Please enable javascript.Maharashtra Legislative Council,ಬಸವರಾಜ ಬೊಮ್ಮಾಯಿ ವಿರುದ್ಧ ಮಹಾರಾಷ್ಟ್ರದಿಂದ ಖಂಡನಾ ನಿರ್ಣಯ! ಬೆಳಗಾವಿ ಗಡಿ ಕುರಿತು ಹೇಳಿಕೆಗೆ ಆಕ್ಷೇಪ - maharashtra-legislative council passes resolution condemning of basavaraj bommai statement over border dispute - Vijay Karnataka

ಬಸವರಾಜ ಬೊಮ್ಮಾಯಿ ವಿರುದ್ಧ ಮಹಾರಾಷ್ಟ್ರದಿಂದ ಖಂಡನಾ ನಿರ್ಣಯ! ಬೆಳಗಾವಿ ಗಡಿ ಕುರಿತು ಹೇಳಿಕೆಗೆ ಆಕ್ಷೇಪ

Edited byಅವಿನಾಶ ವಗರನಾಳ | Vijaya Karnataka Web 25 Mar 2022, 9:59 pm
Subscribe

ಬೆಳಗಾವಿ ಗಡಿ ಕುರಿತು ಕರ್ನಾಟಕ ಸಿಎಂ ಬಸವರಾಜ ಬೊಮ್ಮಾಯಿ ಅವರು ನೀಡಿರುವ ಹೇಳಿಕೆ ಖಂಡಿಸಿ ಮಹಾರಾಷ್ಟ್ರ ಶುಕ್ರವಾರ ಖಂಡನಾ ನಿರ್ಣಯ ಅಂಗೀಕರಿಸಿದೆ. ಕರ್ನಾಟಕ ಮತ್ತು ಮಹಾರಾಷ್ಟ್ರ ನಡುವೆ ಈಗ ಗಡಿ ವಿವಾದವಿಲ್ಲ ಎಂಬ ಬೊಮ್ಮಾಯಿ ಹೇಳಿಕಯನ್ನು ಮಹಾರಾಷ್ಟ್ರ ವಿಧಾನ ಪರಿಷತ್‌ನಲ್ಲಿ ತೀವ್ರವಾಗಿ ವಿರೋಧಿಸಲಾಗಿದೆ.

ಹೈಲೈಟ್ಸ್‌:


  • ಕರ್ನಾಟಕ ಸಿಎಂ ಬಸವರಾಜ ಬೊಮ್ಮಾಯಿ ವಿರುದ್ಧ ಮಹಾರಾಷ್ಟ್ರದಿಂದ ಖಂಡನಾ ನಿರ್ಣಯ
  • ಬೆಳಗಾವಿ ಗಡಿ ಕುರಿತು ಬೊಮ್ಮಾಯಿ ಹೇಳಿಕೆಗೆ ಮಹಾರಾಷ್ಟ್ರ ವಿಧಾನ ಪರಿಷತ್‌ನಲ್ಲಿ ಖಂಡನೆ
  • ಸರ್ವಾನುಮತದಿಂದ ನಿರ್ಣಯ ಅಂಗೀಕರಿಸಿದ ಮಹಾರಾಷ್ಟ್ರ ವಿಧಾನ ಪರಿಷತ್‌
Basavaraj Bommai
ಮುಂಬಯಿ: ಕರ್ನಾಟಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ವಿರುದ್ಧ ಮಹಾರಾಷ್ಟ್ರ ವಿಧಾನ ಪರಿಷತ್ತಿನಲ್ಲಿ ಶುಕ್ರವಾರ ಖಂಡನಾ ನಿರ್ಣಯ ಅಂಗೀಕರಿಸಲಾಗಿದೆ. ಕರ್ನಾಟಕ ಮತ್ತು ಮಹಾರಾಷ್ಟ್ರ ನಡುವೆ ಈಗ ಗಡಿ ವಿವಾದವಿಲ್ಲಎಂಬ ಬಸವರಾಜ ಬೊಮ್ಮಾಯಿ ಹೇಳಿಕೆಯನ್ನು ಮಹಾರಾಷ್ಟ್ರ ವಿಧಾನ ಪರಿಷತ್‌ ಸದಸ್ಯರು ತೀವ್ರವಾಗಿ ಖಂಡಿಸಿದ್ದು, ಈ ಸಂಬಂಧ ನಿರ್ಣಯವನ್ನು ಸರ್ವಾನುಮತದಿಂದ ಅಂಗೀಕರಿಸಿದ್ದಾರೆ.
''ಅಕ್ಕಲಕೋಟೆ ಮತ್ತು ಸೊಲ್ಲಾಪುರದಂತಹ ಪ್ರದೇಶಗಳನ್ನು ಮಹಾರಾಷ್ಟ್ರಕ್ಕೆ ನೀಡಲಾಯಿತು. ಹೀಗಾಗಿ ಬೆಳಗಾವಿ, ಕಾರವಾರ ಮತ್ತು ನೆರೆಯ ಪ್ರದೇಶಗಳನ್ನು ಕರ್ನಾಟಕಕ್ಕೆ ನೀಡಲಾಯಿತು" ಎಂದು ಬೊಮ್ಮಾಯಿ ಅವರು ಸದನದಲ್ಲಿ ನೀಡಿದ್ದ ಹೇಳಿಕೆಯನ್ನು ಶಿವಸೇನಾ ಶಾಸಕ ದಿವಾಕರ್‌ ರಾವೋಟೆ ಅವರು ಮೇಲ್ಮನೆಯಲ್ಲಿ ಪ್ರಸ್ತಾಪಿಸಿದರು.

ವಿಷಯದ ಗಂಭೀರತೆಯನ್ನು ಪರಿಗಣಿಸಿ ಸಭಾಪತಿ ರಾಮರಾಜೇ ನಾಯ್ಕ್‌ ನಿಂಬಾಳ್ಕರ್‌ ಅವರು, ''ಕರ್ನಾಟಕ ಸರಕಾರ ಮತ್ತು ಸಿಎಂ ಬಸವರಾಜ ಬೊಮ್ಮಾಯಿ ಅವರ ಹೇಳಿಕೆಗಳನ್ನು ಖಂಡಿಸುವ ಪ್ರಸ್ತಾವವನ್ನು ನಾನು ಮುಂದಿಡುತ್ತೇನೆ. ಮಹಾರಾಷ್ಟ್ರ - ಕರ್ನಾಟಕ ಗಡಿ ವಿವಾದ ಕುರಿತಾಗಿ ಸುಪ್ರೀಂ ಕೋರ್ಟ್‌ನಲ್ಲಿ ವಿಚಾರಣೆ ನಡೆಯುತ್ತಿದೆ. ಹೀಗಿರುವಾಗ ಪ್ರಕರಣದ ಮೇಲೆ ಪ್ರಭಾವ ಬೀರುವ ಹೇಳಿಕೆ ನೀಡಬಾರದಿತ್ತು,'' ಎಂದು ಹೇಳಿದರು. ಈ ನಿರ್ಣಯವನ್ನು ಸರ್ವಾನುಮತದಿಂದ ಅಂಗೀಕರಿಸಲಾಯಿತು.
ಮೇಕೆದಾಟು: ತಮಿಳುನಾಡಿಗೆ ಕರ್ನಾಟಕದ ತಿರುಗೇಟು! ತಮಿಳುನಾಡಿನ ನಿರ್ಣಯ ಖಂಡಿಸಿ ಸರ್ವಾನುಮತದ ನಿರ್ಣಯ ಅಂಗೀಕಾರ
ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದ!
ಕರ್ನಾಟಕ ಮತ್ತು ಮಹಾರಾಷ್ಟ್ರ ನಡುವೆ 1956ರಿಂದಲೂ ಗಡಿ ವಿವಾದ ಇದೆ. 1956ರಲ್ಲಿ ಚದುರಿ ಹೋಗಿದ್ದ ಭಾಗಗಳೆಲ್ಲವನ್ನೂ ಏಕೀಕರಣಗೊಳಿಸಿ ಮೈಸೂರು ರಾಜ್ಯವನ್ನು ರಚಿಸಲಾಯಿತು. ಬಾಂಬೆ ಪ್ರಾಂತ್ಯ ಸೇರಿ ಹಲವು ಪ್ರಾಂತ್ಯಗಳಲ್ಲಿ ಕನ್ನಡ ಮಾತನಾಡುವ ಕೆಲ ಪ್ರದೇಶಗಳು ಕರ್ನಾಟಕಕ್ಕೆ ಸೇರಿದವು. ಆದರೆ, ಅಕ್ಕಲಕೋಟೆ, ಜತ್ತ, ಸೊಲ್ಲಾಪುರಗಳು ಮಹಾರಾಷ್ಟ್ರದಲ್ಲೇ ಉಳಿದು ಹೋದವು. ಅದಾದ ಬಳಿಕ ಬೆಳಗಾವಿ, ಬೀದರ್, ಕಾರವಾರ ಜಿಲ್ಲೆಗಳು ಮಹಾರಾಷ್ಟ್ರಕ್ಕೆ ಸೇರಿಸಬೇಕು ಎಂದು ಮಹಾರಾಷ್ಟ್ರ ವಿವಾದ ಸೃಷ್ಟಿಸಿತು.

ಪರಮ್​ ​ಬೀರ್ ಸಿಂಗ್​​ ಕೇಸ್‌ ಸಿಬಿಐಗೆ ವರ್ಗಾವಣೆ! ಸುಪ್ರೀಂ ಕೋರ್ಟ್‌ನಿಂದ ಮಹತ್ವದ ಆದೇಶ
ಮಹಾರಾಷ್ಟ್ರ ಸರಕಾರದ ಒತ್ತಾಯಕ್ಕೆ ಮಣಿದ ಕೇಂದ್ರ ಸರಕಾರ 1960ರ ಜೂನ್ 5 ರಂದು ನಾಲ್ವರು ಸದಸ್ಯರನ್ನೊಳಗೊಂಡ ಆಯೋಗವನ್ನು ರಚಿಸಿತು. ಇದರಲ್ಲಿ ಇಬ್ಬರು ಸದಸ್ಯರನ್ನು ಕರ್ನಾಟಕದಿಂದ ಹಾಗೂ ಇನ್ನಿಬ್ಬರು ಸದಸ್ಯರನ್ನು ಮಹಾರಾಷ್ಟ್ರದಿಂದ ಆಯ್ಕೆ ಮಾಡಲಾಗಿತ್ತು. ಸರ್ವೋಚ್ಛ ನ್ಯಾಯಾಲಯದ ನ್ಯಾಯಮೂರ್ತಿಗಳಾದ ಮಹಾಜನ್ ಹಾಗೂ ಇತರೆ ಪರಿಣಿತರ ತಂಡ ಗಡಿ ಭಾಗದ ಅಧ್ಯಯನ ನಡೆಸಿ ಕನ್ನಡ ಭಾಷಿಕರು ಹೆಚ್ಚಿರುವ ಆಧಾರದಲ್ಲಿ ಬೆಳಗಾವಿಯು ಕರ್ನಾಟಕದಲ್ಲೇ ಉಳಿಯಬೇಕೆಂಬ ತೀರ್ಪನ್ನು ನೀಡಿತು. ಆದರೆ, ಮಹಾರಾಷ್ಟ್ರ ಈ ಆಯೋಗದ ತೀರ್ಪನ್ನು ಒಪ್ಪಲಿಲ್ಲ.
Hijab Verdict: ಮೂವರು ನ್ಯಾಯಮೂರ್ತಿಗಳಿಗೆ 'ವೈ' ಶ್ರೇಣಿ ಭದ್ರತೆ: 'ಜಾತ್ಯತೀತರ ಮೌನ' ಪ್ರಶ್ನಿಸಿದ ಸಿಎಂ ಬೊಮ್ಮಾಯಿ
ಬಳಿಕ 1966ರಲ್ಲಿ ಮಹಾಜನ್‌ ಸಮಿತಿ ರಚಿಸಲಾಯಿತು. ಮಹಾಜನ್‌ ವರದಿಯೂ ಬೆಳಗಾವಿ ಕರ್ನಾಟಕ ರಾಜ್ಯದಲ್ಲೇ ಉಳಿಯಬೇಕು ಎಂದು ಶಿಫಾರಸು ಮಾಡಲಾಯಿತು. ಆದರೆ, ಈ ತೀರ್ಪನ್ನು ಕೂಡ ಮಹಾರಾಷ್ಟ್ರ ಒಪ್ಪಲಿಲ್ಲ. ಆದ್ದರಿಂದ ಇಂದಿಗೂ ಕರ್ನಾಟಕ ಹಾಗೂ ಮಹಾರಾಷ್ಟ್ರದ ನಡುವಿನ ಗಡಿ ವಿವಾದ ಮುಂದುವರಿದಿದೆ.
ಅವಿನಾಶ ವಗರನಾಳ
ಲೇಖಕರ ಬಗ್ಗೆ
ಅವಿನಾಶ ವಗರನಾಳ
ವಿಜಯ ಕರ್ನಾಟಕ ಡಿಜಿಟಲ್‌ ವಿಭಾಗದಲ್ಲಿ ಪತ್ರಕರ್ತರಾಗಿ ಕಾರ್ಯ ನಿರ್ವಹಿಸುತ್ತಿರುವ ಇವರು ಕಳೆದ 6 ವರ್ಷಗಳಿಂದ ವಿವಿಧ ಪತ್ರಿಕೆ, ವಿದ್ಯುನ್ಮಾನ ಮಾಧ್ಯಮದಲ್ಲಿ ಕಾರ್ಯನಿರ್ವಹಿಸಿದ್ದಾರೆ. ಸದ್ಯ ಡಿಜಿಟಲ್‌ ಮಾಧ್ಯಮದಲ್ಲಿ ಕಾರ್ಯನಿರ್ವಹಿಸುತ್ತಿರುವ ಇವರು ಒಂದಿಷ್ಟು ದಿನ ಕೆಲ ಸಂಸ್ಥೆಗಳಲ್ಲಿ ಸಾರ್ವಜನಿಕ ಸಂಪರ್ಕವನ್ನು ನಿಭಾಯಿಸಿದ್ದಾರೆ. ಇವರು ಹುಟ್ಟಿ ಬೆಳೆದಿದ್ದು ಭತ್ತದ ನಾಡು, ಹನುಮ ಹುಟ್ಟಿದ ನಾಡು ಗಂಗಾವತಿಯಲ್ಲಿ. ಕುವೆಂಪು ವಿಶ್ವವಿದ್ಯಾಲಯದಲ್ಲಿ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ರಾಜಕೀಯ ವಿಷಯಗಳು, ಪ್ರಚಲಿತ ವಿದ್ಯಮಾನಗಳ ಮೇಲೆ ಆಸಕ್ತಿ. ತಂತ್ರಜ್ಞಾನದ ವಿಷಯಗಳು ಇವರಿಗೆ ಹೆಚ್ಚು ಆಪ್ತ. ಇವರಿಗೆ ಊರೂರು ಸುತ್ತೋದು.. ಕ್ರಿಕೆಟ್‌ ಆಡೋದು.. ಅದಿದು ಹುಡುಕೋದು ಇಷ್ಟ. ಅಂತೆ.... ಇನ್ನಷ್ಟು ಓದಿ
ಕಾಮೆಂಟ್‌ ಮಾಡಿ

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ