ಆ್ಯಪ್ನಗರ

ಇಂದು ಖಾಸಗಿ ವೈದ್ಯರ ಜತೆ ಸಭೆ

ಧಾರವಾಡ: ಕೋವಿಡ್‌- 19 ಸೋಂಕು ತಡೆಯಲು ಸರಕಾರಿ ಆಸ್ಪತ್ರೆಗಳು ಶ್ರಮಿಸುತ್ತಿವೆ. ಸಣ್ಣಪುಟ್ಟ, ಸಾಮಾನ್ಯ ಕಾಯಿಲೆ ಹಾಗೂ ತುರ್ತು ಚಿಕಿತ್ಸೆಗಳನ್ನು ಖಾಸಗಿ ಆಸ್ಪತ್ರೆಗಳು ಒದಗಿಸಬೇಕು. ಈ ಕುರಿತು ಚರ್ಚಿಸಲು ಏ.4ರಂದು ಅವಳಿನಗರದ ಖಾಸಗಿ ವೈದ್ಯರ ಸಭೆ ನಡೆಸಲಾಗುವುದು ಎಂದು ಜಿಲ್ಲಾಉಸ್ತುವಾರಿ ಸಚಿವ ಜಗದೀಶ ಶೆಟ್ಟರ್‌ ಹೇಳಿದರು.

Vijaya Karnataka 4 Apr 2020, 5:00 am
ಧಾರವಾಡ: ಕೋವಿಡ್‌- 19 ಸೋಂಕು ತಡೆಯಲು ಸರಕಾರಿ ಆಸ್ಪತ್ರೆಗಳು ಶ್ರಮಿಸುತ್ತಿವೆ. ಸಣ್ಣಪುಟ್ಟ, ಸಾಮಾನ್ಯ ಕಾಯಿಲೆ ಹಾಗೂ ತುರ್ತು ಚಿಕಿತ್ಸೆಗಳನ್ನು ಖಾಸಗಿ ಆಸ್ಪತ್ರೆಗಳು ಒದಗಿಸಬೇಕು. ಈ ಕುರಿತು ಚರ್ಚಿಸಲು ಏ.4ರಂದು ಅವಳಿನಗರದ ಖಾಸಗಿ ವೈದ್ಯರ ಸಭೆ ನಡೆಸಲಾಗುವುದು ಎಂದು ಜಿಲ್ಲಾಉಸ್ತುವಾರಿ ಸಚಿವ ಜಗದೀಶ ಶೆಟ್ಟರ್‌ ಹೇಳಿದರು.
Vijaya Karnataka Web 3MALLU1_21
ಧಾರವಾಡ ಜಿಲ್ಲಾಧಿಕಾರಿ ಕಚೇರಿಯ ಸಭಾಭವನದಲ್ಲಿಶುಕ್ರವಾರ ಆಯೋಜಿಸಿದ್ದ ಸಭೆಯಲ್ಲಿಜಿಲ್ಲಾಉಸ್ತುವಾರಿ ಸಚಿವ ಜಗದೀಶ ಶೆಟ್ಟರ್‌ ಮಾತನಾಡಿದ


ನಗರದ ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿಶುಕ್ರವಾರ ಜಿಲ್ಲಾಮಟ್ಟದ ಅಧಿಕಾರಿಗಳು ಹಾಗೂ ಕಿಮ್ಸ್‌ ವೈದ್ಯರ ಸಭೆಯಲ್ಲಿಅವರು ಮಾತನಾಡಿದರು.

ಪ್ರಧಾನಮಂತ್ರಿ ಗರೀಬ್‌ ಕಲ್ಯಾಣ ಯೋಜನೆಯಡಿ ಮಹಿಳೆಯರ ಜನ್‌ಧನ್‌ ಖಾತೆಗಳಿಗೆ ತಲಾ 500 ರೂ. ಪಾವತಿಸಲಾಗುತ್ತಿದೆ. ಫಲಾನುಭವಿಗಳು ಶಿಸ್ತಿನಿಂದ ಸಾಮಾಜಿಕ ಅಂತರ ಕಾಯ್ದುಕೊಂಡು ತಮ್ಮ ಹಣ ಪಡೆಯಬೇಕು. 21 ದಿನಗಳ ಲಾಕ್‌ಡೌನ್‌ ಅವಧಿಯಲ್ಲಿಸಂಕಷ್ಟಕ್ಕೀಡಾಗುವ ಜನರಿಗೆ ನೆರವು ನೀಡಲು ಅನೇಕ ಸ್ವಯಂ ಸೇವಾ ಸಂಸ್ಥೆಗಳು ಮುಂದೆ ಬರುತ್ತಿವೆ. ಅವರು ನೀಡುವ ಆಹಾರ ಧಾನ್ಯ, ಮಾಸ್ಕ್‌, ಸ್ಯಾನಿಟೈಸರ್‌ ಮತ್ತಿತರ ವಸ್ತುಗಳನ್ನು ಸ್ವೀಕರಿಸಿ, ಅವರು ಹೇಳಿದ ಸ್ಥಳಗಳಿಗೆ ವಿತರಿಸಲು ಅಗತ್ಯ ಏರ್ಪಾಡು ಮಾಡಬೇಕು ಎಂದರು.

ಕಡುಬಡವ ಅರ್ಹ ಪಡಿತರ ಚೀಟಿದಾರರರಿಗೆ ಯಾವುದೇ ತೊಂದರೆಯಾಗದಂತೆ ಆಹಾರ ಧಾನ್ಯ ವಿತರಿಸಬೇಕು. ಒಟಿಪಿ ಸೇವೆ ಸಾಧ್ಯವಾಗದಿದ್ದರೆ ಸರಳ ರೀತಿಯಲ್ಲಿಪರಿಹಾರ ಕಂಡುಕೊಂಡು ಧಾನ್ಯ ಪೂರೈಸಬೇಕು ಎಂದರು.

ಜಿಲ್ಲಾಧಿಕಾರಿ ದೀಪಾ ಎಂ. ಮಾತನಾಡಿ, ರಾಜ್ಯ ಸರಕಾರದ ಸೂಚನೆಯಂತೆ ಪ್ರತಿನಿತ್ಯ 25 ಸಾವಿರ ಲೀ. ಹಾಲನ್ನು ಉಚಿತವಾಗಿ ಪೂರೈಸಲು ಕೊಳಚೆ ಪ್ರದೇಶಗಳ, ನಿರಾಶ್ರಿತರಿಗೆ, ವಲಸೆ ಕಾರ್ಮಿಕರನ್ನು ಗುರುತಿಸಲಾಗಿದೆ. ಸರಕಾರದ ವಿವಿಧ ಹಾಸ್ಟೆಲ್‌ಗಳಲ್ಲಿವಸತಿ ಸೌಕರ್ಯ ಕಲ್ಪಿಸಿರುವ ಜನರಿಗೆ ಧಾರ್ಮಿಕ ಮುಖಂಡರಿಂದ ಹಾಗೂ ಮನೋವೈದ್ಯರಿಂದ ಆಪ್ತ ಸಮಾಲೋಚನೆ ಏರ್ಪಡಿಸಲು ಕ್ರಮ ಕೈಗೊಳ್ಳಲಾಗಿದೆ ಎಂದರು.

ಕಿಮ್ಸ್‌ ನಿರ್ದೇಶಕ ಡಾ.ರಾಮಲಿಂಗಪ್ಪ ಮಾತನಾಡಿ, ದಿಲ್ಲಿಯ ಜಮಾತ್‌ ಕಾರ್ಯಕ್ರಮದಲ್ಲಿಭಾಗವಹಿಸಿ ಬಂದವರಲ್ಲಿರೋಗ ಲಕ್ಷಣ ಇಲ್ಲದಿದ್ದರೂ, ತಮ್ಮ ಗಂಟಲು ದ್ರವದ ಪ್ರಯೋಗಾಲಯ ಮಾದರಿ ಸಂಗ್ರಹಿಸಲು ಕಿಮ್ಸ್‌ಗೆ ಅಧಿಕ ಸಂಖ್ಯೆಯಲ್ಲಿಬರುತ್ತಿದ್ದಾರೆ. ಇದರ ಒತ್ತಡ ಕಡಿಮೆ ಮಾಡಲು ಎಸ್‌ಡಿಎಂ ಆಸ್ಪತ್ರೆಯಲ್ಲಿಯೂ ಫಿವರ್‌ ಕ್ಲಿನಿಕ್‌ ಹಾಗೂ ಗಂಟಲು ದ್ರವ ಸಂಗ್ರಹ ಕಾರ್ಯ ಆರಂಭಿಸಿದರೆ ಅನುಕೂಲವಾಗುತ್ತದೆ ಎಂದು ಮನವಿ ಮಾಡಿದರು.

ಶಾಸಕರಾದ ಅರವಿಂದ ಬೆಲ್ಲದ, ಶಂಕರ ಪಾಟೀಲ ಮುನೇನಕೊಪ್ಪ, ಅಮೃತ ದೇಸಾಯಿ, ನಗರ ಪೊಲೀಸ್‌ ಆಯುಕ್ತ ಆರ್‌. ದಿಲೀಪ್‌, ಎಸ್‌ಪಿ ವರ್ತಿಕಾ ಕಟಿಯಾರ್‌, ಸಿಇಒ ಡಾ.ಬಿ.ಸಿ.ಸತೀಶ, ಪಾಲಿಕೆ ಆಯುಕ್ತ ಡಾ.ಸುರೇಶ ಇಟ್ನಾಳ, ಅಪರ ಜಿಲ್ಲಾಧಿಕಾರಿ ಶಿವಾನಂದ ಕರಾಳೆ, ಉಪ ವಿಭಾಗಾಧಿಕಾರಿ ಮಹಮ್ಮದ ಜುಬೇರ್‌, ಆಹಾರ ಜಂಟಿ ನಿರ್ದೇಶಕ ಸದಾಶಿವ ಮರ್ಜಿ, ಕಿಮ್ಸ್‌ ವೈದ್ಯಕೀಯ ಅಧೀಕ್ಷಕ ಡಾ. ಅರುಣಕುಮಾರ ಚವ್ಹಾಣ ಉಪಸ್ಥಿತರಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ