Please enable javascript.Green Energy,Global Investors Meet 2022 | ಜಿಮ್ ಸಮಾವೇಶದಲ್ಲಿ ಹಸಿರು ಇಂಧನ ಕ್ಷೇತ್ರದಲ್ಲಿ 2 ಲಕ್ಷ ಕೋಟಿ ರೂ. ಹೂಡಿಕೆ: ಸುನಿಲ್‌ ಕುಮಾರ್ - global investors meet gim 2022 in bengaluru green energy 2 lakh crore rupees agreement karnataka minister sunil kumar - Vijay Karnataka

Global Investors Meet 2022 | ಜಿಮ್ ಸಮಾವೇಶದಲ್ಲಿ ಹಸಿರು ಇಂಧನ ಕ್ಷೇತ್ರದಲ್ಲಿ 2 ಲಕ್ಷ ಕೋಟಿ ರೂ. ಹೂಡಿಕೆ: ಸುನಿಲ್‌ ಕುಮಾರ್

Edited byಹೇಮಂತ್ ಕುಮಾರ್ ಎಸ್ | Reported byಇರ್ಷಾದ್ ಉಪ್ಪಿನಂಗಡಿ | Vijaya Karnataka Web 4 Nov 2022, 6:21 pm
Subscribe

Investment on Green Energy: ಶುಕ್ರವಾರ ನಗರದ ಅರಮನೆ ಮೈದಾನದಲ್ಲಿ ಜಾಗತಿಕ ಹೂಡಿಕೆದಾರರ ಸಮಾವೇಶದ (Global Investors Meet) ಸಮಾರೋಪ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಹೂಡಿಕೆದಾರರ ಸಮಾವೇಶ ಅಭೂತಪೂರ್ವವಾಗಿ ಯಶಸ್ವಿ ಆಗಿದೆ. ದೇಶದ ರಾಜ್ಯದ ಆರ್ಥಿಕ ಬೆಳವಣಿಗೆಗೆ ದೊಡ್ಡ ಪ್ರಮಾಣದಲ್ಲಿ ಉದ್ಯಮಿಗಳ ಅಗತ್ಯ ಇದೆ. ಇಂಧನ ಇಲಾಖೆ ಉದ್ಯಮ ಹಾಗೂ ಆರ್ಥಿಕ ಪ್ರಗತಿಗೆ ಸಿಎಂ ಬಸವರಾಜ ಬೊಮ್ಮಾಯಿ (Basavaraj Bommai) ನೇತೃತ್ವದಲ್ಲಿ ಒಟ್ಟಾಗಿ ಕೆಲಸ ಮಾಡುತ್ತಿದ್ದೇವೆ ಎಂದರು‌.

ಹೈಲೈಟ್ಸ್‌:


  • ಅರಮನೆ ಮೈದಾನದಲ್ಲಿ ಜಾಗತಿಕ ಹೂಡಿಕೆದಾರರ ಸಮಾವೇಶದ ಸಮಾರೋಪ ಕಾರ್ಯಕ್ರಮ
  • ಹಸಿರು ಇಂಧನ ಉತ್ಪಾದನೆಯಲ್ಲಿ ಬೇರೆ ರಾಜ್ಯಗಳಿಗಿಂತ ಕರ್ನಾಟಕ ಮುಂದೆ
  • ರಾಜ್ಯದಲ್ಲಿ 15,800 ಮೆಗಾವ್ಯಾಟ್ ಉತ್ಪಾದನೆ ಗ್ರೀನ್ ಎನರ್ಜಿ ಮೂಲಕ ಆಗುತ್ತಿದೆ
Investors meet 2022 bengaluru
ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶದ ಸಮಾರೋಮ
ಬೆಂಗಳೂರು: ಜಾಗತಿಕ ಬಂಡವಾಳ ಹೂಡಿಕೆದಾರರ (Global Investors Meet) ಸಮಾವೇಶದಲ್ಲಿ ಗ್ರೀನ್ ಎನರ್ಜಿ (Green Energy) ಕ್ಷೇತ್ರದಲ್ಲಿ ಎರಡು ಲಕ್ಷ ಕೋಟಿ ರೂಪಾಯಿ ಹೂಡಿಕೆ ಒಪ್ಪಂದ ಆಗಿದೆ ಎಂದು ಇಂಧನ ಸಚಿವ ವಿ.ಸುನಿಲ್‌ ಕುಮಾರ್ (V Sunil Kumar) ತಿಳಿಸಿದರು.
ಶುಕ್ರವಾರ ನಗರದ ಅರಮನೆ ಮೈದಾನದಲ್ಲಿ ಜಾಗತಿಕ ಹೂಡಿಕೆದಾರರ ಸಮಾವೇಶದ ಸಮಾರೋಪ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಹೂಡಿಕೆದಾರರ ಸಮಾವೇಶ ಅಭೂತಪೂರ್ವವಾಗಿ ಯಶಸ್ವಿ ಆಗಿದೆ. ದೇಶದ ರಾಜ್ಯದ ಆರ್ಥಿಕ ಬೆಳವಣಿಗೆಗೆ ದೊಡ್ಡ ಪ್ರಮಾಣದಲ್ಲಿ ಉದ್ಯಮಿಗಳ ಅಗತ್ಯ ಇದೆ. ಇಂಧನ ಇಲಾಖೆ ಉದ್ಯಮ ಹಾಗೂ ಆರ್ಥಿಕ ಪ್ರಗತಿಗೆ ಸಿಎಂ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಒಟ್ಟಾಗಿ ಕೆಲಸ ಮಾಡುತ್ತಿದ್ದೇವೆ ಎಂದರು‌.
Global Investors Meet 2022 | ವಿಶ್ವ ಬಂಡವಾಳ ಹೂಡಿಕೆದಾರರ ಸಮಾವೇಶ ಮೊದಲ ದಿನ ಯಶಸ್ವಿ: ಮುರುಗೇಶ್ ನಿರಾಣಿ
ಹಸಿರು ಇಂಧನ ಉತ್ಪಾದನೆಯಲ್ಲಿ ಬೇರೆ ರಾಜ್ಯಗಳಿಗಿಂತ ನಮ್ಮ ರಾಜ್ಯ ಮುಂದೆ ಇದೆ. ಕರ್ನಾಟಕದಲ್ಲಿ ಉತ್ಪಾದನೆ ಆಗುವ 30,000 ಮೆಗಾವ್ಯಾಟ್ ಇಂಧನ ಪೈಕಿ 15,800 ಮೆಗಾವ್ಯಾಟ್ ಉತ್ಪಾದನೆ ಗ್ರೀನ್ ಎನರ್ಜಿ ಮೂಲಕ ಮಾಡುತ್ತಿದೆ ಎಂದರು.

ಸಿಎಂ ಬಸವರಾಜ ಬೊಮ್ಮಾಯಿ ಅವರು, ಸೋಲಾರ್ ಹಾಗೂ ವಿಂಡ್‌ ಒಳಗೊಂಡ ಹೈಬ್ರೀಡ್ ಪಾರ್ಕ್ ನಿರ್ಮಾಣ ಘೋಷಣೆಯನ್ನು ಬಜೆಟ್‌ನಲ್ಲಿ ಮಾಡಿದ್ದಾರೆ. ಇಂದನ ಕ್ಷೇತ್ರದಲ್ಲಿ ಹೂಡಿಕೆಗೆ ಕರ್ನಾಟಕದಲ್ಲಿ ವಿಶೇಷ ಮಹತ್ವ ಬಂದಿದೆ. ಇಂಧನ ಕ್ಷೇತ್ರದಲ್ಲಿ ಹೂಡಿಕೆಗೆ ಅಗತ್ಯವಿರುವ
ಎಲ್ಲ ರೀತಿ ತಯಾರಿ ಇಲಾಖೆ ಮಾಡಿದೆ.
Invest Karnataka 2022: ತರಕಾರಿಯಿಂದ ತಯಾರಾಗಿದೆ ಈ ಕೈ ಚೀಲ, ಬಿಸಿ ನೀರಿನಲ್ಲಿ ಒಂದೇ ನಿಮಿಷಕ್ಕೆ ಕರಗುತ್ತೆ!
ಇಂಧನ ಬೇಡಿಕೆಗೆ ಅಗತ್ಯವಿರುವ ಪೂರೈಕೆಗೂ ಕ್ರಮ ಕೈಗೊಳ್ಳಲಾಗುತ್ತಿದೆ. ಉತ್ಪಾದನೆ ಹೆಚ್ಚಾದಾಗ ಗ್ರಿಡ್ ನಿರ್ವಹಣೆ, ಹೊಸ ಸಬ್ ಸ್ಟೇಷನ್ ನಿರ್ವಹಣೆಯನ್ನು ಯಶಸ್ವಿ ಆಗಿ ನಿರ್ವಹಣೆ ಮಾಡುತ್ತೇವೆ. ಗುಣಮಟ್ಟದ ವಿದ್ಯುತ್ ಸರಜರಾಜು ಮಾಡುವ 34 ಹೆಚ್ಚು ಸಬ್ ಸ್ಟೇಷನ್ ನಿರ್ಮಾಣ ಮಾಡಲಾಗಿದೆ. 100ಕ್ಕೂ ಹೆಚ್ಚು ಸಬ್ ಸ್ಟೇಷನ್ ಅಪ್ ಗ್ರೇಡ್ ಮಾಡಲಾಗಿದೆ ಎಂದರು.

ಸೋಲಾರ್ ಉತ್ಪಾದನೆಯಲ್ಲೂ ಕರ್ನಾಟಕ ನಂಬರ್ ಒನ್ ಆಗಿದೆ. ಹಸಿರು ಇಂಧನದ ಉತ್ಪಾದನೆ ಹೆಚ್ಚು ಮಾಡುವ ನಿಟ್ಟಿನಲ್ಲೂ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶದ ಸಮಾರೋಪ ಕಾರ್ಯಕ್ರಮದಲ್ಲಿ ಕೈಗಾರಿಕಾ ಸಚಿವ ಮುರುಗೇಶ್ ಆರ್ ನಿರಾಣಿ ಮಾತನಾಡಿ, ಕೆಲಸದ ಒತ್ತಡದ ನಡುವೆಯೂ ಪ್ರಧಾನಿ ಮೋದಿ ವರ್ಚುವಲ್ ಮೂಲಕ ಸಮಾವೇಶವನ್ನು ಉದ್ಘಾಟನೆ ಮಾಡಿರುವುದಕ್ಕೆ ಧನ್ಯವಾದ ಸಲ್ಲಿಸಿದರು‌.
Invest Karnataka 2022: ಇದು ಕಾರು, ಅಲ್ಲಲ್ಲ ಬೈಕ್‌ ! ಉತ್ಸಾಹಿ ಯುವ ಉದ್ಯಮಿಗಳಿಂದ ರಿವರ್ಸ್ ಟ್ರೈಕ್ ಎಲೆಕ್ಟ್ರಿಕ್ ವೆಹಿಕಲ್

ಕರ್ನಾಟಕ ರಾಜ್ಯ ಕೈಗಾರಿಕೆಗಳಿಗೆ ಹೆಚ್ಚಿನ ಒತ್ತು ನೀಡಿದೆ. ಮೈಸೂರು ಮಹಾರಾಜರ ಕಾಲದಲ್ಲೇ ಕೈಗಾರಿಕೆಗಳಿಗೆ ಆದ್ಯತೆ ನೀಡಿದ್ದರು. ಕರ್ನಾಟಕದಲ್ಲಿ ಉದ್ಯಮಗಳಿಗೆ ಹೆಚ್ಚಿನ ರಿಯಾಯತಿ ನೀಡಲಾಗುತ್ತಿದೆ ಎಂದ ಅವರು 2025ರ ಜನವರಿಯಲ್ಲಿ ಮತ್ತೆ ಹೂಡಿಕೆದಾರರ ಸಮಾವೇಶ ರಾಜ್ಯದಲ್ಲಿ ನಡೆಯಲಿದೆ ಎಂದರು‌.
'ಯೂಲು'ನಿಂದ ರಾಜ್ಯದಲ್ಲಿ ₹1200 ಕೋಟಿ ಹೂಡಿಕೆ, 1 ಲಕ್ಷ ಎಲೆಕ್ಟ್ರಿಕ್‌ ವಾಹನಗಳ ನಿಯೋಜನೆ ಭರವಸೆ
ಸಮಾವೇಶದಲ್ಲಿ ಈವರೆಗೆ ಒಟ್ಟು 10 ಲಕ್ಷ ಕೋಟಿ ರೂ. ಹೂಡಿಕೆ ಒಪ್ಪಂದಕ್ಕೆ ಸಹಿ ಮಾಡಲಾಗಿದೆ. ಅದರಲ್ಲೂ ಬೆಂಗಳೂರು ಹೊರತಾಗಿ ಬೇರೆ ಜಿಲ್ಲೆಗಳಲ್ಲಿ ಶೇ.70ರಷ್ಟು ಹೂಡಿಕೆ ಒಪ್ಪಂದಗಳಿಗೆ‌ ಸಹಿ ಮಾಡಲಾಗಿದೆ ಎಂದರು.
ಹೇಮಂತ್ ಕುಮಾರ್ ಎಸ್
ಲೇಖಕರ ಬಗ್ಗೆ
ಹೇಮಂತ್ ಕುಮಾರ್ ಎಸ್
ವಿಜಯ ಕರ್ನಾಟಕ ಡಿಜಿಟಲ್‌ ವಿಭಾಗದಲ್ಲಿ ಪತ್ರಕರ್ತನಾಗಿ 2022ರಿಂದ ಕಾರ್ಯನಿರ್ವಹಿಸುತ್ತಿರುವ ಹೇಮಂತ್ ಮಾಧ್ಯಮ ರಂಗಕ್ಕೆ ಅಧಿಕೃತ ಪ್ರವೇಶ ಆಗಿದ್ದು 2011ರಲ್ಲಿ ನ್ಯೂಸ್ ಚಾನೆಲ್ ಮೂಲಕ. ಅದಕ್ಕೂ ಹಿಂದಿನಿಂದ ವಾರಪತ್ರಿಕೆಗಳಿಗೆ ಪ್ರಚಲಿತ ವಿಜ್ಞಾನ-ತಂತ್ರಜ್ಞಾನಕ್ಕೆ ಸಂಬಂಧಿಸಿದ ಲೇಖನಗಳ ಬರವಣಿಗೆಯಿಂದ ಬರಹದ ನಂಟು ಬೆಳೆಸಿಕೊಂಡಿದ್ದರು. ಸಿನಿಮಾ, ಕ್ರೈಂ, ರಾಜಕೀಯ, ಮೆಟ್ರೊ, ಕನ್ನಡ ಮತ್ತು ಸಂಸ್ಕೃತಿ, ಶಿಕ್ಷಣ, ರಾಷ್ಟ್ರ-ಅಂತಾರಾಷ್ಟ್ರೀಯ ವಿದ್ಯಮಾನಗಳು ಹಾಗೂ ಜಿಲ್ಲೆಗಳಲ್ಲಿನ ಬೆಳವಣಿಗೆಗಳ ಬಗ್ಗೆ ಆಸಕ್ತಿ ವಿಸ್ತರಿಸಿಕೊಂಡಿದ್ದಾರೆ. ಟಿವಿ, ಪತ್ರಿಕೆ, ಡಿಜಿಟಲ್‌/ ವೆಬ್‌, ಕೆಲ ಸಮಯ ರೇಡಿಯೊ ಚಾನೆಲ್‌ನಲ್ಲೂ ತೊಡಗಿಸಿಕೊಂಡ ಅನುಭವಿರುವ ಇವರ ಮಂತ್ರ 'ಬದುಕು ನಿರಂತರ'. ಚಾರಣ, ರಂಗಭೂಮಿ, ಪ್ರವಾಸ, ಓದು,...ಹೀಗೆ ಒಂದಷ್ಟು ಅಭ್ಯಾಸ-ಹವ್ಯಾಸಗಳು ಜೊತೆಗಿವೆ.... ಇನ್ನಷ್ಟು ಓದಿ
ಕಾಮೆಂಟ್‌ ಮಾಡಿ

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ