Please enable javascript.Omicron,ಡೆಲ್ಟಾಗಿಂತಲೂ 3 ಪಟ್ಟು ವೇಗವಾಗಿ ಹರಡುತ್ತೆ ಓಮಿಕ್ರಾನ್: ಕರ್ನಾಟಕದಲ್ಲಿ ಹೊಸ ವರ್ಷದ ಸಂಭ್ರಮಾಚರಣೆಗೆ ಬ್ರೇಕ್..! - omicron 3 times more transmissible than delta: karnataka govt bans new year celebration - Vijay Karnataka

ಡೆಲ್ಟಾಗಿಂತಲೂ 3 ಪಟ್ಟು ವೇಗವಾಗಿ ಹರಡುತ್ತೆ ಓಮಿಕ್ರಾನ್: ಕರ್ನಾಟಕದಲ್ಲಿ ಹೊಸ ವರ್ಷದ ಸಂಭ್ರಮಾಚರಣೆಗೆ ಬ್ರೇಕ್..!

Vijaya Karnataka Web 21 Dec 2021, 9:19 pm
Subscribe

ಡೆಲ್ಟಾಗಿಂತಾ 3 ಪಟ್ಟು ವೇಗದಲ್ಲಿ ಹರಡುವ ಸಾಮರ್ಥ್ಯ ಹೊಂದಿರುವ ಓಮಿಕ್ರಾನ್ ಸೋಂಕನ್ನು ನಿಗ್ರಹಿಸುವ ನಿಟ್ಟಿನಲ್ಲಿ ಆಯಾ ರಾಜ್ಯಗಳು ಜಿಲ್ಲಾ ಮಟ್ಟದಲ್ಲಿ ಹಾಗೂ ಸ್ಥಳೀಯ ಮಟ್ಟದಲ್ಲಿ ಸೂಕ್ತ ಕಾರ್ಯತಂತ್ರ ರೂಪಿಸಬೇಕು ಎಂದು ಕೇಂದ್ರ ಸರ್ಕಾರ ಹೇಳಿದೆ.

omicron 3 times more transmissible than delta karnataka govt bans new year celebration
ಡೆಲ್ಟಾಗಿಂತಲೂ 3 ಪಟ್ಟು ವೇಗವಾಗಿ ಹರಡುತ್ತೆ ಓಮಿಕ್ರಾನ್: ಕರ್ನಾಟಕದಲ್ಲಿ ಹೊಸ ವರ್ಷದ ಸಂಭ್ರಮಾಚರಣೆಗೆ ಬ್ರೇಕ್..!
ಹೊಸ ದಿಲ್ಲಿ: ಕೊರೊನಾ ವೈರಸ್ ರೂಪಾಂತರಿ ಓಮಿಕ್ರಾನ್ ವೈರಸ್ ಡೆಲ್ಟಾ ರೂಪಾಂತರಿಗಿಂತಲೂ 3 ಪಟ್ಟು ಹೆಚ್ಚು ವೇಗವಾಗಿ ಹರಡುವ ಸಾಮರ್ಥ್ಯ ಹೊಂದಿದೆ ಎಂದು ಕೇಂದ್ರ ಸರ್ಕಾರ ಹೇಳಿದೆ. ಈ ಸಂಬಂಧ ದೇಶದ ಎಲ್ಲಾ ರಾಜ್ಯ ಸರ್ಕಾರಗಳಿಗೆ ಕೇಂದ್ರ ಸರ್ಕಾರ ಪತ್ರ ಬರೆದಿದೆ.

ಓಮಿಕ್ರಾನ್ ವೈರಸ್ ಇದೀಗ ಅಮೆರಿಕದಲ್ಲಿ ತೀವ್ರ ಸ್ವರೂಪದಲ್ಲಿ ಅಬ್ಬರಿಸುತ್ತಿದೆ. ಅಮೆರಿಕದಲ್ಲಿ ದೃಢಪಡುತ್ತಿರುವ ಒಟ್ಟು ಪ್ರಕರಣಗಳ ಪೈಕಿ ಶೇ. 73ರಷ್ಟು ಪ್ರಕರಣಗಳು ಓಮಿಕ್ರಾನ್ ರೂಪಾಂತರಿಕ ಎಂದು ದೃಢಪಡುತ್ತಿವೆ. ಆತಂಕಕಾರಿ ಸಂಗತಿ ಎಂದರೆ ಸದ್ಯ ಬಳಕೆಯಲ್ಲಿರುವ ಕೊರೊನಾ ನಿರೋಧಕ ಲಸಿಕೆಯು ಓಮಿಕ್ರಾನ್ ವಿರುದ್ಧ ಹೋರಾಡುವಲ್ಲಿ ಕಡಿಮೆ ಸಾಮರ್ಥ್ಯ ಪ್ರದರ್ಶಿಸುತ್ತಿದೆ ಎಂಬ ಅಭಿಪ್ರಾಯವೂ ವ್ಯಕ್ತವಾಗಿದೆ.

​ದೇಶದಲ್ಲಿ 216ಕ್ಕೆ ಏರಿದ ಓಮಿಕ್ರಾನ್..!

​ದೇಶದಲ್ಲಿ 216ಕ್ಕೆ ಏರಿದ ಓಮಿಕ್ರಾನ್..!

ಮಂಗಳವಾರ ಸಂಜೆಯ ವರದಿಗಳ ಪ್ರಕಾರ ಭಾರತದಲ್ಲಿ ಓಮಿಕ್ರಾನ್ ಪ್ರಕರಣಗಳ ಸಂಖ್ಯೆ 216ಕ್ಕೆ ಏರಿಕೆ ಕಂಡಿದೆ. ಜಮ್ಮು ಕಾಶ್ಮೀರಕ್ಕೂ ಓಮಿಕ್ರಾನ್ ಕಾಲಿಟ್ಟಿದ್ದು, 3 ಹೊಸ ಪ್ರಕರಣಗಳು ಪತ್ತೆಯಾಗಿವೆ. ಈ ಹಿನ್ನೆಲೆಯಲ್ಲಿ ಎಲ್ಲಾ ರಾಜ್ಯ ಸರ್ಕಾರಗಳೂ ‘ಸಕ್ರಿಯ ವಾರ್ ರೂಂ’ ಸ್ಥಾಪಿಸಬೇಕು ಎಂದು ಕೇಂದ್ರ ಸರ್ಕಾರವು ತನ್ನ ಪತ್ರದಲ್ಲಿ ತಿಳಿಸಿದೆ. ಕೇಂದ್ರ ಆರೋಗ್ಯ ಸಚಿವಾಲಯದ ಕಾರ್ಯದರ್ಶಿಗಳು ಬರೆದಿರುವ ಈ ಪತ್ರದಲ್ಲಿ ಓಮಿಕ್ರಾನ್ ವಿರುದ್ಧ ಹೋರಾಡಲು ರಾಜ್ಯ ಸರ್ಕಾರ ಸನ್ನದ್ಧವಾಗಿರಬೇಕೆಂದು ಹೇಳಲಾಗಿದೆ.

ಕೇಂದ್ರ ಆರೋಗ್ಯ ಸಚಿವಾಲಯದ ಕಾರ್ಯದರ್ಶಿ ರಾಜೇಶ್ ಭೂಷಣ್ ಅವರು ಬರೆದಿರುವ ಪತ್ರದಲ್ಲಿ ಓಮಿಕ್ರಾನ್ ಹರಡುವಿಕೆಯ ವೇಗದ ಬಗ್ಗೆ ಸಮಗ್ರ ಮಾಹಿತಿ ನೀಡಲಾಗಿದೆ. ಡೆಲ್ಟಾಗಿಂತಾ 3 ಪಟ್ಟು ವೇಗದಲ್ಲಿ ಹರಡುವ ಸಾಮರ್ಥ್ಯ ಹೊಂದಿರುವ ಓಮಿಕ್ರಾನ್ ಸೋಂಕನ್ನು ನಿಗ್ರಹಿಸುವ ನಿಟ್ಟಿನಲ್ಲಿ ಆಯಾ ರಾಜ್ಯಗಳು ಜಿಲ್ಲಾ ಮಟ್ಟದಲ್ಲಿ ಹಾಗೂ ಸ್ಥಳೀಯ ಮಟ್ಟದಲ್ಲಿ ಸೂಕ್ತ ಕಾರ್ಯತಂತ್ರ ರೂಪಿಸಬೇಕು ಎಂದು ತಿಳಿಸಲಾಗಿದೆ.

ಕರ್ನಾಟಕದಲ್ಲಿ ಹೊಸ ವರ್ಷದ ಸಂಭ್ರಮಾಚರಣೆಗೆ ಬ್ರೇಕ್..!

ಕರ್ನಾಟಕದಲ್ಲಿ ಹೊಸ ವರ್ಷದ ಸಂಭ್ರಮಾಚರಣೆಗೆ ಬ್ರೇಕ್..!

ಕರ್ನಾಟಕದಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಹೊಸ ವರ್ಷಾಚರಣೆಗೆ ನಿರ್ಬಂಧ ಹೇರಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಡಿಜೆ ಬಳಕೆ ಮತ್ತು ಬಹಿರಂಗ ಸಂಭ್ರಮಾಚರಣೆಗಳನ್ನು ನಿಷೇಧಿಸುವ ತೀರ್ಮಾನ ಕೈಗೊಳ್ಳಲಾಗಿದೆ. ಸಿಎಂ ಬಸವರಾಜ ಬೊಮ್ಮಾಯಿ ಈ ವಿಷಯ ತಿಳಿಸಿದ್ದಾರೆ.

ಕೊರೊನಾ ನಿಯಂತ್ರಣ ಕುರಿತು ಸಿಎಂ ಬೊಮ್ಮಾಯಿ ನೇತೃತ್ವದಲ್ಲಿ ಬೆಳಗಾವಿಯ ಸುವರ್ಣ ಸೌಧದಲ್ಲಿ ನಡೆದ ಉನ್ನತ ಮಟ್ಟದ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಸಭೆಯ ಬಳಿಕ ಸುದ್ದಿಗಾರರ ಜತೆ ಮಾತನಾಡಿದ‌ ಸಿಎಂ ಬೊಮ್ಮಾಯಿ, ಡಿಸೆಂಬರ್ 30 ರಿಂದ ಜನವರಿ 2ರವರೆಗೂ ರಾಜ್ಯಾದ್ಯಂತ ನಿರ್ಬಂಧ ಜಾರಿಯಲ್ಲಿರಲಿದೆ ಎಂದು ಹೇಳಿದ್ದಾರೆ. ಈ ಅವಧಿಯಲ್ಲಿ ಬಹಿರಂಗ ಸಂಭ್ರಮಾಚರಣೆಗೆ ಅವಕಾಶ ಇರುವುದಿಲ್ಲ.

ಬಾರ್, ರೆಸ್ಟೋರೆಂಟ್ ಮತ್ತಿತರ ಸ್ಥಳಗಳಲ್ಲಿ ಒಟ್ಟು ಸಾಮರ್ಥ್ಯದ ಶೇಕಡ 50ರಷ್ಟು ಮಂದಿಗೆ ಮಾತ್ರ ಪ್ರವೇಶ ನೀಡಬೇಕು. ಅಲ್ಲಿನ ಎಲ್ಲ ಸಿಬ್ಬಂದಿ ಎರಡು ಡೋಸ್ ಕೋವಿಡ್ ಲಸಿಕೆ ಪಡೆದಿರುವುದು ಕಡ್ಡಾಯ. ಬೆಂಗಳೂರಿನ ಎಂ. ಜಿ. ರಸ್ತೆ ಮತ್ತು ಬ್ರಿಗೇಡ್ ರಸ್ತೆಯಲ್ಲಿ ಈ ಹಿಂದೆ ನಡೆಯುತ್ತಿದ್ದ ಮಾದರಿಯ ಹೊಸ ವರ್ಷಾಚರಣೆಗೆ ರಾಜ್ಯದ ಯಾವುದೇ ಭಾಗದಲ್ಲೂ ಅವಕಾಶ ಇರುವುದಿಲ್ಲ ಎಂದು ಸಿಎಂ ತಿಳಿಸಿದರು.

​ಮಹಾರಾಷ್ಟ್ರದಲ್ಲಿ ಓಮಿಕ್ರಾನ್ ಆರ್ಭಟ..!

​ಮಹಾರಾಷ್ಟ್ರದಲ್ಲಿ ಓಮಿಕ್ರಾನ್ ಆರ್ಭಟ..!

ಇನ್ನೊಂದೆಡೆ ಮಹಾರಾಷ್ಟ್ರ ರಾಜ್ಯದಲ್ಲಿ ಮಂಗಳವಾರ 11 ಓಮಿಕ್ರಾನ್ ಹೊಸ ಕೇಸ್‌ಗಳು ಪತ್ತೆಯಾಗಿದ್ದು, ಮಹಾರಾಷ್ಟ್ರದಲ್ಲಿ ಈವರೆಗೂ 65 ಪ್ರಕರಣಗಳು ದೃಢಪಟ್ಟಿವೆ. ಅಧ್ಯಯನಗಳ ಪ್ರಕಾರ, ರೋಗ ನಿರೋಧಕ ಥೆರಪಿ ಪದ್ದತಿ ಕೂಡಾ ಓಮಿಕ್ರಾನ್ ಸೋಂಕಿನ ವಿರುದ್ಧದ ಹೋರಾಟಕ್ಕೆ ನೆರವಾಗೋದಿಲ್ಲ ಎಂಬ ಅಭಿಪ್ರಾಯ ವ್ಯಕ್ತವಾಗಿದೆ.

ಈ ನಡುವೆ ಕೇರಳ ಹಾಗೂ ಆಂಧ್ರ ಪ್ರದೇಶ ರಾಜ್ಯಗಳಲ್ಲೂ ಕೊರೊನಾ ಪ್ರಕರಣಗಳು ದಿಢೀರ್ ಏರಿಕೆ ಕಂಡಿವೆ. ಕೇರಳದಲ್ಲಿ ಮಂಗಳವಾರ ಬರೋಬ್ಬರಿ 2,748 ಹೊಸ ಪ್ರಕರಣಗಳು ವರದಿಯಾಗಿವೆ.

​​ಅಂತಾರಾಷ್ಟ್ರೀಯ ಮಟ್ಟದಲ್ಲೂ ಓಮಿಕ್ರಾನ್ ಅಬ್ಬರ..!

​​ಅಂತಾರಾಷ್ಟ್ರೀಯ ಮಟ್ಟದಲ್ಲೂ ಓಮಿಕ್ರಾನ್ ಅಬ್ಬರ..!

ಅಮೆರಿಕದಲ್ಲಿ ಈಗಾಗಲೇ ಓಮಿಕ್ರಾನ್ ಕೇಸ್‌ಗಳು ಡೆಲ್ಟಾ ಕೇಸ್‌ಗಳನ್ನು ಹಿಂದಿಕ್ಕಿವೆ. ಅಮೆರಿಕದಲ್ಲಿ ಪ್ರತಿ ದಿನ ದೃಢಪಡುತ್ತಿರುವ ಹೊಸ ಪ್ರಕರಣಗಳ ಪೈಕಿ, ಓಮಿಕ್ರಾನ್ ಪಾಲು ಬರೋಬ್ಬರಿ ಶೇ. 73ರಷ್ಟಿದೆ. ಇನ್ನು ವಿಶ್ವದಲ್ಲೇ ಅತಿ ಹೆಚ್ಚು ಕೊರೊನಾ ಲಸಿಕೆ ನೀಡಿರುವ ಹೆಗ್ಗಳಿಕೆ ಹೊಂದಿರುವ ಯುಎಇನಲ್ಲೂ ಹೊಸ ಕೇಸ್‌ಗಳ ಸಂಖ್ಯೆ ದಿಢೀರ್ ಏರಿಕೆ ಕಂಡಿದೆ. ಡಿಸೆಂಬರ್‌ ತಿಂಗಳಲ್ಲೇ ಅತಿ ಹೆಚ್ಚು ಪ್ರಕರಣ ಮಂಗಳವಾರ ಒಂದೇ ದಿನ ದೃಢಪಟ್ಟಿದೆ. ಕಳೆದ 24 ಗಂಟೆಗಳಲ್ಲಿ ಯುಎಇನಲ್ಲಿ 452 ಹೊಸ ಪ್ರಕರಣಗಳು ವರದಿಯಾಗಿವೆ.

Video-ಕರ್ನಾಟಕದಲ್ಲಿ ಹೊಸ ವರ್ಷಾಚರಣೆಗೆ ಬ್ರೇಕ್‌! ಡಿ.30 ರಿಂದ ಜ.2ರವರೆಗೂ ನಿರ್ಬಂಧ ಘೋಷಿಸಿದ ಬೊಮ್ಮಾಯಿ

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ