ಆ್ಯಪ್ನಗರ

ಜಿಲ್ಲಾ, ತಾಲೂಕು ಪಂಚಾಯತಿ ಚುನಾವಣೆ ಪ್ರಕ್ರಿಯೆ 2024 ಜನವರಿ ಅಂತ್ಯಕ್ಕೆ ಆರಂಭ? ಕ್ಷೇತ್ರ ವಿಂಗಡಣೆ, ಮೀಸಲು ನಿಗದಿ ಚುರುಕು

District And Taluk Panchayat Election In Karnataka: ಕರ್ನಾಟಕದಲ್ಲಿ ಹಲವು ವರ್ಷಗಳಿಂದ ಬಾಕಿ ಉಳಿದಿದ್ದ ಜಿಲ್ಲಾ ಹಾಗೂ ಗ್ರಾಮ ಪಂಚಾಯಿತಿ ಚುನಾವಣೆಯು ಶೀಘ್ರದಲ್ಲಿ ನಡೆಯುವ ಸಾಧ್ಯತೆ ಇದೆ. ಕ್ಷೇತ್ರ ವಿಂಗಡಣೆ, ಮೀಸಲಾತಿ ನಿಗದಿ ಬಗ್ಗೆ ಶೀಘ್ರವೇ ಸರ್ಕಾರ ಅಧಿಸೂಚನೆ ಹೊರಡಿಸಲಿ ಎಂದು ಹೈಕೋರ್ಟ್‌ಗೆ ಸರ್ಕಾರದ ಪರ ವಕೀಲರು ಮಾಹಿತಿ ನೀಡಿದ್ದಾರೆ. ಈ ಬಗ್ಗೆ ಹೆಚ್ಚಿನ ವಿವರ ಇಲ್ಲಿದೆ.

Edited by ಜಯಪ್ರಕಾಶ್‌ ಬಿರಾದಾರ್‌ | Vijaya Karnataka Web 19 Dec 2023, 11:24 pm

ಹೈಲೈಟ್ಸ್‌:

  • ರಾಜ್ಯದ ಜಿಲ್ಲಾ ಮತ್ತು ತಾಲೂಕು ಪಂಚಾಯಿತಿ ಕ್ಷೇತ್ರ ಪುನರ್‌ ವಿಂಗಡಣೆ ಮತ್ತು ಮೀಸಲು ನಿಗದಿ ಪ್ರಕ್ರಿಯೆ ಒಂದು ತಿಂಗಳಲ್ಲಿ ಪೂರ್ಣ.
  • ಒಂದು ತಿಂಗಳಲ್ಲಿ ಪೂರ್ಣಗೊಳಿಸಲಾಗುವುದು ಎಂದು ಸರಕಾರ ಹೈಕೋರ್ಟ್‌ಗೆ ಮಂಗಳವಾರ ಭರವಸೆ.
  • ಮುಂದಿನ ಒಂದು ತಿಂಗಳಲ್ಲಿ ಚುನಾವಣಾ ಪ್ರಕ್ರಿಯೆ ಆರಂಭವಾಗುವ ಸಾಧ್ಯತೆ ಇದೆ.
ಹೈಲೈಟ್ಸ್‌ ಮಾತ್ರವೇ ಓದಲು ಆ್ಯಪ್‌ ಡೌನ್‌ಲೋಡ್‌ ಮಾಡಿ
Vijaya Karnataka Web vv (21)
ಸಾಂದರ್ಭಿಕ ಚಿತ್ರ
ಬೆಂಗಳೂರು: ರಾಜ್ಯದ ಜಿಲ್ಲಾ ಮತ್ತು ತಾಲೂಕು ಪಂಚಾಯಿತಿ ಕ್ಷೇತ್ರ ಪುನರ್‌ ವಿಂಗಡಣೆ ಮತ್ತು ಮೀಸಲು ನಿಗದಿ ಪ್ರಕ್ರಿಯೆಗಳನ್ನು ಒಂದು ತಿಂಗಳಲ್ಲಿ ಪೂರ್ಣಗೊಳಿಸಲಾಗುವುದು ಎಂದು ಸರಕಾರ ಹೈಕೋರ್ಟ್‌ಗೆ ಮಂಗಳವಾರ ಭರವಸೆ ನೀಡಿದೆ.
ಇದರಿಂದಾಗಿ ಮುಂದಿನ ಒಂದು ತಿಂಗಳಲ್ಲಿ ಚುನಾವಣಾ ಪ್ರಕ್ರಿಯೆ ಆರಂಭವಾಗುವ ಸಾಧ್ಯತೆ ಇದೆ. ಗಡಿ ನಿರ್ಣಯ ಮತ್ತು ಮೀಸಲು ನಿಗದಿ ಅಧಿಕಾರವಧಿನ್ನು ರಾಜ್ಯ ಚುನಾವಣಾ ಆಯೋಗದಿಂದ ವಾಪಸ್‌ ಪಡೆದಿರುವ ಕ್ರಮ ಪ್ರಶ್ನಿಸಿ ರಾಜ್ಯ ಚುನಾವಣಾ ಆಯೋಗ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಿಜೆ ಪಿ.ಬಿ.ವರ್ಲೆ ಮತ್ತು ನ್ಯಾಯಮೂರ್ತಿ ಕೃಷ್ಣ ಎಸ್‌. ದೀಕ್ಷಿತ್‌ ಅವರಿದ್ದ ವಿಭಾಗೀಯ ಪೀಠದ ಮುಂದೆ ವಿಚಾರಣೆಗೆ ಬಂದಿತ್ತು.

7 ದಿನದಲ್ಲಿ ಕ್ಷೇತ್ರ ಪುನರ್‌ ವಿಂಗಡಣೆ ಅಧಿಸೂಚನೆ

ಅಡ್ವೊಕೇಟ್‌ ಜನರಲ್‌ ಕೆ.ಶಶಿಕಿರಣ್‌ ಶೆಟ್ಟಿ , ಜಿ.ಪಂ. ತಾ.ಪಂ. ಕ್ಷೇತ್ರಗಳ ಗಡಿಗಳನ್ನು ನಿರ್ಧರಿಸುವ ಹಾಗೂ ಮೀಸಲು ನಿಗದಿಪಡಿಸುವ ಪ್ರಕ್ರಿಯೆ ಚುರುಕುಗೊಳಿಸಲಾಗಿದೆ. ಕೊಡಗು ಜಿಲ್ಲೆ ಹೊರತುಪಡಿಸಿ ಉಳಿದ 30 ಜಿಲ್ಲೆಗಳ ಕ್ಷೇತ್ರ ಪುನರ್‌ ವಿಂಗಡಣೆ ಅಧಿಸೂಚನೆಯನ್ನು ಮುಂದಿನ ಏಳು ದಿನಗಳಲ್ಲಿ ಪ್ರಕಟಿಸಲಾಗುವುದು ಎಂದು ತಿಳಿಸಿದರು.

ಕ್ಷೇತ್ರ ಪುನರ್‌ ವಿಂಗಡಣೆ ಅಧಿಸೂಚನೆ ಪ್ರಕಟಿಸಿದ ನಂತರ ಏಳು ದಿನಗಳಲ್ಲಿ ಮೀಸಲು ಕರಡು ಅಧಿಸೂಚನೆ ಹೊರಡಿಸಲಾಗುವುದು. ಅದಕ್ಕೆ ಮೀಸಲು ಕರಡು ಅಧಿಸೂಚನೆಗೆ ಆಕ್ಷೇಪಣೆ ಸಲ್ಲಿಸಲು 10 ದಿನ ಕಾಲಾವಕಾಶ ನೀಡಲಾಗುಧಿವುದು. ಅದಾದ ಎರಡು ವಾರಗಳಲ್ಲಿಸಂಬಂಧ ಪಟ್ಟ ಪ್ರಾಧಿಕಾರಗಳು ಮೀಸಲು ನಿಗದಿ ಪ್ರಕ್ರಿಯೆ ಪೂರ್ಣಗೊಳಿಸಲಿವೆ ಎಂದು ನ್ಯಾಯಾಲಯದ ಗಮನಸೆಳೆದರು.

ಶೀಘ್ರ ಎಲ್ಲಾ ಚಟುವಟಿಕೆ ಮುಕ್ತಾಯ ಎಂದು ಎಜಿ ಭರವಸೆ

ಇದಕ್ಕೆ ಪ್ರತಿಕ್ರಿಯಿಸಿದ ರಾಜ್ಯ ಚುನಾವಣಾ ಆಯೋಗದ ಪರ ಹಿರಿಯ ವಕೀಲ ಕೆ.ಎನ್‌. ಫಣೀಂದ್ರ, ಸರಕಾರದ ಹೇಳಿಕೆ ಬಗ್ಗೆ ಸಂಶಯವಾಗಿದೆ. ಅವರು ಹೇಳಿದಂತೆ ನಡೆದುಕೊಳ್ಳುತ್ತಾರೆಂಬುದು ಅನುಮಾನ,'' ಎಂದು ಆಕ್ಷೇಪಿಸಿದರು. ಆಗ ನ್ಯಾ.ಕೃಷ್ಣ ದೀಕ್ಷಿತ್‌, ಅಡ್ವೊಕೇಟ್‌ ಜನರಲ್‌ ಸಾಂವಿಧಾನಿಕ ಹುದ್ದೆಯಲ್ಲಿರುವವರು. ಅವರನ್ನು ನಂಬಬಾರದೇ? ಅವರ ಮೇಲೆ ಭರವಸೆ ಇಡಬೇಕಾಗುತ್ತದೆ. ಜತೆಗೆ, ಕ್ಷೇತ್ರ ಪುನರ್‌ವಿಂಗಡಣೆ ಪೂರ್ಣಗೊಳಿಸಿರುವುದಾಗಿ ತಿಳಿಸಿರುವ ಹೇಳಿಕೆಯನ್ನು ಎಜಿ ಲಿಖಿತವಾಗಿ ಸಲ್ಲಿಸಬೇಕು. ಎಜಿ ಹೇಳಿಕೆಯನ್ನು ಮುಚ್ಚಳಿಕೆಯನ್ನಾಗಿ ನ್ಯಾಯಾಲಯ ಪರಿಗಣಿಸಲಿದೆ ಎಂದರು.ಅದಕ್ಕೆ ಎಜಿ ಸಹ ಸಮ್ಮತಿ ಸೂಚಿಸಿದರು.

ನಂತರ ನ್ಯಾಯಪೀಠ, ''ಎಜಿ ಅವರ ಮೌಖಿಕ ಹೇಳಿಕೆಯನ್ನು ಮುಚ್ಚಳಿಕೆಯಾಗಿ ನ್ಯಾಯಾಲಯ ಪರಿಗಣಿಸುತ್ತಿದೆ. ಈ ಸಂಬಂಧ ಎಜಿ ಲಿಖಿತ ಪ್ರಮಾಣಪತ್ರ ಸಲ್ಲಿಸ ಬೇಕು. ಎಜಿ ನೀಡಿದ ಭರವಸೆ ಕಾರ್ಯಗತಗೊಳ್ಳದಿದ್ದರೆ ಅರ್ಜಿದಾರರಾಗಿರುವ ರಾಜ್ಯ ಚುನಾವಣಾ ಆಯೋಗವು ಅಗತ್ಯ ಕ್ರಮಕ್ಕಾಗಿ ಮತ್ತೆ ನ್ಯಾಯಾಲಯದ ಮುಂದೆ ಬರಬಹುದು,'' ಎಂದು ಆದೇಶ ನೀಡಿತು.

ಕ್ಷೇತ್ರ ಪುನರ್‌ವಿಂಗಡಣೆ ಮತ್ತು ಮೀಸಲು ನಿಗದಿಗೆ ಸಂಬಂಧಿಸಿದ ವಿಷಯ ಹೊರತುಪಡಿಸಿ ಉಳಿದ ವಿಷಯಗಳಿದ್ದರೆ, ಅವು ಮುಕ್ತವಾಗಿರಲಿವೆ. ಅವುಗಳ ಬಗ್ಗೆ ಅಗತ್ಯ ಸಂದರ್ಭದಲ್ಲಿ ನ್ಯಾಯಾಲಯ ಸೂಕ್ತ ನಿರ್ದೇಶನ ನೀಡಲಿದೆ,'' ಎಂದು ಅಭಿಪ್ರಾಯಪಟ್ಟ ಪೀಠ, ಪಿಐಎಲ್‌ ಇತ್ಯರ್ಥಪಡಿಸಿತು.
ಲೇಖಕರ ಬಗ್ಗೆ
ಜಯಪ್ರಕಾಶ್‌ ಬಿರಾದಾರ್‌
ವಿಜಯ ಕರ್ನಾಟಕದ ಡಿಜಿಟಲ್ ವಿಭಾಗದಲ್ಲಿ ಪತ್ರಕರ್ತ. ಚಿನ್ನದ ಪದಕದೊಂದಿಗೆ ದಾವಣಗೆರೆ ವಿಶ್ವವಿದ್ಯಾಲಯದಲ್ಲಿ ಪತ್ರಿಕೋದ್ಯಮ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಕಳೆದ ಆರು ವರ್ಷಗಳಿಂದ ರಾಜ್ಯಮಟ್ಟದ ವಿವಿಧ ಪತ್ರಿಕೆಗಳಲ್ಲಿ ವರದಿಗಾರಿಕೆಯ ಅನುಭವ ಹೊಂದಿದ್ದಾರೆ. ಆರೋಗ್ಯ, ಅರಣ್ಯ, ಸಾರಿಗೆ, ರಾಜಕೀಯ, ಕೊರೊನಾ, ಬೆಂಗಳೂರು ಅಭಿವೃದ್ಧಿ ಸೇರಿದಂತೆ ವಿವಿಧ ವಿಷಯದ ಕುರಿತು ಒಂದು ಸಾವಿರಕ್ಕೂ ಅಧಿಕ ವಿಶೇಷ ವರದಿಗಳನ್ನು ಬರೆದಿದ್ದಾರೆ. ರಾಜಕೀಯ, ಪರಿಸರ, ವಿಜ್ಞಾನ -ತಂತ್ರಜ್ಞಾನ ರಂಗಗಳಲ್ಲಿ ಆಸಕ್ತಿ ಹೊಂದಿದ್ದಾರೆ. ಪ್ರವಾಸ, ಕ್ರಿಕೆಟ್ ,ಫೋಟೊಗ್ರಾಫಿ, ಓದು, ಸಿನಿಮಾ ಇವರ ಹವ್ಯಾಸಗಳು.... ಇನ್ನಷ್ಟು ಓದಿ

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ