Please enable javascript.ಬ್ರಾಹ್ಮಣ,17ರಂದು ಬ್ರಾಹ್ಮಣ ಮಹಾಸಭಾಕ್ಕೆ ಚುನಾವಣೆ - election to the brahmin mahasabha on 17th - Vijay Karnataka

17ರಂದು ಬ್ರಾಹ್ಮಣ ಮಹಾಸಭಾಕ್ಕೆ ಚುನಾವಣೆ

Vijaya Karnataka 14 Feb 2019, 5:00 am
Subscribe

ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾದ ಅಧ್ಯಕ್ಷರ ಚುನಾವಣೆಗೆ ಸ್ಪರ್ಧಿಸಿರುವ ಕೆ.ಎನ್‌.ವೆಂಕಟನಾರಾಯಣ್‌ ಅವರನ್ನು ಬೆಂಬಲಿಸುವಂತೆ ಗಾಯತ್ರಿ ಪ್ರತಿಷ್ಠಾನದ ಅಧ್ಯಕ್ಷ ಎಚ್‌.ವಿ.ಸುಬ್ರಹ್ಮಣ್ಯ ಮನವಿ ಮಾಡಿದರು.

election to the brahmin mahasabha on 17th
17ರಂದು ಬ್ರಾಹ್ಮಣ ಮಹಾಸಭಾಕ್ಕೆ ಚುನಾವಣೆ
ಶಿವಮೊಗ್ಗ: ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾದ ಅಧ್ಯಕ್ಷರ ಚುನಾವಣೆಗೆ ಸ್ಪರ್ಧಿಸಿರುವ ಕೆ.ಎನ್‌.ವೆಂಕಟನಾರಾಯಣ್‌ ಅವರನ್ನು ಬೆಂಬಲಿಸುವಂತೆ ಗಾಯತ್ರಿ ಪ್ರತಿಷ್ಠಾನದ ಅಧ್ಯಕ್ಷ ಎಚ್‌.ವಿ.ಸುಬ್ರಹ್ಮಣ್ಯ ಮನವಿ ಮಾಡಿದರು.

ಸುದ್ದಿಗೋಷ್ಠಿಯಲ್ಲಿ ಬುಧವಾರ ಅವರು ಮಾತನಾಡಿ, ಫೆ.17ರಂದು ಮಹಾಸಭಾದ ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆಯಲಿದ್ದು, ಈ ಚುನಾವಣೆಯಲ್ಲಿ ವೆಂಕಟನಾರಾಯಣ್‌ ಅವರನ್ನು ಗೆಲ್ಲಿಸುವ ಮೂಲಕ ಮುಂದಿನ ಮೂರು ವರ್ಷಗಳ ಅವಧಿಯಲ್ಲಿ ಮಹಾಸಭಾದಲ್ಲಿ ಉಳಿದಿರುವ ಅಭಿವೃದ್ಧಿ ಕಾರ್ಯಗಳನ್ನು ಮಾಡಲು ಪ್ರೋತ್ಸಾಹಿಸಬೇಕು ಎಂದರು.

ವೆಂಕಟನಾರಾಯಣ್‌ ಅವರು ಈಗಾಗಲೇ ತಮ್ಮ ಸಂಘಟನಾ ಚತುರತೆ ಮತ್ತು ಧ್ಯೇಯಗಳ ಮೂಲಕ ಮೊದಲ ಅವಧಿ ಪೂರೈಸಿದ್ದು, ಆ ಮೂಲಕ ತಾನೊಬ್ಬ ಸೂಕ್ತ ಅಧ್ಯಕ್ಷ ಎಂಬುದನ್ನು ಸಾಬೀತುಪಡಿಸಿದ್ದಾರೆ. ಮುಂದಿನ ದಿನಗಳಲ್ಲಿ ಬಾಕಿ ಇರುವ ಕೆಲಸಗಳನ್ನು ಪೂರೈಸುವ ನಿಟ್ಟಿನಲ್ಲಿ ಇವರನ್ನು ಇನ್ನೊಂದು ಅವಧಿಗೆ ಅಧ್ಯಕ್ಷರಾಗಿ ಅವರನ್ನು ಆಯ್ಕೆ ಮಾಡುವುದು ಸೂಕ್ತವಾಗಿದೆ. ಈ ಹಿನ್ನೆಲೆಯಲ್ಲಿ ಜಿಲ್ಲೆಯ ಎಲ್ಲಾ ಬ್ರಾಹ್ಮಣ ಸಮಾಜ ಬಾಂಧವರು ಅವರಿಗೆ ಮತ ನೀಡಬೇಕು ಎಂದು ಮನವಿ ಮಾಡಿದರು.

ನಗರದ ವಾಸವಿ ವಿದ್ಯಾಸಂಸ್ಥೆಯಲ್ಲಿ ಫೆ.17ರಂದು ಬೆಳಗ್ಗೆ 11ರಿಂದ ಸಂಜೆ 4ರವರೆಗೆ ಚುನಾವಣೆ ನಡೆಯಲಿದೆ. ಶಿವಮೊಗ್ಗ , ಉತ್ತರ ಕನ್ನಡ, ಚಿತ್ರದುರ್ಗ, ದಾವಣಗೆರೆ ಹಾಗೂ ಉಡುಪಿ ಕ್ಷೇತ್ರದಲ್ಲಿರುವ ಸಮಾಜದ ಮತದಾರರು ಈ ಚುನಾವಣೆಯಲ್ಲಿ ಮತ ಚಲಾಯಿಸಲಿದ್ದಾರೆ. ಶಿವಮೊಗ್ಗ ನಗರದಲ್ಲಿಯೇ 2211 ಮತದಾರರಿದ್ದು, ಒಟ್ಟು ಐದು ಜಿಲ್ಲೆಗಳಿಂದ 2911 ಮತದಾರರು ಮತ ಚಲಾಯಿಸಲಿದ್ದಾರೆ ಎಂದರು. ಗೋಷ್ಠಿಯಲ್ಲಿ ಮ.ಸ. ನಂಜುಂಡಸ್ವಾಮಿ, ದತ್ತಾತ್ರಿ, ಮಧುಸೂದನ್‌, ಕೇಶವಮೂರ್ತಿ ಮತ್ತಿತರರು ಇದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ