Please enable javascript.Nalin Kumar Kateel,ಎಲ್ಲ ಕಡೆಗಳಲ್ಲಿ ಮಾನವ ರಹಿತ ರೈಲ್ವೆ ಗೇಟ್‌ಗಳ ನಿರ್ಮಾಣಕ್ಕೆ ಚಿಂತನೆ ನಡೆಸಲಾಗಿದೆ; ನಳಿನ್ ಕುಮಾರ್ ಕಟೀಲ್‌ - consideration has been given to the construction of unmanned railway gates says nalin kumar kateel - Vijay Karnataka

ಎಲ್ಲ ಕಡೆಗಳಲ್ಲಿ ಮಾನವ ರಹಿತ ರೈಲ್ವೆ ಗೇಟ್‌ಗಳ ನಿರ್ಮಾಣಕ್ಕೆ ಚಿಂತನೆ ನಡೆಸಲಾಗಿದೆ; ನಳಿನ್ ಕುಮಾರ್ ಕಟೀಲ್‌

Vijaya Karnataka 12 Jul 2021, 8:28 am
Subscribe

ರೈಲ್ವೆ ಕ್ರಾಸ್‌ಗಳ ಗೇಟುಗಳಲ್ಲಿ ಮಾನವ ರಹಿತ ಗೇಟುಗಳ ಆರಂಭಕ್ಕೆ ಕೇಂದ್ರ ಸರಕಾರ ಯೋಚಿಸಿದೆ. ಮುಂಬರುವ ದಿನಗಳಲ್ಲಿ ಅದು ಅನುಷ್ಠಾನಗೊಳ್ಳಲಿದೆ. ಈ ದಿಸೆಯಲ್ಲಿ ಯೋಜನೆ ರೂಪಿಸಲಾಗುತ್ತಿದೆ ಎಂದು ಸಂಸದ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ ಕುಮಾರ್‌ ಕಟೀಲು ತಿಳಿಸಿದರು.

ಹೈಲೈಟ್ಸ್‌:

  • ಮುಂಬರುವ ದಿನಗಳಲ್ಲಿ ಎಲ್ಲ ಕಡೆಗಳಲ್ಲಿ ಮಾನವ ರಹಿತ ರೈಲ್ವೆ ಗೇಟುಗಳ ನಿರ್ಮಾಣಕ್ಕೆ ಆದ್ಯತೆ
  • ಈ ಕುರಿತು ಕೇಂದ್ರ ಸರಕಾರ ಚಿಂತನೆ ನಡೆಸಿದ್ದು, ಈ ದಿಸೆಯಲ್ಲಿ ಯೋಜನೆ ರೂಪಿಸಲಾಗುತ್ತಿದೆ
  • ಮಂಗಳೂರಿನಲ್ಲಿ ಸಂಸದ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ ಕುಮಾರ್‌ ಕಟೀಲು ಹೇಳಿಕೆ
Nalin Kumar Kateel
ಮಂಗಳೂರು: ಮುಂಬರುವ ದಿನಗಳಲ್ಲಿಎಲ್ಲ ಕಡೆಗಳಲ್ಲಿ ಮಾನವ ರಹಿತ ರೈಲ್ವೆ ಗೇಟುಗಳ ನಿರ್ಮಾಣಕ್ಕೆ ಕೇಂದ್ರ ಸರಕಾರ ಚಿಂತನೆ ನಡೆಸಿದ್ದು, ಈ ದಿಸೆಯಲ್ಲಿ ಯೋಜನೆ ರೂಪಿಸಲಾಗುತ್ತಿದೆ ಎಂದು ಸಂಸದ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ ಕುಮಾರ್‌ ಕಟೀಲು ತಿಳಿಸಿದರು.
ಮಂಗಳೂರು ಜಂಕ್ಷನ್‌ ರೈಲು ನಿಲ್ದಾಣದಲ್ಲಿ ಭಾನುವಾರ ಯಶವಂತಪುರ-ಮಂಗಳೂರು ನಡುವೆ ಸಂಚರಿಸುವ ವಿಸ್ಟಾಡೋಮ್‌ ಕೋಚ್‌ ಅಳವಡಿಸಿದ ರೈಲಿಗೆ ಹಸಿರು ನಿಶಾನೆ ತೋರಿಸಿ ಮಾತನಾಡಿದರು. ರೈಲ್ವೆ ಕ್ರಾಸ್‌ಗಳ ಗೇಟುಗಳಲ್ಲಿ ಮಾನವ ರಹಿತ ಗೇಟುಗಳ ಆರಂಭಕ್ಕೆ ಕೇಂದ್ರ ಸರಕಾರ ಯೋಚಿಸಿ, ಈಗಾಗಲೇ ಯೋಜನೆ ರೂಪಿಸಿದೆ. ಮುಂಬರುವ ದಿನಗಳಲ್ಲಿ ಅದು ಅನುಷ್ಠಾನಗೊಳ್ಳಲಿದೆ ಎಂದರು.
‘ಹಿಂದೂವೊಬ್ಬ ಪ್ರೀತಿ ಹೆಸರಲ್ಲಿ ಹಿಂದೂ ಯುವತಿಗೆ ಮಾಡುವ ಮೋಸವೂ ಲವ್‌ ಜಿಹಾದ್‌’; ಅಸ್ಸಾಂ ಸಿಎಂ
ರೈಲ್ವೆ ಇಲಾಖೆಯು ದಕ್ಷಿಣ ಕನ್ನಡ ಜಿಲ್ಲೆಗೆ ಸಾಕಷ್ಟು ಯೋಜನೆಗಳನ್ನು ನೀಡಿದೆ. 2014ರಿಂದ ಕೆಲವು ಯೋಜನೆಗಳು ಹೆಚ್ಚು ವೇಗ ಪಡೆದಿವೆ. ರೈಲು ಹಾಗೂ ನಿಲ್ದಾಣಗಳಲ್ಲಿ ಸ್ವಚ್ಛತೆಗೆ ಹೆಚ್ಚಿನ ಗಮನ ನೀಡಲಾಗುತ್ತಿದೆ. ಮಂಗಳೂರು ಸೆಂಟ್ರಲ್‌ ನಿಲ್ದಾಣಕ್ಕೆ 13.5 ಕೋಟಿ ಹಾಗೂ ಮಂಗಳೂರು ಜಂಕ್ಷನ್‌ಗೆ 1.2 ಕೋಟಿ ರೂ. ಸೇರಿದಂತೆ ಒಟ್ಟು 15 ಕೋಟಿ ರೂ. ವೆಚ್ಚದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳು ಪ್ರಗತಿಯಲ್ಲಿದೆ. ಅದರೊಂದಿಗೆ ಸ್ಮಾರ್ಟ್‌ ಸಿಟಿ ಯೋಜನೆಯಲ್ಲೂ ಕಾಮಗಾರಿ ಕೈಗೊಳ್ಳಲಾಗಿದೆ, ಶಾಸಕರಾದ ವೇದವ್ಯಾಸ ಕಾಮತ್‌ ಹಾಗೂ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಅವರು ಅದಕ್ಕೆ ಒತ್ತಾಸೆಯಾಗಿದ್ದಾರೆ ಎಂದರು.

ಮಂಗಳೂರು-ವಿಜಯಪುರ ರೈಲು ಸಮಯದಲ್ಲಿ ಬದಲಾವಣೆ ಆಗಬೇಕು, ಅದು ಮಂಗಳೂರು ಸೆಂಟ್ರಲ್‌ನಿಂದ ಸಂಚರಿಸಬೇಕು ಹಾಗೂ ಹಗಲಿನಲ್ಲಿ ಸಂಚರಿಸುವ ಗೊಮ್ಮಟೇಶ್ವ ಎಕ್ಸ್‌ಪ್ರೆಸ್‌ ರೈಲು ಯಶವಂತಪುರದಿಂದ 8.15ರ ಬದಲಾಗಿ 9.30ಕ್ಕೆ ಹೊರಡಬೇಕು. ವಾರದ 7 ದಿನ ಸಂಚರಿಸಬೇಕು ಎನ್ನುವ ಬೇಡಿಕೆ ಪ್ರಯಾಣಿಕರದ್ದಾಗಿದ್ದು, ಸಂಬಂಧಿಸಿದ ಇಲಾಖೆಯ ಅಧಿಕಾರಿಗಳು ಹಾಗೂ ಸಚಿವರೊಂದಿಗೆ ಚರ್ಚಿಸಿ ಬೇಡಿಕೆಗಳನ್ನು ಈಡೇರಿಸಲಾಗುವುದು ಎಂದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ