ಆ್ಯಪ್ನಗರ

ರೈತರು ಸಿಂಘು ಗಡಿ ತೊರೆಯುವಂತೆ ಸ್ಥಳೀಯರಿಂದ ಪ್ರತಿಭಟನೆ: ಸ್ಥಳದಲ್ಲಿ ಬಿಗುವಿನ ವಾತಾವರಣ!

ಕೇಂದ್ರದ ಕೃಷಿ ಕಾಯ್ದೆಗಳ ಜಾರಿ ವಿರೋಧಿಸಿ ರಾಷ್ಟ್ರ ರಾಜಧಾನಿ ನವದೆಹಲಿಯ ಸಿಂಘು ಗಡಿ ಬಳಿ ಪ್ರತಿಬಟನೆ ನಡೆಸುತ್ತಿರುವ ರೈತರ ವಿರುದ್ಧ, ಸ್ಥಳೀಯರ ಆಕ್ರೋಶ ಭುಗಿಲೆದ್ದಿದೆ. ಕಳೆದ ಎರಡು ತಿಂಗಳಿಗೂ ಅಧಿಕ ಕಾಲ ಸಿಂಘು ಗಡಿಯಲ್ಲಿ ಬೀಡು ಬಿಟ್ಟಿರುವ ರೈತರು ಪ್ರತಿಭಟನೆ ಕೈಬಿಟ್ಟು, ಸ್ಥಳ ತೊರೆಯುವಂತೆ ಆಗ್ರಹಿಸಿ ಸ್ಥಳೀಯರು ಪ್ರತಿಭಟನೆ ನಡೆಸಿದ್ದಾರೆ.

Vijaya Karnataka Web 29 Jan 2021, 2:42 pm

ಹೈಲೈಟ್ಸ್‌:

  • ರೈತರು ಸಿಂಘು ಗಡಿ ತೆರವುಗೊಳಿಸುವಂತೆ ಸ್ಥಳೀಯರ ಒತ್ತಾಯ.
  • ಸಿಂಘು ಗಡಿ ಬಳಿ ರೈತರು ಹಾಗೂ ಸ್ಥಳೀಯರ ನಡುವೆ ಜಟಾಪಟಿ.
  • ಪರಿಸ್ಥಿತಿ ನಿಯಂತ್ರಿಸಲು ಪೊಲೀಸರಿಂದ ಲಾಠಿ ಚಾರ್ಜ್, ಅಶ್ರುವಾಯು ಪ್ರಯೋಗ.
  • ಸುದೀರ್ಘ ರೈತ ಪ್ರತಿಭಟನೆಗೆ ಅಸಮಾಧಾನ ವ್ಯಕ್ತಪಡಿಸಿದ ಸಿಂಘು ನಿವಾಸಿಗಳು.
ಹೈಲೈಟ್ಸ್‌ ಮಾತ್ರವೇ ಓದಲು ಆ್ಯಪ್‌ ಡೌನ್‌ಲೋಡ್‌ ಮಾಡಿ
Vijaya Karnataka Web Singhu Border
ಸಿಂಘು ಗಡಿಯಲ್ಲಿ ಸ್ಥಳೀಯರ ಪ್ರತಿಭಟನೆ
ಹೊಸದಿಲ್ಲಿ: ಕೇಂದ್ರದ ಕೃಷಿ ಕಾಯ್ದೆಗಳ ಜಾರಿ ವಿರೋಧಿಸಿ ರಾಷ್ಟ್ರ ರಾಜಧಾನಿ ನವದೆಹಲಿಯ ಸಿಂಘು ಗಡಿ ಬಳಿ ಪ್ರತಿಬಟನೆ ನಡೆಸುತ್ತಿರುವ ರೈತರ ವಿರುದ್ಧ, ಸ್ಥಳೀಯರ ಆಕ್ರೋಶ ಭುಗಿಲೆದ್ದಿದೆ.
ಕಳೆದ ಎರಡು ತಿಂಗಳಿಗೂ ಅಧಿಕ ಕಾಲ ಸಿಂಘು ಗಡಿಯಲ್ಲಿ ಬೀಡು ಬಿಟ್ಟಿರುವ ರೈತರು ಪ್ರತಿಭಟನೆ ಕೈಬಿಟ್ಟು, ಸ್ಥಳ ತೊರೆಯುವಂತೆ ಆಗ್ರಹಿಸಿ ಸ್ಥಳೀಯರು ಪ್ರತಿಭಟನೆ ನಡೆಸಿದ್ದಾರೆ.

ಈ ವೇಳೆ ಪ್ರತಿಭಟನಾನಿರತ ರೈತರು ಹಾಗೂ ಸ್ಥಳೀಯರ ನಡುವೆ ಜಟಾಪಟಿ ನಡೆದಿದ್ದು, ಪರಿಸ್ಥಿತಿ ತಿಳಿಗೊಳಿಸಲು ಪೊಲೀಸರು ಹರಸಾಹಸಪಡುತ್ತಿದ್ದಾರೆ.

ರೈತರನ್ನು ಗಡಿಯಿಂದ ತೆರವುಗೊಳಿಸಲು ಯೋಗಿ ಸರ್ಕಾರ ಆದೇಶ: ಗುಂಡು ಹೊಡೆದರೂ ಹೋಗಲ್ಲ ಎಂದ ರೈತರು

ರೈತರು ಪ್ರತಿಭಟನೆ ನಡೆಸುತ್ತಿದ್ದ ಸ್ಥಳಕ್ಕೆ ನುಗ್ಗಿದ ಸಿಂಘು ಗಡಿ ನಿವಾಸಿಗಳು, ಈ ಕೂಡಲೇ ಪ್ರತಿಭಟನೆಯನ್ನು ಕೈಬಿಟ್ಟು ಸ್ಥಳ ಖಾಲಿ ಮಾಡುವಂತೆ ಆಗ್ರಹಿಸಿದ್ದಾರೆ.


ಈ ವೇಳೆ ರೈತರು ಹಾಗೂ ಸ್ಥಳೀಯರ ನಡುವೆ ವಾಗ್ವಾದ ನಡೆದಿದ್ದು, ಪರಸ್ಪರ ಕೈಕೈ ಮೀಲಾಯಿಸುವ ಹಂತಕ್ಕೆ ತಲುಪಿದೆ. ಕೂಡಲೇ ಮಧ್ಯಪ್ರವೇಶಿಸಿದ ಪೊಲೀಸರು, ಪರಿಸ್ಥಿತಿಯನ್ನು ನಿಭಾಯಿಸಲು ಲಾಠಿ ಚಾರ್ಜ್ ಹಾಗೂ ಅಶ್ರುವಾಯು ಪ್ರಯೋಗಿಸಿದ್ದಾರೆ.

ಎರಡು ತಿಂಗಳಿಗೂ ಅಧಿಕ ಕಾಲದಿಂದ ರೈತರು ಪ್ರತಿಭಟನೆ ನಡೆಸುತ್ತಿರುವುದರಿಂದ ಸ್ಥಳೀಯರಿಗೆ ಭಾರೀ ತೊಂದರೆಯಾಗುತ್ತಿದೆ ಎಂದು ಪ್ರತಿಭಟಟನಾಕಾರರು ಈ ವೇಳೆ ಆರೋಪಿಸಿದರು.

ದಿಲ್ಲಿಯಲ್ಲಿ ಹಿಂಸಾತ್ಮಕ ರೈತ ಹೋರಾಟದ ಹಿಂದೆ ಬಾಹ್ಯ ಶಕ್ತಿಗಳ ಕೈವಾಡ: ಎಎಪಿ ಆರೋಪ

ಆದರೆ ಸಿಂಘು ಗಡಿ ಖಾಲಿ ಮಾಡಲು ನಿರಾಕರಿಸಿದ ಪ್ರತಿಭಟನಾನಿರತ ರೈತರು, ನಮ್ಮ ನ್ಯಾಯಯುತ ಬೇಡಿಕೆ ಈಡೇರುವವರೆಗೂ ಇಲ್ಲಿಂದ ಕದಲುವುದಿಲ್ಲ ಎಂದು ಸ್ಪಷ್ಟಪಡಿಸಿದರು.

ಒಟ್ಟಿನಲ್ಲಿ ರೈತ ಪ್ರತಿಭಟನೆ ಇದೀಗ ಸ್ಥಳಿಯರ ಅಸಮಾಧಾನಕ್ಕೆ ಕಾರಣವಾಗಿದ್ದು, ಸಿಂಘು ಗಡಿ ಖಾಲಿ ಮಾಡುವಂತೆ ಒತ್ತಾಯ ಕೇಳಿ ಬಂದಿರುವುದು ಕುತೂಹಲ ಕೆರಳಿಸಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ