ಆ್ಯಪ್ನಗರ

Karnataka Rain: ರಾಜ್ಯದಲ್ಲಿ ಮಾರ್ಚ್‌ 18 ರಿಂದ ಮೂರು ದಿನಗಳು ಮಳೆ ಸಂಭವ! ಎಲ್ಲಿಲ್ಲಿ? ಇಲ್ಲಿದೆ ಮಾಹಿತಿ

3 Days Rain In Karnataka : ಕರ್ನಾಕಟದಲ್ಲಿ ಮಾರ್ಚ್‌ 18 ರಿಂದ 3 ಅಥವಾ 4 ದಿನಗಳು ಮಳೆಯಾಗಲಿದೆ ಎಂದು ರಾಜ್ಯ ಹವಾಮಾನ ಇಲಾಖೆ ತಿಳಿಸಿದೆ. ಬಿಸಿಲ ಬೇಗೆಯಿಂದ ಬಳಲುತ್ತಿರುವ ಜಿಲ್ಲೆಗಳ ಜನರಿಗೆ ತುಸು ಸಮಾಧಾನವಾಗಲಿದೆ. ಎಲ್ಲೆಲ್ಲಿ ಮಳೆಯಾಗಲಿದೆ? ಯಾವಾಗ? ಎಷ್ಟು ? ಎಂಬ ಮಾಹಿತಿ ಇಲ್ಲಿದೆ.

Edited by ಜಯಪ್ರಕಾಶ್‌ ಬಿರಾದಾರ್‌ | Vijaya Karnataka Web 17 Mar 2024, 10:03 pm

ಹೈಲೈಟ್ಸ್‌:

  • ರಾಜ್ಯದ ದಕ್ಷಿಣ ಒಳನಾಡು ಮತ್ತು ಉತ್ತರ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಹಗುರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ.
  • ಮಾರ್ಚ್‌ 18 ರಂದು ಉತ್ತರ ಒಳನಾಡಿನ ಬೀದರ್‌, ಧಾರವಾಡ, ಕಲಬುರಗಿ, ರಾಯಚೂರು ಮತ್ತು ವಿಜಯಪುರದಲ್ಲಿ ಮಳೆ.
  • ಮಾರ್ಚ್‌ 21 ರಂದು ಬೆಳಗಾವಿ, ಬೀದರ್‌, ಧಾರವಾಡ, ಕಲಬುರಗಿ, ರಾಯಚೂರು ಮತ್ತು ವಿಜಯಪುರ ಜಿಲ್ಲೆಗಳಲ್ಲಿ ಮಳೆ.
ಹೈಲೈಟ್ಸ್‌ ಮಾತ್ರವೇ ಓದಲು ಆ್ಯಪ್‌ ಡೌನ್‌ಲೋಡ್‌ ಮಾಡಿ
Vijaya Karnataka Web ರಾಜ್ಯದಲ್ಲಿ ಮೂರು ದಿನ ಮಳೆ
ರಾಜ್ಯದಲ್ಲಿ ಮಳೆ (ಸಾಂದರ್ಭಿಕ ಚಿತ್ರ)
ಬೆಂಗಳೂರು: ರಾಜ್ಯದ ದಕ್ಷಿಣ ಒಳನಾಡು ಮತ್ತು ಉತ್ತರ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಹಗುರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಮಾರ್ಚ್‌ 18 ರಂದು ಉತ್ತರ ಒಳನಾಡಿನ ಬೀದರ್‌, ಧಾರವಾಡ, ಕಲಬುರಗಿ, ರಾಯಚೂರು ಮತ್ತು ವಿಜಯಪುರ ಹಾಗೂ ಮಾರ್ಚ್‌ 21 ರಂದು ಬೆಳಗಾವಿ, ಬೀದರ್‌, ಧಾರವಾಡ, ಕಲಬುರಗಿ, ರಾಯಚೂರು ಮತ್ತು ವಿಜಯಪುರ ಜಿಲ್ಲೆಗಳಲ್ಲಿ ಹಗುರದಿಂದ ಕೂಡಿದ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ದಕ್ಷಿಣ ಒಳನಾಡಿನಲ್ಲಿ ಯಾವಾಗ ಮಳೆ?

ಮಾರ್ಚ್‌ 20 ರಿಂದ 24 ರವವರೆಗೆ ದಕ್ಷಿಣ ಒಳನಾಡಿನ ಬೆಂಗಳೂರು ನಗರ, ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ಇಲಾಖೆ ಮುನ್ಸೂಚನೆ ನೀಡಿದೆ.

ಮಾರ್ಚ್‌ 20ರ ಬಳಿಕ 23ರ ವರೆಗೆ ಕರಾವಳಿ ಮಳೆ

ಕರಾವಳಿಯಲ್ಲಿ ರಣ ಬಿಸಿಲು ಒಂದೆಡೆ ಸುಡುತ್ತಿದ್ದರೆ ಮತ್ತೊಂದೆಡೆ ಬೇಸಿಗೆ ಮಳೆ ನಿರೀಕ್ಷೆ ಮಾಡಬಹುದು ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಮಾರ್ಚ್‌ 20ರ ಬಳಿಕ 23ರ ವರೆಗೆ ರಾಜ್ಯದ ನಾನಾ ಭಾಗದಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಮಾರ್ಚ್‌ 20 ರಂದು ಬೆಂಗಳೂರು, ಚಾಮರಾಜನಗರ ಸೇರಿದಂತೆ ಅದರ ಸುತ್ತಮುತ್ತಲಿನ ಜಿಲ್ಲೆಗಳಲ್ಲಿ ಬೇಸಿಗೆ ಮಳೆಯಾದರೆ ಮಾರ್ಚ್‌ 22 ರ ಬಳಿಕ ಕರಾವಳಿ ಜಿಲ್ಲೆಗಳಲ್ಲಿಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ತಜ್ಞರು ಮಾಹಿತಿ ನೀಡಿದ್ದಾರೆ.

ಈ ಮಳೆಯ ತೀವ್ರತೆಯ ಆಧಾರದ ಮೇಲೆ ಮುಂದಿನ ದಿನಗಳಲ್ಲಿ ಬಿಸಿಲಿನ ಪ್ರಮಾಣವನ್ನು ನಿರ್ಧಾರ ಮಾಡಬಹುದಾಗಿದೆ. ಏಪ್ರಿಲ್‌ ತಿಂಗಳಲ್ಲಿ ಒಂದೆರಡು ಬಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ತಜ್ಞರು ಮಾಹಿತಿ ನೀಡಿದ್ದಾರೆ.

ಈಗಾಗಲೇ ವರುಣ ಕೃಪೆ

ದಕ್ಷಿಣ ಒಳನಾಡಿನ ಕೊಡಗು, ಚಿಕ್ಕಮಗಳೂರು, ಮೈಸೂರು ಜಿಲ್ಲೆಗಳ ಕೆಲವು ಕಡೆ ಹಾಗೂ ಉತ್ತರ ಒಳನಾಡಿನ ಕಲಬುರಗಿ, ಬೀದರ್‌ ಜಿಲ್ಲೆಗಳ ಕೆಲ ತಾಲೂಕುಗಳಲ್ಲಿ ವರ್ಷದ ಮೊದಲ ವರ್ಷಧಾರೆಯಾಗಿದೆ.

ಕಳೆದ ವರ್ಷ ಮಳೆಯೇ ಇಲ್ಲ

ರಾಜ್ಯದಲ್ಲಿ ಕಳೆದ ವರ್ಷ ವಾಡಿಕೆಗಿಂತ ಮಳೆ ಕಡಿಮೆಯಾದ ಹಿನ್ನೆಲೆಯಲ್ಲಿ ತೀವ್ರ ಬರಗಾಲ ಎದುರಾಗಿಧಿದೆ. ಆದರೆ, ಈ ವರ್ಷ ವಾಡಿಕೆಯಷ್ಟು ಮಳೆಯಾಗಲಿದೆ ಎನ್ನುವ ಆಶಾಭಾವವಿದೆ. 2023ರಲ್ಲಿಎಲ್‌ ನಿನೋ ಪ್ರಭಾವದಿಂದ ಮಳೆ ಕ್ಷೀಣವಾಗಿತ್ತು. ಈ ವರ್ಷದ ಮಾರ್ಚ್ ವೇಳೆಗೆ ಎಲ್‌ ನಿನೋ ಪ್ರಭಾವ ತಗ್ಗಲಿದೆ. ಇದರಿಂದ ಮುಂಗಾರು ಉತ್ತಮವಾಗಲಿದೆ. ವಾಡಿಕೆಯಷ್ಟು ಮಳೆ ಸುರಿಯುವುದರಲ್ಲಿಯಾವುದೇ ಆತಂಕವಿಲ್ಲಎನ್ನುತ್ತಾರೆ ಹಿರಿಯ ಹವಾಮಾನ ತಜ್ಞ ಶ್ರೀನಿವಾಸರೆಡ್ಡಿ.

ಬರಗಾಲದಿಂದ ತತ್ತರಿಸಿದ ರಾಜ್ಯ

ಕಳೆದ ವರ್ಷ ರಾಜ್ಯದಲ್ಲಿ ವಾಡಿಕೆಗಿಂತ ಶೇ.24 ರಷ್ಟು ಮಳೆ ಕಡಿಮೆಯಾಗಿದೆ. 31 ಜಿಲ್ಲೆಗಳ ಪೈಕಿ 19 ಜಿಲ್ಲೆಗಳಲ್ಲಿ ಶೇ. 20ರಿಂದ ಶೇ 50ರಷ್ಟು ಕಡಿಮೆ ಮಳೆಯಾದರೆ, 11 ಜಿಲ್ಲೆಗಳಲ್ಲಿ ಶೇ.10 ರಿಂದ ಶೇ.20ರಷ್ಟು ಮಳೆ ಕಡಿಮೆಯಾಗಿದೆ. ಬೀದರ್‌ ಜಿಲ್ಲೆಯಲ್ಲಿಮಾತ್ರ ವಾಡಿಕೆಯಷ್ಟು ಮಳೆಯಾಗಿತ್ತು.
ಲೇಖಕರ ಬಗ್ಗೆ
ಜಯಪ್ರಕಾಶ್‌ ಬಿರಾದಾರ್‌
ವಿಜಯ ಕರ್ನಾಟಕದ ಡಿಜಿಟಲ್ ವಿಭಾಗದಲ್ಲಿ ಪತ್ರಕರ್ತ. ಚಿನ್ನದ ಪದಕದೊಂದಿಗೆ ದಾವಣಗೆರೆ ವಿಶ್ವವಿದ್ಯಾಲಯದಲ್ಲಿ ಪತ್ರಿಕೋದ್ಯಮ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಕಳೆದ ಆರು ವರ್ಷಗಳಿಂದ ರಾಜ್ಯಮಟ್ಟದ ವಿವಿಧ ಪತ್ರಿಕೆಗಳಲ್ಲಿ ವರದಿಗಾರಿಕೆಯ ಅನುಭವ ಹೊಂದಿದ್ದಾರೆ. ಆರೋಗ್ಯ, ಅರಣ್ಯ, ಸಾರಿಗೆ, ರಾಜಕೀಯ, ಕೊರೊನಾ, ಬೆಂಗಳೂರು ಅಭಿವೃದ್ಧಿ ಸೇರಿದಂತೆ ವಿವಿಧ ವಿಷಯದ ಕುರಿತು ಒಂದು ಸಾವಿರಕ್ಕೂ ಅಧಿಕ ವಿಶೇಷ ವರದಿಗಳನ್ನು ಬರೆದಿದ್ದಾರೆ. ರಾಜಕೀಯ, ಪರಿಸರ, ವಿಜ್ಞಾನ -ತಂತ್ರಜ್ಞಾನ ರಂಗಗಳಲ್ಲಿ ಆಸಕ್ತಿ ಹೊಂದಿದ್ದಾರೆ. ಪ್ರವಾಸ, ಕ್ರಿಕೆಟ್ ,ಫೋಟೊಗ್ರಾಫಿ, ಓದು, ಸಿನಿಮಾ ಇವರ ಹವ್ಯಾಸಗಳು.... ಇನ್ನಷ್ಟು ಓದಿ

ಮುಂದಿನ ಲೇಖನ