Please enable javascript.ಬೆಂಕಿಯಿಂದ ಅರಣ್ಯ ರಕ್ಷಣೆ:ಜನರೂ ಸಹಕರಿಸಲಿ - forest protection by fire: let people help - Vijay Karnataka

ಬೆಂಕಿಯಿಂದ ಅರಣ್ಯ ರಕ್ಷಣೆ:ಜನರೂ ಸಹಕರಿಸಲಿ

Vijaya Karnataka 29 Dec 2018, 5:00 am
Subscribe

ಯಲ್ಲಾಪುರ : ಅರಣ್ಯವನ್ನು ಬೆಂಕಿಯಿಂದ ರಕ್ಷಿಸಲು ಅರಣ್ಯ ಇಲಾಖೆಯ ಜತೆಗೆ ಸಾರ್ವಜನಿಕರೂ ಕೈಜೋಡಿಸಬೇಕು. ಅಕಸ್ಮಾತ್‌ ಅರಣ್ಯ ಪ್ರದೇಶದಲ್ಲಿ ಬೆಂಕಿ ಬಿದ್ದಿರುವುದನ್ನು ಕಂಡರೆ ಕೂಡಲೇ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತರಬೇಕು ಎಂದು ಉಪ ಅರಣ್ಯ ಸಂರಕ್ಷ ಣಾಧಿಕಾರಿ ಆರ್‌.ಜಿ.ಭಟ್ಟ ಹೇಳಿದರು.

KWR-28 YLP 1 ; A
ಯಲ್ಲಾಪುರ : ಅರಣ್ಯವನ್ನು ಬೆಂಕಿಯಿಂದ ರಕ್ಷಿಸಲು ಅರಣ್ಯ ಇಲಾಖೆಯ ಜತೆಗೆ ಸಾರ್ವಜನಿಕರೂ ಕೈಜೋಡಿಸಬೇಕು. ಅಕಸ್ಮಾತ್‌ ಅರಣ್ಯ ಪ್ರದೇಶದಲ್ಲಿ ಬೆಂಕಿ ಬಿದ್ದಿರುವುದನ್ನು ಕಂಡರೆ ಕೂಡಲೇ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತರಬೇಕು ಎಂದು ಉಪ ಅರಣ್ಯ ಸಂರಕ್ಷ ಣಾಧಿಕಾರಿ ಆರ್‌.ಜಿ.ಭಟ್ಟ ಹೇಳಿದರು.

ಪಟ್ಟಣದ ಎಪಿಎಂಸಿ ಎದುರಿನ ಉದ್ಯಾನದಲ್ಲಿ ಅರಣ್ಯ ಇಲಾಖೆಯ ವತಿಯಿಂದ ಗ್ರಾಮ ಅರಣ್ಯ ಸಮಿತಿಯ ಸದಸ್ಯರಿಗೆ ಬೆಂಕಿಯಿಂದ ಅರಣ್ಯ ಸಂರಕ್ಷ ಣೆಯಲ್ಲಿ ಗ್ರಾಮ ಅರಣ್ಯ ಸಮಿತಿಗಳ ಪಾತ್ರದ ಕುರಿತು ಶುಕ್ರವಾರ ನಡೆದ ಕಾರ್ಯಾಗಾರವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಅರಣ್ಯವನ್ನು ಬೆಂಕಿಯಿಂದ ರಕ್ಷಿಸುವ ಕಾರ್ಯವು ಅಭಿಯಾನದಂತೆ ನಡೆಯಬೇಕಾಗಿದೆ. ಕಳೆದ ಇಪ್ಪತ್ತು ವರ್ಷಗಳಲ್ಲಿ ಇದೇ ಪ್ರಥಮ ಬಾರಿಗೆ ಕಳೆದ ವರ್ಷ ಯಲ್ಲಾಪುರ ವಿಭಾಗದಲ್ಲಿ ಅರಣ್ಯಕ್ಕೆ ಬೆಂಕಿ ಬಿದ್ದ ಪ್ರಕರಣಗಳು ಉಳಿದ ನಾಲ್ಕು ವಿಭಾಗಗಳಿಗಿಂತಲೂ ಕಡಿಮೆ ಎಂದು ದಾಖಲಾಗಿದ್ದು, ಇದು ಇಲಾಖಾ ಮಟ್ಟದಲ್ಲಿ ಪ್ರಶಂಸೆಗೂ ಕಾರಣವಾಗಿದೆ. ಈ ವರ್ಷವೂ ಇದೇ ಗುರಿಯನ್ನು ಹೊಂದಲಾಗಿದೆ ಎಂದು ವಿವರಿಸಿದರು.

ಈ ವರ್ಷ ಅತಿ ಕಡಿಮೆ ಬೆಂಕಿ ಬಿದ್ದ ಪ್ರದೇಶಗಳ ಗ್ರಾಮ ಅರಣ್ಯ ಸಮಿತಿಗಳಿಗೆ ಹಾಗೂ ಈ ವ್ಯಾಪ್ತಿಯ ಗ್ರಾಮ ಪಂಚಾಯಿತಿಗಳಿಗೆ ಇಲಾಖೆಯಿಂದ ಬಹುಮಾನ ನೀಡಲಾಗುವುದು. ಅರಣ್ಯಕ್ಕೆ ಬೆಂಕಿ ಬಿದ್ದಿರುವುದು ಗಮನಕ್ಕೆ ಬಂದರೆ ಕೂಡಲೇ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದರೆ ಅಧಿಕಾರಿಗಳು ತಕ್ಷ ಣ ಸ್ಪಂದಿಸಿ ಸ್ಥಳಕ್ಕೆ ತೆರಳಿ ಬೆಂಕಿ ನಂದಿಸಲು ಕ್ರಮ ಕೈಗೊಳ್ಳುತ್ತಾರೆ. ಈಗಾಗಲೇ ಸ್ಥಳೀಯ ರೇಂಜ್‌ ಕಚೇರಿಯ ಅಧಿಕಾರಿಗಳಿಗೆ ಹಾಗೂ ಸಿಬ್ಬಂದಿಗೆ ಈ ಕುರಿತು ಮಾರ್ಗದರ್ಶನ ನೀಡಲಾಗಿದೆ ಎಂದರು.

ಕಾಡಿಗೆ ಬೆಂಕಿ ಬಿದ್ದ ತಕ್ಷ ಣ ಗಾಬರಿಗೊಳ್ಳದೇ, ಸೂಕ್ತ ಮುನ್ನೆಚ್ಚರಿಕೆ ಕ್ರಮಗಳನ್ನು ಅನುಸರಿಸಿ ಬೆಂಕಿ ನಂದಿಸುವ ಕಾರ್ಯಕ್ಕೆ ಮುಂದಾಗಬೇಕೆಂದು ಸಲಹೆ ನೀಡಿದ ಅವರು, ಈಗಾಗಲೇ ಕೆಲವು ಉಪಕರಣಗಳನ್ನೂ ಸಿಬ್ಬಂದಿಗೆ ನೀಡಲಾಗಿದೆ. ಬೆಂಕಿ ಬಿದ್ದ ತಕ್ಷ ಣ ಅರಣ್ಯ ಇಲಾಖೆಗೆ ಮತ್ತು ಅಗ್ನಿಶಾಮಕ ದಳಕ್ಕೆ ಕರೆ ಮಾಡಿ ಬೆಂಕಿ ನಂದಿಸುವ ಕಾರ್ಯದಲ್ಲಿ ಇಲಾಖೆಯ ಜತೆಗೆ ಸಾರ್ವಜನಿಕರೂ ಕೈಜೋಡಿಸಬೇಕು ಎಂದರು.

ಅಗ್ನಿಶಾಮಕ ದಳದ ಅಧಿಕಾರಿ ವಿ.ಜಿ.ನಾಯ್ಕ ಮಾತನಾಡಿ, ವಿವಿಧ ರೀತಿಯ ಬೆಂಕಿಯ ಅವಘಡಗಳು ಸಂಭವಿಸಿದಾಗ ಕೂಡಲೇ ಅಗ್ನಿಶಾಮಕ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತರಬೇಕು. ಸ್ಥಳೀಯ ಕಚೇರಿಯ ದೂರವಾಣಿ ಸಂಖ್ಯೆ 261236ಕ್ಕೆ ಸಾರ್ವಜನಿಕರು ಕರೆ ಮಾಡಬಹುದು ಎಂದರು.

ಸಮುದಾಯ ಆರೋಗ್ಯ ಕೇಂದ್ರದ ತಜ್ಞ ವೈದ್ಯೆ ಡಾ. ಸೌಮ್ಯಾ ಕೆ.ವಿ. ಮಾತನಾಡಿ, ಅಗ್ನಿ ಆಕಸ್ಮಿಕಗಳು ಸಂಭವಿಸಿದಾಗ ಕೈಗೊಳ್ಳಬೇಕಾದ ಮುಂಜಾಗ್ರತೆ ಕ್ರಮಗಳು ಹಾಗೂ ಸುಟ್ಟ ಗಾಯಗಳ ಆರೈಕೆಗಳ ಕುರಿತು ಸಮಗ್ರ ಮಾಹಿತಿ ನೀಡಿದರು. ಬೆಂಕಿಯಿಂದ ಅರಣ್ಯವನ್ನು ರಕ್ಷಿಸುವ ಕುರಿತು ಅಗ್ನಿಶಾಮಕ ಇಲಾಖೆಯ ಅಧಿಕಾರಿಗಳಿಂದ ಪ್ರಾತ್ಯಕ್ಷಿಕೆ ನಡೆಸಲಾಯಿತು.

ಎಸಿಎಫ್‌ಗಳಾದ ಪ್ರಶಾಂತ ಪಿ.ಕೆ.ಎಂ., ಅಶೋಕ ಭಟ್ಟ, ಆರ್‌.ಎಫ್‌.ಒ. ಬಾಲಸುಬ್ರಹ್ಮಣ್ಯ, ಅಗ್ನಿಶಾಮಕ ಅಧಿಕಾರಿ ಭೀಮಪ್ಪ ಉಪ್ಪಾರ, ಶಿಸ್ತಮುಡಿ ಗ್ರಾಮ ಅರಣ್ಯ ಸಮಿತಿ ಅಧ್ಯಕ್ಷ ಗೋಪಾಲಕೃಷ್ಣ ಭಟ್ಟ, ತಾಲೂಕಿನ ವಿವಿಧ ಗ್ರಾಮ ಅರಣ್ಯ ಸಮಿತಿಯ ಪ್ರಮುಖರು ಇದ್ದರು.


ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ