Please enable javascript.ಒತ್ತುವರಿ ತೆರವು ತಡೆಗೆ ಸಿಎಂ ವೌಖಿಕ ಆದೇಶ - ಒತ್ತುವರಿ ತೆರವು ತಡೆಗೆ ಸಿಎಂ ವೌಖಿಕ ಆದೇಶ - Vijay Karnataka

ಒತ್ತುವರಿ ತೆರವು ತಡೆಗೆ ಸಿಎಂ ವೌಖಿಕ ಆದೇಶ

ವಿಕ ಸುದ್ದಿಲೋಕ 11 Jun 2013, 11:13 pm
Subscribe

ಬಡ ರೈತರು ಮಾಡಿರುವ 10 ಎಕರೆವರೆಗಿನ ಒತ್ತುವರಿ ಭೂಮಿ ಖುಲ್ಲಾ ಮಾಡದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸಂಬಂಧಿಸಿದ ಅಧಿಕಾರಿಗಳಿಗೆ ವೌಖಿಕ ಆದೇಶ ನೀಡಿದ್ದಾರೆ ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಂ.ಎಲ್.ಮೂರ್ತಿ ಹೇಳಿದರು.

ಒತ್ತುವರಿ ತೆರವು ತಡೆಗೆ ಸಿಎಂ ವೌಖಿಕ ಆದೇಶ
ಚಿಕ್ಕಮಗಳೂರು: ಬಡ ರೈತರು ಮಾಡಿರುವ 10 ಎಕರೆವರೆಗಿನ ಒತ್ತುವರಿ ಭೂಮಿ ಖುಲ್ಲಾ ಮಾಡದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸಂಬಂಧಿಸಿದ ಅಧಿಕಾರಿಗಳಿಗೆ ವೌಖಿಕ ಆದೇಶ ನೀಡಿದ್ದಾರೆ ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಂ.ಎಲ್.ಮೂರ್ತಿ ಹೇಳಿದರು.

ಜಿಲ್ಲೆಯಲ್ಲಿ ಅರಣ್ಯಭೂಮಿ ಒತ್ತು ವರಿ ತೆರವಿನಿಂದ ರೈತರು, ಬೆಳೆಗಾರರು ಆತಂಕಕ್ಕೆ ಒಳಗಾಗಿದ್ದಾರೆ. ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬಂದಾಗೆಲ್ಲ ಒತ್ತುವರಿ ತೆರವು ಮಾಡಲಾಗುತ್ತದೆ ಎಂದು ಗೂಬೆ ಕೂರಿಸುವ ಕೆಲಸವನ್ನು ಕೆಲವರು ಮಾಡುತ್ತಿದ್ದಾರೆ ಎಂದು ಮಂಗಳವಾರ ಸುದ್ದಿಗೋಷ್ಠಿಯಲ್ಲಿ ದೂರಿದರು.

ಸಾಮಾಜಿಕ ಕಾರ್ಯಕರ್ತ ಎಸ್.ಆರ್.ಹಿರೇಮಠ ಸುಪ್ರೀಂ ಕೋರ್ಟ್‌ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದರಿಂದ ಒತ್ತುವರಿ ಖುಲ್ಲಾಗೊಳಿಸುವಂತೆ ಹೈಕೋರ್ಟ್‌ಗೆ ನಿರ್ದೇಶನ ನೀಡಲಾಗಿದೆ. ಈ ಹಿನ್ನೆಲೆಯಲ್ಲಿ ಸರಕಾರದ ಮುಖ್ಯ ಕಾರ್ಯದರ್ಶಿ ನ್ಯಾಯಾಲಯದ ಆದೇಶ ಪಾಲಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ ಎಂದು ಸಮಜಾಯಿಷಿ ನೀಡಿದರು. ಬಡ ರೈತರ ಭೂಮಿ ಉಳಿಸಲು ಸಭೆ ನಡೆಸಿ ತೀರ್ಮಾನ ಕೈಗೊಳ್ಳಲಾಗು ವುದು. ಜಿಲ್ಲಾ ಕಾಂಗ್ರೆಸ್ ಕಾರ್ಯಕಾರಿ ಸಭೆ ಜೂ.14ರಂದು ನಡೆಯಲಿದ್ದು, ಸಮಸ್ಯೆ ಪರಿಹಾರದ ಬಗ್ಗೆ ಮುಖ್ಯಮಂತ್ರಿ ಬಳಿ ನಿಯೋಗ ತೆರಳಿ ಮನವರಿಕೆ ಮಾಡುವುದು ಎಂದರು.

ವಿಧಾನಸಭೆ ಸ್ಪೀಕರ್ ಆಗಿರುವ ಕಾಗೋಡು ತಿಮ್ಮಪ್ಪ ಈ ಹಿಂದೆ ಒತ್ತುವರಿ ತೆರವಿನ ವಿರುದ್ಧ ಹೋರಾಟ ನಡೆಸಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಕೂಡ ಬಡ ರೈತರ ಪರವಾಗಿ ದ್ದಾರೆ. ಒತ್ತುವರಿ ಸಮಸ್ಯೆ ಎಲ್ಲ ಪಕ್ಷಗಳ ಸರಕಾರ ಇದ್ದಾಗಲೂ ಇತ್ತು. ಈ ಸಮಸ್ಯೆಯಲ್ಲಿ ಸರಕಾರಗಳ ಪಾತ್ರವೂ ಇದೆ. ಈಗಲಾದರೂ ಸಮಸ್ಯೆ ಪರಿಹರಿಸಿಕೊಳ್ಳುವ ಅಗತ್ಯವಿದೆ ಎಂದು ಹೇಳಿದರು.

ಉಸ್ತುವಾರಿ ಸಚಿವರ ಭೇಟಿ: ಜಿಲ್ಲಾ ಉಸ್ತುವಾರಿ ಸಚಿವ ಅಭಯಚಂದ್ರ ಜೈನ್ ಜೂ.18 ರಂದು ಜಿಲ್ಲೆಗೆ ಆಗಮಿಸಲಿದ್ದು, ಅಂದು ಬೆಳಗ್ಗೆ 11ಕ್ಕೆ ಕುವೆಂಪು ಕಲಾ ಮಂದಿರದಲ್ಲಿ ಬ್ಯಾರಿ ಒಕ್ಕೂಟದಿಂದ ಅಭಿನಂದನೆ ಸ್ವೀಕರಿಸುವರು. ಮಧ್ಯಾಹ್ನ ಜಿಲ್ಲಾ ಕಾಂಗ್ರೆಸ್‌ನಿಂದ ಸಚಿವರಾದ ಅಭಯಚಂದ್ರ ಜೈನ್, ಯು.ಟಿ. ಖಾದರ್, ಶಾಸಕ ಜಿ.ಎಚ್.ಶ್ರೀನಿವಾಸ್ ಅವರನ್ನು ಸನ್ಮಾನಿಸ ಲಾಗುವುದು ಎಂದು ಹೇಳಿದರು.

ಲೋಕಸಭೆ ಚುನಾವಣೆ ದೃಷ್ಟಿಯಲ್ಲಿಟ್ಟುಕೊಂಡು ಹೋಬಳಿ, ಗ್ರಾಮ ಪಂಚಾಯಿತಿ ಹಾಗೂ ಬೂತ್ ಮಟ್ಟದ ಕಾಂಗ್ರೆಸ್ ಸಮಿತಿಗಳನ್ನು ತಕ್ಷಣದಿಂದ ವಿಸರ್ಜಿಸಲಾಗಿದೆ. ಜನಿಗಮ, ಮಂಡಳಿ ನೇಮಕಕ್ಕೂ ಪಟ್ಟಿ ಕೇಳಿದ್ದು, ಬ್ಲಾಕ್ ಕಾಂಗ್ರೆಸ್, ಶಾಸಕರು, ಪರಾಜಿತ ಅಭ್ಯರ್ಥಿಗಳ ಅಭಿಪ್ರಾಯ ಪಡೆದು ರಾಜ್ಯ ಸಮಿತಿಗೆ ಸಲ್ಲಿಸಲಾಗುವುದು ಎಂದರು. ಜಿಲ್ಲಾ ವಕ್ತಾರ ಎ.ಎನ್.ಮಹೇಶ್, ವೇಣುಗೋಪಾಲರಾಜ ಅರಸ್, ಜಾಜ್ ಮತ್ತಿತರರು ಹಾಜರಿದ್ದರು.

---------- ಮೋಟಮ್ಮ ದೊಡ್ಡ ನಾಯಕಿ ವಿಧಾನ ಪರಿಷತ್ ಸದಸ್ಯೆ ಮೋಟಮ್ಮ ದೊಡ್ಡ ನಾಯಕಿ. ನಾನೊಬ್ಬ ಜಿಲ್ಲಾ ಕಾಂಗ್ರೆಸ್ ಹುದ್ದೆಯಲ್ಲಿರುವ ಸಣ್ಣ ಮುಖಂಡ. ಪಕ್ಷದ ಆಂತರಿಕ ವಿಚಾರಗಳನ್ನು ಬಹಿರಂಗ ಚರ್ಚೆ ಮಾಡಬಾರದು ಎಂಬುದು ಪಕ್ಷದ ನಿಯಮ. ಹೀಗಾಗಿ ಮೋಟಮ್ಮ ತಮ್ಮ ಬಗ್ಗೆ ಮಾಡಿರುವ ಆರೋಪಗಳ ಬಗ್ಗೆ ಬಹಿರಂಗವಾಗಿ ಚರ್ಚಿಸದೆ ಪಕ್ಷದ ಆಂತರಿಕ ಸಭೆಯಲ್ಲಿ ಉತ್ತರ ಕೊಡುತ್ತೇನೆ ಎಂದು ತಮಗೆ ಸಚಿವ ಸ್ಥಾನ ತಪ್ಪಲು ಜಿಲ್ಲಾಧ್ಯಕ್ಷ ಎಂ.ಎಲ್.ಮೂರ್ತಿ ಕೂಡ ಕಾರಣ ಎಂಬ ಮೋಟಮ್ಮ ಆರೋಪಕ್ಕೆ ಪ್ರತಿಕ್ರಿಯಿಸಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ