Please enable javascript.ಕುಂದಾಪುರದ ಬೀದಿ ಬದಿಯ ಚಪ್ಪಲಿ ರಿಪೇರಿ ಕಾರ್ಮಿಕನಿಗೆ ಬಂತು ದೆಹಲಿ ಗಣರಾಜ್ಯೋತ್ಸವಕ್ಕೆ ಆಹ್ವಾನ - a shoe repair worker on the street side of udupi kundapur got an invitation to delhi republic day - Vijay Karnataka

ಕುಂದಾಪುರದ ಬೀದಿ ಬದಿಯ ಚಪ್ಪಲಿ ರಿಪೇರಿ ಕಾರ್ಮಿಕನಿಗೆ ಬಂತು ದೆಹಲಿ ಗಣರಾಜ್ಯೋತ್ಸವಕ್ಕೆ ಆಹ್ವಾನ

Edited byಶ್ರೀಲಕ್ಷ್ಮೀ ಎಚ್ಎಲ್ | Vijaya Karnataka 17 Oct 2023, 9:47 pm
Subscribe

ಕುಂದಾಪುರದ ಶಾಸ್ತ್ರೀ ವೃತ್ತದ ಸಮೀಪ ಕಳೆದ ಎರಡೂವರೆ ದಶಕಗಳಿಂದ ಚಪ್ಪಲಿ, ಕೊಡೆ ರಿಪೇರಿ ಮಾಡಿಕೊಂಡು ಬದುಕು ಕಟ್ಟಿಕೊಂಡಿರುವ ಮಣಿಕಂಠ ಎಂಬುವವರಿಗೆ 2024 ರ ಗಣರಾಜ್ಯೋತ್ಸವಕ್ಕೆ ಪ್ರಧಾನಿ ನರೇಂದ್ರ ಮೋದಿ ಆಹ್ವಾನಿಸಿದ್ದಾರೆ. ಆ ಮೂಲಕ ಸಮಾಜದ ಕಟ್ಟಕಡೆಯ ಕಾರ್ಮಿಕನಿಗೂ ದೇಶದ ರಾಜಧಾನಿ ದೆಹಲಿಯಲ್ಲಿ ನಡೆಯುವ ಗಣರಾಜ್ಯೋತ್ಸವವನ್ನು ಕಣ್ತುಂಬಿಸಿಕೊಳ್ಳುವ ಅವಕಾಶ ಬಂದಿದೆ.

ಹೈಲೈಟ್ಸ್‌:

  • ಕುಂದಾಪುರದ ಚಪ್ಪಲಿ ರಿಪೇರಿ ಕಾರ್ಮಿಕನಿಗೆ ಬಂತು ದೆಹಲಿ ಗಣರಾಜ್ಯೋತ್ಸವಕ್ಕೆ ಆಹ್ವಾನ
  • ಕುಂದಾಪುರದ ಶಾಸ್ತ್ರೀ ವೃತ್ತದ ಸಮೀಪ ಕೆಲಸ ಮಾಡಿಕೊಂಡಿರುವ ಮಣಿಕಂಠ ಎಂಬುವವರಿಗೆ ಆಹ್ವಾನ
  • ಸರ್ಕಾರ ನಮ್ಮನ್ನು ಗುರುತಿಸಿರುವುದು ನಿಜಕ್ಕೂ ಸಂತೋಷವಾಗಿದೆ ಎಂದ ಮಣಿಕಂಠ
ದೆಹಲಿಯಲ್ಲಿ ಗಣರಾಜ್ಯೋತ್ಸವ ಪರೇಡ್

ಮಂಗಳೂರು: 2024 ರ ಗಣರಾಜ್ಯೋತ್ಸವಕ್ಕೆ ಕುಂದಾಪುರದ ಬೀದಿ ಬದಿಯ ಚಪ್ಪಲಿ ರಿಪೇರಿ ಕಾರ್ಮಿಕನೊಬ್ಬನಿಗೆ ದೇಶದ ಪ್ರಧಾನಿ ನರೇಂದ್ರ ಮೋದಿ ಆಹ್ವಾನಿಸಿದ್ದಾರೆ. ಆ ಮೂಲಕ ಸಮಾಜದ ಕಟ್ಟಕಡೆಯ ಕಾರ್ಮಿಕನಿಗೂ ದೇಶದ ರಾಜಧಾನಿ ದೆಹಲಿಯಲ್ಲಿ ನಡೆಯುವ ಗಣರಾಜ್ಯೋತ್ಸವವನ್ನು ಕಣ್ತುಂಬಿಸಿಕೊಳ್ಳುವ ಅವಕಾಶ ಬಂದಿದೆ.
ಕುಂದಾಪುರದ ಶಾಸ್ತ್ರೀ ವೃತ್ತದ ಸಮೀಪ ಕಳೆದ ಎರಡೂವರೆ ದಶಕಗಳಿಂದ ಚಪ್ಪಲಿ, ಕೊಡೆ ರಿಪೇರಿ ಮಾಡಿಕೊಂಡು ಬದುಕು ಕಟ್ಟಿಕೊಂಡಿರುವ ಮಣಿಕಂಠ ಎಂಬುವವರೇ ಮುಂದಿನ ಬಾರಿಯ ಗಣರಾಜ್ಯೋತ್ಸವದಲ್ಲಿ ಭಾಗವಹಿಸುವ ಅವಕಾಶ ಗಿಟ್ಟಿಸಿಕೊಂಡವರು.

ನವರಾತ್ರಿಗೆ ವಿಶೇಷ 'ಗರ್ಬೊ' ಗೀತೆಗೆ ಸಾಹಿತ್ಯ ರಚಿಸಿದ ಪ್ರಧಾನಿ ನರೇಂದ್ರ ಮೋದಿ
ಉಡುಪಿ ಜಿಲ್ಲೆಯ ಕುಂದಾಪುರದಲ್ಲಿ ಶಾಸ್ತ್ರೀ ಸರ್ಕಲ್‌ನಲ್ಲಿ ಲಿಡ್ಕರ್‌ನ ಪಾದರಕ್ಷೆ ರಿಪೇರಿ ಮಾಡುವ ಪೆಟ್ಟಿಗೆ ಅಂಗಡಿಯಲ್ಲಿ ದುಡಿಯುತ್ತಿರುವ ಮಣಿಕಂಠ ಅವರನ್ನು ಈ ಬಾರಿ ಗಣರಾಜ್ಯೋತ್ಸವಕ್ಕೆ ಆಹ್ವಾನಿಸಿರುವ ಬಗ್ಗೆ ವ್ಯಾಪಕ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಮೂಲತಃ ಭದ್ರಾವತಿಯವರಾದ ಅವರ ಅಜ್ಜ ಮುನುಸ್ವಾಮಿ ಸುಮಾರು 50 ವರ್ಷಗಳ ಹಿಂದೆ ಇಲ್ಲಿಗೆ ಬಂದು ಈ ಚಪ್ಪಲಿ ರಿಪೇರಿ ಅಂಗಡಿಯನ್ನು ಆರಂಭಿಸಿದರು.

ಉತ್ತರ ಪ್ರದೇಶದಲ್ಲಿ ಅಮಾನವೀಯ ಘಟನೆ: ಹಸುವಿನ ಕಳೇಬರ ಎತ್ತಲು ನಿರಾಕರಿಸಿದ ದಲಿತ ವೃದ್ಧನ ಮೇಲೆ ಹಲ್ಲೆ
ಸ್ವಲ್ಪ ಸಮಯ ಮಣಿಕಂಠ ಅವರ ತಂದೆ ಇದನ್ನು ಮುಂದುವರಿಸಿದರು. ಅವರ ಅನಾರೋಗ್ಯದ ಮಣಿಕಂಠ ಈ ಕುಲಕಸುಬನ್ನು ಮುನ್ನಡೆಸುತ್ತಿದ್ದಾರೆ. ನಾನು ಸಾಮಾನ್ಯ ಜನರು ಮಾಡುವ ಕೆಲಸವನ್ನು ಮಾಡಿದ್ದೇನೆ. ನನ್ನ ಜವಾಬ್ದಾರಿ ಅದು. ಸರ್ಕಾರ ನಮ್ಮನ್ನು ಗುರುತಿಸಿರುವುದು ನಿಜಕ್ಕೂ ಸಂತೋಷವಾಗಿದೆ. ಇದರಿಂದ ನನ್ನ ಜವಾಬ್ಧಾರಿ ಹೆಚ್ಚಾಗಿದೆ ಎಂದು ಹೇಳಿದ್ದಾರೆ‌.
ಶ್ರೀಲಕ್ಷ್ಮೀ ಎಚ್ಎಲ್
ಲೇಖಕರ ಬಗ್ಗೆ
ಶ್ರೀಲಕ್ಷ್ಮೀ ಎಚ್ಎಲ್
ಶ್ರೀಲಕ್ಷ್ಮೀ ಅವರು ಮಲೆನಾಡ ಹೆಬ್ಬಾಗಿಲು ಶಿವಮೊಗ್ಗೆಯವರು. ಕಳೆದ 5 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿ ಕೆಲಸ ಮಾಡುತ್ತಿದ್ದಾರೆ. ಸದ್ಯ ವಿಜಯ ಕರ್ನಾಟಕ ಆನ್‌ಲೈನ್‌ ನಲ್ಲಿ ಡಿಜಿಟಲ್ ಕಂಟೆಂಟ್ ಪ್ರೊಡ್ಯೂಸರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ದೇಶೀಯ ಸುದ್ದಿಗಳು, ಲೈಫ್‌ಸ್ಟೈಲ್ ಸುದ್ದಿಗಳನ್ನು ಬರೆಯುವುದು ಅಚ್ಚುಮೆಚ್ಚು. ಹೊಸ ಹೊಸ ವಿಚಾರಗಳಿಗೆ ತೆರೆದುಕೊಳ್ಳುವುದು, ಕಲಿಯುವುದು, ಹೊಸ ಜಾಗಗಳಿಗೆ ಭೇಟಿ ನೀಡುವುದು ಇಷ್ಟದ ವಿಚಾರ.... ಇನ್ನಷ್ಟು ಓದಿ

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ