karnataka assembly election 2023: ರಂಗೇರಿದ ಚುನಾವಣಾ ಅಖಾಡ! ಅಭ್ಯರ್ಥಿಗಳಿಂದ ನಾಮಪತ್ರ ಸಲ್ಲಿಕೆ!

ಬೆಂಗಳೂರು: ರಾಜ್ಯದಲ್ಲಿ ಚುನಾವಣ ಕಾವು ದಿನೇ ದಿನೇ ರಂಗೇರುತ್ತಿದೆ. ಏಪ್ರಿಲ್‌ 13ರಿಂದ ನಾಮಪತ್ರ ಸಲ್ಲಿಕೆ ಶುರುವಾಗಿದ್ದು, ಅಭ್ಯರ್ಥಿಗಳು ನಾಮಪತ್ರ ಸಲ್ಲಿಕೆ ವೇಳೆ ತಮ್ಮ ಶಕ್ತಿಪ್ರದರ್ಶನ ಮಾಡಿದ್ದಾರೆ. ಸಾವಿರಾರು ಕಾರ್ಯಕರ್ತರೊಂದಿಗೆ ಮೆರವಣಿಗೆ ಮೂಲಕ ಚುನಾವಣೆಗೆ ನಾಮಿನೇಷನ್‌ ಮಾಡಿದ್ದಾರೆ.

ಅಂಕೋಲಾ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿರುವ ಶಾಸಕಿ ರೂಪಾಲಿ ನಾಯ್ಕ್‌ 5 ಸಾವಿರಕ್ಕೂ ಅಧಿಕ ಬೆಂಬಲಿಗರೊಂದಿಗೆ ಬೃಹತ್ ಮೆರವಣಿಗೆಯ ಮೂಲಕ ನಾಮಪತ್ರ ಸಲ್ಲಿಸಿದರು. ಶಾಸಕಿ ರೂಪಾಲಿ ನಾಯ್ಕ ನಾಮಪತ್ರಕ್ಕಾಗಿ ಹೆಚ್ಚಿನ ಸಂಖ್ಯೆಯಲ್ಲಿ ಬೆಂಬಲಿಗರು ಸೇರುವಂತೆ ಕರೆನೀಡಲಾಗಿತ್ತು. ಅದರಂತೆ ಸಾವಿರಾರು ಕಾರ್ಯಕರ್ತರು ಭಾಗಿಯಾಗಿದ್ದರು.

ದಕ್ಷಿಣ ಕನ್ನಡ ‌ಜಿಲ್ಲೆಯಲ್ಲೂ ನಾಮಪತ್ರ ಭರಾಟೆ ಜೋರಾಗಿತ್ತು, ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಹಾಲಿ ಶಾಸಕ ಹರೀಶ್ ಪೂಂಜಾ ನಾಮಪತ್ರ ಸಲ್ಲಿಸಿದ್ದಾರೆ.. ಎರಡನೇ ಬಾರಿ ಚುನಾವಣಾ ಅಗ್ನಿ ಪರೀಕ್ಷೆಗೆ ಒಳಗಾಗುತ್ತಿರುವ ಹರೀಶ್ ಪೂಂಜಾ ಅಪಾರ ಬೆಂಬಲಿಗರೊಂದಿಗೆ ಎರಡು ಕಿಲೋಮೀಟರ್‌ ಬೃಹತ್ ಮೆರವಣಿಗೆ ನಡೆಸಿ ಶಕ್ತಿ ಪ್ರದರ್ಶನ ಮಾಡಿದ್ದಾರೆ.. ಇನ್ನೂ ಹರೀಶ್ ಪೂಂಜಾ ನಾಮಪತ್ರ ಸಲ್ಲಕೆ ಬಳಿಕ ಬೆಳ್ತಂಗಡಿ ಕಾಂಗ್ರೆಸ್ ಅಭ್ಯರ್ಥಿ ರಕ್ಷಿತ್ ಶಿವರಾಂ ನಾಮಪತ್ರ ಸಲ್ಲಿಸಿದರು.

Vijaya Karnataka Web 17 Apr 2023, 10:27 pm
Loading ...