇಲ್ಲದೇ ಹೋಗಿದ್ದಿದ್ದರೆ ಇವತ್ತು ರಾಜ್ಯದ ಚಿತ್ರಣವೇ ಬದಲಾಗುತ್ತಿತ್ತು. ಇನ್ನು ಮುಂದಿನ ಮೂರು ತಿಂಗಳಲ್ಲಿ ರಾಜ್ಯದಲ್ಲಿ ಅಭಿವೃದ್ಧಿ ಕಾರ್ಯಗಳು ಚುರುಕು ಪಡೆದುಕೊಳ್ಳಲಿವೆ,” ಎಂಬುದಾಗಿ ಕಾರಜೋಳ ವಿವರಿಸಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ