ಆ್ಯಪ್ನಗರ

ದಲಿತ ಯುವಕನಿಗೆ ಮೂತ್ರ ಕುಡಿಸಿದ ಪ್ರಕರಣ; ಆರೋಪಿ ಎಸ್‌ಐ ಅರ್ಜುನ್‌ಗೆ ಜಾಮೀನು ನಿರಾಕರಣೆ

ಘಟನೆ ಸಂಬಂಧ ಪುನೀತ್‌ ದೂರು ದಾಖಲಿಸಿದ ಹಿನ್ನೆಲೆಯಲ್ಲಿ ಪಿಎಸ್‌ಐ ಅರ್ಜುನ್‌ ಅವರನ್ನು ಅಮಾನತು ಮಾಡಲಾಗಿತ್ತು. ನಂತರ ಪ್ರಕರಣವನ್ನು ಸರಕಾರ ಸಿಐಡಿ ತನಿಖೆಗೆ ಒಪ್ಪಿಸಿತ್ತು. ಬಂಧನ ಭೀತಿಯಿಂದ ನಿರೀಕ್ಷಣಾ ಜಾಮೀನು ಕೋರಿ ಪಿಎಸ್‌ಐ ಅರ್ಜುನ್‌ ಸಲ್ಲಿಸಿದ್ದ ಅರ್ಜಿಯನ್ನು ಚಿಕ್ಕಮಗಳೂರಿನ ಒಂದನೇ ಹೆಚ್ಚುವರಿ ಜಿಲ್ಲಾ ಸೆಷನ್ಸ್‌ ನ್ಯಾಯಾಲಯ ವಜಾಗೊಳಿಸಿತ್ತು. ಅದರ ವಿರುದ್ಧ ಹೈಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಲಾಗಿತ್ತು.

Vijaya Karnataka 27 Aug 2021, 8:49 am
ಬೆಂಗಳೂರು: ಚಿಕ್ಕಮಗಳೂರು ಜಿಲ್ಲೆ ಗೋಣಿಬೀಡು ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ದಲಿತ ಸಮುದಾಯಕ್ಕೆ ಸೇರಿದ ಯುವಕನೊಬ್ಬನನ್ನು ಠಾಣೆಗೆ ಕೆರೆದೊಯ್ದು ಅಮಾನವೀಯವಾಗಿ ಹಲ್ಲೆನಡೆಸಿ, ಮೂತ್ರ ನೆಕ್ಕಿಸಿದ ಆರೋಪ ಪ್ರಕರಣದಲ್ಲಿ ಪೊಲೀಸ್‌ ಸಬ್‌ ಇನ್‌ಸ್ಪೆಕ್ಟರ್‌ ಅರ್ಜುನ್‌ಗೆ ನಿರೀಕ್ಷಣಾ ಜಾಮೀನು ನೀಡಲು ಹೈಕೋರ್ಟ್‌ ನಿರಾಕರಿಸಿದೆ.
Vijaya Karnataka Web sub-inspector arjun


ಜಾಮೀನು ಕೋರಿ ಆರೋಪಿ ಅರ್ಜುನ್‌ ಸಲ್ಲಿಸಿದ್ದ ಮೇಲ್ಮನವಿ ಬಗ್ಗೆ ವಿಚಾರಣೆ ನಡೆಸಿದ ನ್ಯಾ.ಶ್ರೀನಿವಾಸ್‌ ಹರೀಶ್‌ ಕುಮಾರ್‌ ಅವರಿದ್ದ ಏಕಸದಸ್ಯಪೀಠ, ಅರ್ಜಿ ವಜಾಗೊಳಿಸಿತು. ‘ಆರೋಪಿ ಇನ್ಸಪೆಕ್ಟರ್‌ ಅರ್ಜುನ್‌ ಕೃತ್ಯವು ಅತ್ಯಂತ ಹೀನಾಯವಾಗಿದೆ. ದೂರುದಾರ ಪುನೀತ್‌ನನ್ನು ಅಮಾನವೀಯವಾಗಿ ಹಲ್ಲೆ ನಡೆಸಿರುವುದನ್ನು ಒಪ್ಪಲಾಗದು. ಇನ್ನೂ ಪ್ರಕರಣದ ತನಿಖೆ ಪ್ರಗತಿಯಲ್ಲಿದ್ದು, ಈ ಹಂತದಲ್ಲಿ ನಿರೀಕ್ಷಣಾ ಜಾಮೀನು ಪಡೆಯಲು ಅರ್ಜುನ್‌ ಅರ್ಹನಾಗಿಲ್ಲ ಎಂದು ನ್ಯಾಯಪೀಠ ಆದೇಶಿಸಿತು.
ದಲಿತ ಯುವಕನಿಗೆ ಮೂತ್ರ ಕುಡಿಸಿದ ಆರೋಪಿ ಪಿಎಸ್‌ಐ ಅರ್ಜುನ್‌ ವಿರುದ್ಧ ಎಫ್‌ಐಆರ್ ದಾಖಲು
ಮಹಿಳೆಯೊಬ್ಬರಿಗೆ ಕರೆ ಮಾಡಿ ಅನುಚಿತವಾಗಿ ವರ್ತಿಸಿದ ಆರೋಪ ಸಂಬಂಧ ಚಿಕ್ಕಮಗಳೂರು ಜಿಲ್ಲೆಯ ಕಿರುಗುಂಡ ಗ್ರಾಮದಲ್ಲಿ ಪರಿಶಿಷ್ಟ ಜಾತಿಗೆ ಸೇರಿದ ಪುನೀತ್‌ ಎಂಬ ಹುಡುಗನನ್ನು ಮೇ 10ರಂದು ಗೋಣಿಬೀಡು ಠಾಣೆಗೆ ಕರೆದೊಯ್ದಿದ್ದ ಪಿಎಸ್‌ಐ ಅರ್ಜುನ್‌, ಬಟ್ಟೆ ಬಿಚ್ಚಿಸಿ ಮನಬಂದಂತೆ ಹಲ್ಲೆ ನಡೆಸಿದಲ್ಲದೆ ಮೂತ್ರ ನೆಕ್ಕಿಸಿದ್ದರು ಎಂದು ಆರೋಪಿಸಲಾಗಿದೆ.
ಮೂಡಿಗೆರೆ: ದಲಿತ ಯುವಕನಿಗೆ ಮೂತ್ರ ಕುಡಿಸಿ ದೌರ್ಜನ್ಯ ಆರೋಪ; ಪಿಎಸ್‌ಐ ಅಮಾನತಿಗೆ ಒತ್ತಾಯ
ಘಟನೆಯ ಸಂಬಂಧ ಪುನೀತ್‌ ದೂರು ದಾಖಲಿಸಿದ ಹಿನ್ನೆಲೆಯಲ್ಲಿ ಪಿಎಸ್‌ಐ ಅರ್ಜುನ್‌ ಅವರನ್ನು ಅಮಾನತು ಮಾಡಲಾಗಿತ್ತು. ನಂತರ ಪ್ರಕರಣವನ್ನು ಸರಕಾರ ಸಿಐಡಿ ತನಿಖೆಗೆ ಒಪ್ಪಿಸಿತ್ತು. ಬಂಧನ ಭೀತಿಯಿಂದ ನಿರೀಕ್ಷಣಾ ಜಾಮೀನು ಕೋರಿ ಪಿಎಸ್‌ಐ ಅರ್ಜುನ್‌ ಸಲ್ಲಿಸಿದ್ದ ಅರ್ಜಿಯನ್ನು ಚಿಕ್ಕಮಗಳೂರಿನ ಒಂದನೇ ಹೆಚ್ಚುವರಿ ಜಿಲ್ಲಾ ಸೆಷನ್ಸ್‌ ನ್ಯಾಯಾಲಯ ವಜಾಗೊಳಿಸಿತ್ತು. ಅದರ ವಿರುದ್ಧ ಹೈಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಲಾಗಿತ್ತು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ