Please enable javascript.ಮಕ್ಕಳ ಹಕ್ಕುಗಳ ವಿಶೇಷ ಗ್ರಾಮಸಭೆ - ಮಕ್ಕಳ ಹಕ್ಕುಗಳ ವಿಶೇಷ ಗ್ರಾಮಸಭೆ - Vijay Karnataka

ಮಕ್ಕಳ ಹಕ್ಕುಗಳ ವಿಶೇಷ ಗ್ರಾಮಸಭೆ

ವಿಕ ಸುದ್ದಿಲೋಕ 10 Dec 2014, 4:10 am
Subscribe

ತಾಲೂಕಿನ ಹಟ್ಟಿ ಗ್ರಾ.ಪಂ. ಆವರಣದಲ್ಲಿ ಮಕ್ಕಳ ಹಕ್ಕುಗಳ ವಿಶೇಷ ಗ್ರಾಮಸಭೆ ಇತ್ತೀಚೆಗೆ ಜರುಗಿತು. ಯುನಿಸೆಫ್ ಜಿಲ್ಲಾ ಸಂಯೋಜಕ ಹರೀಶ ಜೋಗಿ ಮಾತನಾಡಿ, ಮಕ್ಕಳ ಹಕ್ಕುಗಳ ಗ್ರಾಮ ಸಭೆಯಲ್ಲಿ ಗ್ರಾಮ ಪಂಚಾಯಿತಿ ಪಾತ್ರವೇನು? ಎನ್ನುವ ಕುರಿತು ವಿವರಿಸಿದರು. ಮಕ್ಕಳು ತಮ್ಮ ಭಾವನೆಗಳನ್ನು ಮುಕ್ತವಾಗಿ ವ್ಯಕ್ತಪಡಿಸಬೇಕು. ಅಂದಾಗ ಅವರು ಮುಂದೆ ಬರಲು ಸಾಧ್ಯ. ಹಟ್ಟಿ ಗ್ರಾಮ ಪಂಚಾಯಿತಿ ಮಟ್ಟದಲ್ಲಿ 1,060 ಮಕ್ಕಳು ಇದ್ದಾರೆ. ಅವರಿಗೆ ಬೇಕಿರುವ ಸೌಲಭ್ಯಗಳನ್ನು ಒದಗಿಸಿಕೊಡುವುದು ಎಲ್ಲರ ಕರ್ತವ್ಯವಾಗಿದೆ ಎಂದರು.

ಮಕ್ಕಳ ಹಕ್ಕುಗಳ ವಿಶೇಷ ಗ್ರಾಮಸಭೆ
ಕೊಪ್ಪಳ; ತಾಲೂಕಿನ ಹಟ್ಟಿ ಗ್ರಾ.ಪಂ. ಆವರಣದಲ್ಲಿ ಮಕ್ಕಳ ಹಕ್ಕುಗಳ ವಿಶೇಷ ಗ್ರಾಮಸಭೆ ಇತ್ತೀಚೆಗೆ ಜರುಗಿತು.

ಯುನಿಸೆಫ್ ಜಿಲ್ಲಾ ಸಂಯೋಜಕ ಹರೀಶ ಜೋಗಿ ಮಾತನಾಡಿ, ಮಕ್ಕಳ ಹಕ್ಕುಗಳ ಗ್ರಾಮ ಸಭೆಯಲ್ಲಿ ಗ್ರಾಮ ಪಂಚಾಯಿತಿ ಪಾತ್ರವೇನು? ಎನ್ನುವ ಕುರಿತು ವಿವರಿಸಿದರು. ಮಕ್ಕಳು ತಮ್ಮ ಭಾವನೆಗಳನ್ನು ಮುಕ್ತವಾಗಿ ವ್ಯಕ್ತಪಡಿಸಬೇಕು. ಅಂದಾಗ ಅವರು ಮುಂದೆ ಬರಲು ಸಾಧ್ಯ. ಹಟ್ಟಿ ಗ್ರಾಮ ಪಂಚಾಯಿತಿ ಮಟ್ಟದಲ್ಲಿ 1,060 ಮಕ್ಕಳು ಇದ್ದಾರೆ. ಅವರಿಗೆ ಬೇಕಿರುವ ಸೌಲಭ್ಯಗಳನ್ನು ಒದಗಿಸಿಕೊಡುವುದು ಎಲ್ಲರ ಕರ್ತವ್ಯವಾಗಿದೆ ಎಂದರು.

ಸಾರ್ವಜನಿಕ ಶಿಕ್ಷಣ ಇಲಾಖೆ, ಜಿಲ್ಲಾ ಮಕ್ಕಳ ಸಂರಕ್ಷಣಾ ಯೋಜನೆ, ಯುನಿಸೆಫ್, ಮಹಿಳಾ ಮತ್ತು ಮಕ್ಕಳ ಅಭಿವದ್ಧಿ ಇಲಾಖೆ, ಆರೋಗ್ಯ, ಕಾರ್ಮಿಕ ಇಲಾಖೆ, ಮಕ್ಕಳ ಕಲ್ಯಾಣ ಸಮಿತಿ, ಪೊಲೀಸ್ ಇಲಾಖೆ ಆಶ್ರಯದಲ್ಲಿ ಸಭೆ ನಡೆಯಿತು.

ಗ್ರಾ.ಪಂ.ಅಧ್ಯಕ್ಷ ತೋಟಪ್ಪ ಶಿಂತ್ರಿ ಅಧ್ಯಕ್ಷತೆ ವಹಿಸಿದ್ದರು. ಪಿಡಿಒ ನಾಗರಾಜ, ಪೊಲೀಸ್ ತರಬೇತುದಾರ ಸೋಮಶೇಖರ, ಡಿಸಿಪಿಯು ಬಸಪ್ಪ, ಮುಖ್ಯಗುರು ಪ್ರಕಾಶ ತಗಡಿನಮನಿ ಹಾಗೂ ಇತರರು ಇದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ