Please enable javascript.ಕೊಡಗು: ರಾಷ್ಟ್ರೀಯ ಆವಿಷ್ಕಾರ ಅಭಿಯಾನಕ್ಕೆ ಚಾಲನೆ - education department in kodagu conducts national innovation campaign - Vijay Karnataka

ಕೊಡಗು: ರಾಷ್ಟ್ರೀಯ ಆವಿಷ್ಕಾರ ಅಭಿಯಾನಕ್ಕೆ ಚಾಲನೆ

Vijaya Karnataka 16 Dec 2022, 5:22 pm
Subscribe

ಜಿಲ್ಲಾ ಸಾರ್ವಜನಿಕ ಶಿಕ್ಷ ಣ ಇಲಾಖೆ, ಸರ್ವಶಿಕ್ಷ ಣ ಅಭಿಯಾನದಿಂದ ಇಲ್ಲಿಗೆ ಸಮೀಪದ ಗರಗಂದೂರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ರಾಷ್ಟ್ರೀಯ ಆವಿಷ್ಕಾರ ಅಭಿಯಾನ ನಡೆಯಿತು.

MDK-MDK17SPT1
ಸೋಮವಾರಪೇಟೆ: ಜಿಲ್ಲಾ ಸಾರ್ವಜನಿಕ ಶಿಕ್ಷ ಣ ಇಲಾಖೆ, ಸರ್ವಶಿಕ್ಷ ಣ ಅಭಿಯಾನದಿಂದ ಇಲ್ಲಿಗೆ ಸಮೀಪದ ಗರಗಂದೂರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ರಾಷ್ಟ್ರೀಯ ಆವಿಷ್ಕಾರ ಅಭಿಯಾನ ನಡೆಯಿತು.

ಅಭಿಯಾನದ ಅಂಗವಾಗಿ ಶಿಕ್ಷ ಕರ ಮಾರ್ಗದರ್ಶನದಲ್ಲಿ ವಿದ್ಯಾರ್ಥಿಗಳು ವಿಜ್ಞಾನ ಮತ್ತು ಗಣಿತ ವಿಷಯದಲ್ಲಿ ವಿವಿಧ ಮಾದರಿಗಳನ್ನು ತಯಾರಿಸಿ ವಸ್ತುಪ್ರದರ್ಶನದಲ್ಲಿ ಪ್ರದರ್ಶಿಸಿದರು.

ಅಭಿಯಾನಕ್ಕೆ ಚಾಲನೆ ನೀಡಿದ ಕ್ಷೇತ್ರ ಶಿಕ್ಷ ಣಾಧಿಕಾರಿ ಸಿ.ಆರ್‌.ನಾಗರಾಜಯ್ಯ ಮಾತನಾಡಿ, ವಿದ್ಯಾರ್ಥಿಗಳು ವಿಜ್ಞಾನ ವಿಷಯದಲ್ಲಿ ಹೆಚ್ಚಿನ ಆಸಕ್ತಿ ಬೆಳೆಸಿಕೊಂಡು ವೈಜ್ಞಾನಿಕ ಚಿಂತನೆ ರೂಢಿಸಿಕೊಳ್ಳಬೇಕು ಎಂದರು.

ವಿಜ್ಞಾನ ಮತ್ತು ತಂತ್ರಜ್ಞಾನ ಬೆಳವಣಿಗೆಯಿಂದ ದೇಶದ ಪ್ರಗತಿ ಸಾಧ್ಯ. ಈ ದಿಶೆಯಲ್ಲಿ ಶಿಕ್ಷ ಕರು ಮಕ್ಕಳಲ್ಲಿ ಮೂಲ ವಿಜ್ಞಾನ ಕಲಿಕೆಯೊಂದಿಗೆ ಅವರಲ್ಲಿ ಸಂಶೋಧನ ಪ್ರವೃತ್ತಿ ಬೆಳೆಸಬೇಕು ಎಂದು ಹೇಳಿದರು.

ಕ್ಷೇತ್ರ ಸಮನ್ವಯಾಧಿಕಾರಿ ಮಾಲತಿ ಮಾತನಾಡಿ, ಶಿಕ್ಷ ಕರ ವಿಶೇಷ ಆಸಕ್ತಿಯಿಂದ ಮಕ್ಕಳು ಕ್ರಿಯಾಶೀಲತೆಯಿಂದ ವಸ್ತು ಪ್ರದರ್ಶನದಲ್ಲಿ ಉತ್ತಮ ಮಾದರಿ ಪ್ರದರ್ಶಿಸಿರುವುದು ಪ್ರಶಂಸನೀಯ. ವಿದ್ಯಾರ್ಥಿಗಳಲ್ಲಿನ ಸುಪ್ತ ಪ್ರತಿಭೆಗೆ ಇಂತಹ ಪ್ರದರ್ಶನ ಉತ್ತಮ ವೇದಿಕೆಯಾಗಿದೆ ಎಂದರು.

ರಾಷ್ಟ್ರೀಯ ಅವಿಷ್ಕಾರ ಅಭಿಯಾನದ ಮಹತ್ವದ ಕುರಿತು, ತಾಲೂಕು ನೋಡಲ್‌ ಅಧಿಕಾರಿ ಟಿ.ಜಿ.ಪ್ರೇಮಕುಮಾರ್‌ ಮಾತನಾಡಿದರು. ವಿದ್ಯಾರ್ಥಿಗಳಲ್ಲಿ ವಿಜ್ಞಾನ ಮತ್ತು ಪರಿಸರಕ್ಕೆ ಸಂಬಂಧಿಸಿದ ಚಟುವಟಿಕೆಯಾಧರಿತ ಕಲಿಕೆಗೆ ಈ ಅಭಿಯಾನ ಸಹಕಾರಿಯಾಗಲಿದೆ ಎಂದರು.

ಹರದೂರು ಗ್ರಾ.ಪಂ.ಅಧ್ಯಕ್ಷೆ ಸುಮಾ, ಎಸ್‌ಡಿಎಂಸಿ ಅಧ್ಯಕ್ಷ ಮುಸ್ತಫ, ಗಾ.್ರಪಂ. ಉಪಾಧ್ಯಕ್ಷೆ ಕುಸುಮಾ, ದಾನಿಗಳಾದ ಜಾನಕಿ ಪರಮೇಶ್ವರ, ಸಿಆರ್‌ಪಿ ವಸಂತ್‌ ಹಾಜರಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ