Please enable javascript.ಜಿಲ್ಲಾ ಮಟ್ಟದ ಪ್ರೌಢಶಾಲಾ ವಾಲಿಬಾಲ್ ಪಂದ್ಯ - High School Volleyball Match - Vijay Karnataka

ಜಿಲ್ಲಾ ಮಟ್ಟದ ಪ್ರೌಢಶಾಲಾ ವಾಲಿಬಾಲ್ ಪಂದ್ಯ

Vijaya Karnataka Web 2 Aug 2015, 4:32 am
Subscribe

ವಿದ್ಯಾರ್ಥಿಗಳು ಕ್ರೀಡಾ ಚಟುವಟಿಕೆಗಳಲ್ಲಿ ಪಾಲ್ಗೊಳ್ಳುವುದರೊಂದಿಗೆ ಕ್ರೀಡಾಭಿರುಚಿಯನ್ನು ಸವಿಯಬೇಕು ಎಂದು ಮೈಸೂರು ವಿಶ್ವವಿದ್ಯಾನಿಲಯ ದೈಹಿಕ ಶಿಕ್ಷಣ ವಿಭಾಗದ ನಿರ್ದೇಶಕ ಡಾ.ಪಿ. ಕೃಷ್ಣಯ್ಯ ಹೇಳಿದರು.

high school volleyball match
ಜಿಲ್ಲಾ ಮಟ್ಟದ ಪ್ರೌಢಶಾಲಾ ವಾಲಿಬಾಲ್ ಪಂದ್ಯ
ಓದಿನೊಂದಿಗೆ ಕ್ರೀಡಾ ಚಟುವಟಿಕೆಯಲ್ಲೂ ಪಾಲ್ಗೊಳ್ಳಿ: ಸಲಹೆ
ಮೈಸೂರು: ವಿದ್ಯಾರ್ಥಿಗಳು ಕ್ರೀಡಾ ಚಟುವಟಿಕೆಗಳಲ್ಲಿ ಪಾಲ್ಗೊಳ್ಳುವುದರೊಂದಿಗೆ ಕ್ರೀಡಾಭಿರುಚಿಯನ್ನು ಸವಿಯಬೇಕು ಎಂದು ಮೈಸೂರು ವಿಶ್ವವಿದ್ಯಾನಿಲಯ ದೈಹಿಕ ಶಿಕ್ಷಣ ವಿಭಾಗದ ನಿರ್ದೇಶಕ ಡಾ.ಪಿ. ಕೃಷ್ಣಯ್ಯ ಹೇಳಿದರು.

ಜಿಲ್ಲಾ ವಾಲಿಬಾಲ್ ಸಂಸ್ಥೆ ಶನಿವಾರ ನಗರದ ಸ್ಪೋರ್ಟ್ಸ್ ಪೆವಿಲಿಯನ್ ಮೈದಾನದಲ್ಲಿ ಆಯೋಜಿಸಿದ್ದ ಜಿಲ್ಲಾ ಮಟ್ಟದ ಪ್ರೌಢಶಾಲಾ ಬಾಲಕರ ಮತ್ತು ಬಾಲಕಿಯರ ವಾಲಿಬಾಲ್ ಪಂದ್ಯಾವಳಿ ಉದ್ಘಾಟನೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ವಿದ್ಯಾರ್ಥಿ ಹಂತದಿಂದಲೇ ಕ್ರೀಡಾ ಮನೋಭಾವವನ್ನು ಓದಿನೊಂದಿಗೆ ರೂಢಿಸಿಕೊಳ್ಳಬೇಕು. ವ್ಯಕ್ತಿಯ ಮಾನಸಿಕ ಮತ್ತು ದೈಹಿಕ ಸದೃಢತೆಗೆ ಕ್ರೀಡೆ ಸಹಕಾರಿಯಾಗಿದ್ದು, ಒಂದಲ್ಲೊಂದು ಕ್ರೀಡಾ ಚಟುವಟಿಕೆಗಳಲ್ಲಿ ಪಾಲ್ಗೊಂಡು ಕ್ರೀಡೆಯ ಸವಿಯನ್ನು ಸವಿಯಬೇಕು. ಕ್ರೀಡಾ ಕ್ಷೇತ್ರಗಳಲ್ಲಿ ನಮ್ಮ ಪ್ರತಿಭೆಯನ್ನು ಹೊರಚೆಲ್ಲಲು ಇಂದು ಬಹಳಷ್ಟು ಅವಕಾಶಗಳಿವೆ. ಇರುವ ಅವಕಾಶಗಳನ್ನು ಸೂಕ್ತ ರೀತಿಯಲ್ಲಿ ಬಳಕೆ ಮಾಡಿಕೊಂಡು ನಮ್ಮ ಸಾಮರ್ಥ್ಯವನ್ನು ಹೆಚ್ಚಿಸಿಕೊಳ್ಳಬೇಕು ಎಂದರು.

ವಿದ್ಯಾರ್ಥಿಗಳಿಗೆ ಕ್ರೀಡಾ ತರಬೇತಿ ನೀಡಲು ನುರಿತ ತರಬೇತುದಾರರಿದ್ದಾರೆ. ವಿಶಾಲವಾದ ಆಟದ ಮೈದಾನಗಳಿವೆ. ಇವುಗಳನ್ನು ಬಳಕೆ ಮಾಡಿಕೊಂಡು ರಾಜ್ಯ ಮತ್ತು ರಾಷ್ಟ್ರೀಯ ಮಟ್ಟದ ಕ್ರೀಡೆಗಳಲ್ಲಿ ಪಾಲ್ಗೊಳ್ಳುವ ಅವಕಾಶವನ್ನು ಪಡೆದುಕೊಳ್ಳಿ ಎಂದು ಆಶಿಸಿದರು.

ಜಿಲ್ಲಾ ವಾಲಿಬಾಲ್ ಸಂಸ್ಥೆ ಕಾರ್ಯಾಧ್ಯಕ್ಷ ಡಾ.ಎಂ. ಚಂದ್ರಕುಮಾರ್, ನಮ್ಮ ದೈನಂದಿನ ಚಟುವಟಿಕೆಗಳಲ್ಲಿ 2 ರಿಂದ 4 ಗಂಟೆಯಷ್ಟು ಸಮಯವನ್ನು ಕ್ರೀಡಾ ಚಟುವಟಿಕೆಗೆ ಮೀಸಲಿರಿಸಿದರೆ, ನಮ್ಮಲ್ಲಿ ಕ್ರೀಡಾ ಸಾಮರ್ಥ್ಯ ಹೆಚ್ಚುತ್ತದೆ. ಅಲ್ಲದೆ ಉತ್ತಮ ಆರೋಗ್ಯವನ್ನು ಕಾಪಾಡಿಕೊಳ್ಳಬಹುದು. ಈ ನಿಟ್ಟಿನಲ್ಲಿ ಇರುವ ಅವಕಾಶಗಳನ್ನು ಬಳಕೆ ಮಾಡಿಕೊಂಡು ಉತ್ತಮ ಪ್ರತಿಭೆಗಳಾಗಿ ಹೊರಹೊಮ್ಮಿ ಎಂದು ಹೇಳಿದರು.

ಬಾಲಕರ ವಿಭಾಗದಲ್ಲಿ ನಗರದ 19 ಶಾಲೆಗಳ ತಂಡಗಳು ಮತ್ತು ಬಾಲಕಿಯರ ವಿಭಾಗದಲ್ಲಿ ನಾಲ್ಕು ಶಾಲೆಗಳ ತಂಡಗಳು ಭಾಗವಹಿಸಿವೆ. ಮೈಸೂರು ವಿಶ್ವವಿದ್ಯಾನಿಲಯ ವಿದ್ಯಾರ್ಥಿ ಕ್ಷೇಮಪಾಲನ ಅಧಿಕಾರಿ ಪ್ರೊ.ಎಂ. ರುದ್ರಯ್ಯ, ಡಾ. ಎಂ. ವೆಂಕಟೇಶ್, ಜಿಲ್ಲಾ ವಾಲಿಬಾಲ್ ಸಂಸ್ಥೆ ಕಾರ್ಯದರ್ಶಿ ಎಚ್.ವಿ. ಉದಯ್‌ಕುಮಾರ್ ಹಾಜರಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ