ಆ್ಯಪ್ನಗರ

ಸಾಲ ಸಂಪೂರ್ಣ ಮನ್ನಾ ಮಾಡಿ

ಧಾರವಾಡ: ರಾಷ್ಟ್ರೀಕೃತ ಬ್ಯಾಂಕ್‌ನ ರೈತರ ಸಾಲವನ್ನು ಒಂದು ಬಾರಿ ಸಂಪೂರ್ಣ ಮನ್ನಾ ಮಾಡುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಮತ್ತು ಹಸಿರು ಸೇನೆ ಹಾಗೂ ಕರ್ನಾಟಕ ಪ್ರಾಂತ ಸಂಘ-ರೈತ ಕೃಷಿಕೂಲಿಕಾರರ ಸಂಘದ ಕಾರ್ಯಕರ್ತರು ಸೋಮವಾರ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.

ವಿಕ ಸುದ್ದಿಲೋಕ 22 Aug 2017, 4:00 am

ಧಾರವಾಡ: ರಾಷ್ಟ್ರೀಕೃತ ಬ್ಯಾಂಕ್‌ನ ರೈತರ ಸಾಲವನ್ನು ಒಂದು ಬಾರಿ ಸಂಪೂರ್ಣ ಮನ್ನಾ ಮಾಡುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಮತ್ತು ಹಸಿರು ಸೇನೆ ಹಾಗೂ ಕರ್ನಾಟಕ ಪ್ರಾಂತ ಸಂಘ-ರೈತ ಕೃಷಿಕೂಲಿಕಾರರ ಸಂಘದ ಕಾರ್ಯಕರ್ತರು ಸೋಮವಾರ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.

ಕಳೆದ 2-3 ವರ್ಷದಿಂದ ರಾಜ್ಯದ ಬಹುತೇಕ ಜಿಲ್ಲೆ ಮತ್ತು ತಾಲೂಕುಗಳಲ್ಲಿ ಬರ ಉಂಟಾಗಿದ್ದು, ರೈತ ಸಮುದಾಯ ಆರ್ಥಿಕ ಸಂಕಷ್ಟ ಅನುಭವಿಸುವಂತಾಗಿದೆ. ರಾಷ್ಟ್ರೀಕೃತ ಬ್ಯಾಂಕ್‌ಗಳಲ್ಲಿನ ಕೃಷಿ ಸಾಲವನ್ನು ಮರುಪಾವತಿ ಮಾಡುವುದು ಅಸಾಧ್ಯದ ಮಾತಾಗಿದ್ದು, ಕೂಡಲೇ ಕೇಂದ್ರ ಮತ್ತು ರಾಜ್ಯ ಸರಕಾರಗಳು ಒಂದು ಬಾರಿ ರೈತರ ಸಾಲವನ್ನು ಸಂಪೂರ್ಣ ಮನ್ನಾ ಮಾಡಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.

ರೈತ ವಿರೋಧಿ ನಿಲುವು: ರಾಜ್ಯ ಕಾರ್ಯದರ್ಶಿ ನಾಗಪ್ಪ ಉಂಡಿ ಮಾತನಾಡಿ, ರಾಜ್ಯ ಸರಕಾರ ಕೇವಲ 50 ಸಾವಿರ ರೂ. ರೈತರ ಸಾಲ ಮನ್ನಾ ಮಾಡಿದೆ. ಆದರೆ, ರಾಷ್ಟ್ರೀಕೃತ ಬ್ಯಾಂಕಿನಲ್ಲಿರುವ 52 ಸಾವಿರ ಕೋಟಿ ರೂ. ರೈತರ ಸಾಲ ಸಂಪೂರ್ಣ ಮನ್ನಾ ಮಾಡುವಂತೆ ಹಲವಾರು ಬಾರಿ ಪ್ರತಿಭಟನೆ ನಡೆಸಿದ್ದರೂ ಸ್ಪಂದಿಸುತ್ತಿಲ್ಲ. ರೈತರ ಹೆಸರಿನಲ್ಲಿ ಅಧಿಕಾರಕ್ಕೆ ಬಂದಿರುವ ಕೇಂದ್ರ ಮತ್ತು ರಾಜ್ಯ ಸರಕಾರಗಳು ಸಂಪೂರ್ಣ ರೈತ ವಿರೋಧಿ ನಿಲುವನ್ನು ತಾಳುತ್ತಿವೆ ಎಂದು ಆರೋಪಿಸಿದರು.

ಕಾರ್ಪೊರೇಟ್‌ ಪರ: ಜಿಲ್ಲಾಧ್ಯಕ್ಷ ಬಿ.ಎಸ್‌.ಸೊಪ್ಪಿನ ಮಾತನಾಡಿ, ಬರಗಾಲದಿಂದ ತೀವ್ರಗೊಂಡಿರುವ ಕೃಷಿ ಬಿಕ್ಕಟ್ಟಿನ ಫÜಲವಾಗಿ ರೈತರ ಆತ್ಮಹತ್ಯೆಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿವೆ. ಕೇಂದ್ರ ಸರಕಾರ ರೈತರ ಸಾಲಮನ್ನಾ ಅಸಾಧ್ಯ ಎಂದು ಹೇಳುತ್ತಿರುವುದು ಖಂಡನೀಯ.

ಕೇಂದ್ರ ಸರಕಾರ ಅಧಿಕಾರಕ್ಕೆ ಬಂದ ಮೂರು ವರ್ಷಗಳಲ್ಲಿ ಉದ್ಯಮಿದಾರರ ಹಾಗೂ ಕಾರ್ಪೋರೇಟ್‌ ಕಂಪನಿಗಳ 12 ಲಕ್ಷ ಕೋಟಿ ತೆರಿಗೆ ಮತ್ತು ಸಾಲ ಮನ್ನಾ ಮಾಡಿದೆ. ದೇಶಕ್ಕೆ ಅನ್ನ ನೀಡುವ ರೈತರ ಸಾಲವನ್ನು ಮನ್ನಾ ಏಕೆ ? ಮಾಡುತ್ತಿಲ್ಲ ಎಂದು ಪ್ರಶ್ನಿಸಿದರು. ವಿದೇಶಗಳಿಂದ ಆಮದಾಗುತ್ತಿರುವ ಕೃಷಿ ಪದಾರ್ಥಗಳಿಂದಾಗಿ ದೇಶಿಯ ಕೃಷಿ ಉತ್ಪನ್ನಗಳ ಬೆಲೆ ಕುಸಿಯುತ್ತಿದೆ. ಆದ್ದರಿಂದ ಈ ದೃಷ್ಟಿಯಿಂದ ಸ್ವಾಮಿನಾಥನ ವರದಿಯನ್ನು ಕೇಂದ್ರ ಸರಕಾರ ಜಾರಿಗೆ ತರುವುದಾಗಿ ಹೇಳಿದ ಹೇಳಿಕೆ ಹುಸಿಯಾಗಿದೆ ಎಂದರು.

ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿ ಹಾಗೂ ಪ್ರಧಾನ ಮಂತ್ರಿಗಳಿಗೆ ಮನವಿ ಸಲ್ಲಿಸಿದರು.

ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ಜಿಲ್ಲಾಧ್ಯಕ್ಷ ಈರಣ್ಣ ಬಡಿಗೇರ, ಪ್ರಧಾನ ಕಾರ್ಯದರ್ಶಿ ಕೆ.ಎಚ್‌.ಪಾಟೀಲ, ಎಚ್‌.ಜಿ.ದೇಸಾಯಿ, ಶಿವಶರಣ ಗೋನಾಳ ಸೇರಿದಂತೆ ನೂರಾರು ರೈತರು ಪಾಲ್ಗೊಂಡಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ