ಆ್ಯಪ್ನಗರ

ಆತ ನಿಜಕ್ಕೂ ಚೇಸ್ ಮಾಸ್ಟರ್ - ವಿರಾಟ್ ಕೊಹ್ಲಿಯನ್ನು ಶ್ಲಾಘಿಸಿದ ಗೌತಮ್ ಗಂಭೀರ್!

Gautam Gambhir on Virat Kohli: 2023ರ ವಿಶ್ವಕಪ್ ಟೂರ್ನಿಯಲ್ಲಿ ಅತ್ಯುತ್ತಮ ಬ್ಯಾಟಿಂಗ್ ಪ್ರದರ್ಶನ ತೋರುತ್ತಿರುವ ವಿರಾಟ್ ಕೊಹ್ಲಿಯನ್ನು 2011ರ ವಿಶ್ವಕಪ್ ವಿಜೇತ ಆಟಗಾರ ಗೌತಮ್ ಗಂಭೀರ್ ಮುಕ್ತ ಕಂಠದಿಂದ ಪ್ರಶಂಸಿಸಿದ್ದಾರೆ. ಧರ್ಮಶಾಲಾದ ಎಚ್ ಪಿಸಿಎ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ನ್ಯೂಜಿಲೆಂಡ್ ವಿರುದ್ಧ 95 ರನ್ ಬಾರಿಸಿ ತಂಡಕ್ಕೆ 4 ವಿಕೆಟ್ ಗೆಲುವು ತಂದುಕೊಟ್ಟ ಕೊಹ್ಲಿ ನಿಜಕ್ಕೂ ವಿಶ್ವ ಶ್ರೇಷ್ಠ ಚೇಸಿಂಗ್ ಮಾಸ್ಟರ್ ಎಂದು ಗಂಭೀರ್ ಹೇಳಿದ್ದಾರೆ. ಸಿಡಿಲಬ್ಬರದ ಬ್ಯಾಟಿಂಗ್ ನಡೆಸುತ್ತಿರುವ ರೋಹಿತ್ ಶರ್ಮಾ ಅವರನ್ನೂ ಗಂಭೀರ್ ಪ್ರಶಂಸಿಸಿದ್ದಾರೆ.

Authored byವಿಜೇತ್ ಕುಮಾರ್‌ ಡಿ.ಎನ್ | Vijaya Karnataka Web 23 Oct 2023, 9:58 am

ಹೈಲೈಟ್ಸ್‌:

  • ಭಾರತದ ಆತಿಥ್ಯದಲ್ಲಿ ನಡೆಯುತ್ತಿರುವ 2023ರ ಸಾಲಿನ ಐಸಿಸಿ ಏಕದಿನ ಕ್ರಿಕೆಟ್‌ ವಿಶ್ವಕಪ್‌ ಟೂರ್ನಿ.
  • ನ್ಯೂಜಿಲೆಂಡ್ ವಿರುದ್ಧದ ಪಂದ್ಯದಲ್ಲಿ 95 ರನ್ ಬಾರಿಸಿ ಟೀಮ್ ಇಂಡಿಯಾಗೆ‌ 4 ವಿಕೆಟ್ ಗೆಲುವು ತಂದುಕೊಟ್ಟ ವಿರಾಟ್ ಕೊಹ್ಲಿ.
  • ಆಧುನಿಕ ಕ್ರಿಕೆಟ್ ನ ದಿಗ್ಗಜ ವಿರಾಟ್ ಕೊಹ್ಲಿ ವಿಶ್ವ ಶ್ರೇಷ್ಠ ಚೇಸಿಂಗ್ ಮಾಸ್ಟರ್ ಎಂದು ಬಣ್ಣಿಸಿದ ಗೌತಮ್ ಗಂಭೀರ್.
ಹೈಲೈಟ್ಸ್‌ ಮಾತ್ರವೇ ಓದಲು ಆ್ಯಪ್‌ ಡೌನ್‌ಲೋಡ್‌ ಮಾಡಿ
Vijaya Karnataka Web Gautam Gambhir on Virat Kohli vs NZ
ವಿರಾಟ್‌ ಕೊಹ್ಲಿ ಆಟವನ್ನು ಶ್ಲಾಘಿಸಿದ ಗೌತಮ್ ಗಂಭೀರ್‌ (ಚಿತ್ರ: ಬಿಸಿಸಿಐ).
ಹೊಸದಿಲ್ಲಿ: 2023ರ ಏಕದಿನ ವಿಶ್ವಕಪ್ ಟೂರ್ನಿಯ ನ್ಯೂಜಿಲೆಂಡ್ ವಿರುದ್ಧದ ಪಂದ್ಯದಲ್ಲಿ 274 ರನ್ ಗಳ ಕಠಿಣ ಗುರಿ ಹಿಂಬಾಲಿಸಿದ ಟೀಮ್ ಇಂಡಿಯಾ ಪರ ತಮ್ಮ ಸ್ಫೋಟಕ ಬ್ಯಾಟಿಂಗ್ ನಿಂದ 95 ರನ್ ಬಾರಿಸಿ ತಂಡಕ್ಕೆ 4 ವಿಕೆಟ್ ಗೆಲುವು ತಂದುಕೊಟ್ಟ ವಿರಾಟ್ ಕೊಹ್ಲಿ, ವಿಶ್ವ ಶ್ರೇಷ್ಠ ಚೇಸಿಂಗ್ ಮಾಸ್ಟರ್ ಎಂದು 2011ರ ವಿಶ್ವಕಪ್ ವಿಜೇತ ಆಟಗಾರ ಗೌತಮ್ ಗಂಭೀರ್ ಮುಕ್ತ ಕಂಠದಿಂದ ಪ್ರಶಂಸಿಸಿದ್ದಾರೆ.
ಭಾನುವಾರ (ಅಕ್ಟೋಬರ್ 22) ಧರ್ಮಶಾಲಾದ ಎಚ್ ಪಿಸಿಎ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ನ್ಯೂಜಿಲೆಂಡ್ ವಿರುದ್ಧ ನಡೆದ ಪಂದ್ಯದಲ್ಲಿ ರೋಹಿತ್ ಶರ್ಮಾ (46 ರನ್) ಹಾಗೂ ಶುಭಮನ್ ಗಿಲ್ (26 ರನ್) ಆರಂಭಿಕ ವಿಕೆಟ್ ಗೆ 71 ರನ್ ಗಳ ಜೊತೆಯಾಟ ನೀಡಿದರೂ, 191 ರನ್ ಗಳಿಗೆ 6 ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿತ್ತು.

ಕೆಎಲ್ ರಾಹುಲ್ ಹಾಗೂ ಸೂರ್ಯಕುಮಾರ್ ಯಾದವ್ ವಿಕೆಟ್ ಅನ್ನು ಬಹುಬೇಗ ಕಳೆದುಕೊಂಡರೂ 7ನೇ ವಿಕೆಟ್ ಗೆ ಜೊತೆಗೂಡಿದ ವಿರಾಟ್ ಕೊಹ್ಲಿ (95 ರನ್) ಹಾಗೂ ರವೀಂದ್ರ ಜಡೇಜಾ (39* ರನ್) ನ್ಯೂಜಿಲೆಂಡ್ ಬೌಲರ್ ಗಳನ್ನು ಬಲವಾಗಿ ದಂಡಿಸಿ 78 ರನ್ ಗಳ ಜೊತೆಯಾಟ ನೀಡಿ ತಂಡಕ್ಕೆ 4 ವಿಕೆಟ್ ತಂದುಕೊಟ್ಟರು. ಇದಕ್ಕೂ ಮುನ್ನ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ್ದ ನ್ಯೂಜಿಲೆಂಡ್ ಡ್ಯಾರಿಲ್ ಮಿಚೆಲ್ (130 ರನ್) ಶತಕದ ನೆರವಿನಿಂದ 273 ರನ್ ಗಳಿಸಿತ್ತು.

ಪಂದ್ಯ ಶ್ರೇಷ್ಠ ಪ್ರಶಸ್ತಿ ಪಡೆದು ರವೀಂದ್ರ ಜಡೇಜಾ ಬಳಿ ಕ್ಷಮೆಯಾಚಿಸಿದ ವಿರಾಟ್ ಕೊಹ್ಲಿ!

49ನೇ ಒಡಿಐ ಶತಕ ತಪ್ಪಿಸಿಕೊಂಡ ವಿರಾಟ್ ಕೊಹ್ಲಿ

2023ರ ಏಕದಿನ ವಿಶ್ವಕಪ್ ಟೂರ್ನಿಯಲ್ಲಿ ಅತ್ಯುತ್ತಮ ಫಾರ್ಮ್ ನಲ್ಲಿರುವ ಕ್ಲಾಸ್ ಆಟಗಾರ ವಿರಾಟ್ ಕೊಹ್ಲಿ ಒಂದು ಶತಕ ಹಾಗೂ 3 ಅರ್ಧಶತಕಗಳ ನೆರವಿನಿಂದ 354 ರನ್ ಗಳಿಸಿ ಟಾಪ್ ಸ್ಕೋರರ್ ಆಗಿದ್ದಾರೆ. ನ್ಯೂಜಿಲೆಂಡ್ ವಿರುದ್ಧದ ಪಂದ್ಯದಲ್ಲೂ ಸಿಡಿಲಬ್ಬರದ ಬ್ಯಾಟಿಂಗ್ ನಡೆಸಿದ ವಿರಾಟ್ ಕೊಹ್ಲಿ, 104 ಎಸೆತಗಳಲ್ಲಿ 8 ಬೌಂಡರಿ ಹಾಗೂ 2 ಸಿಕ್ಸ್ ನೆರವಿನಿಂದ 95 ರನ್ ಗಳಿಸಿ ಮ್ಯಾಟ್ ಹೆನ್ರಿ ಬೌಲಿಂಗ್ ನಲ್ಲಿ ಸಿಕ್ಸರ್ ಮೂಲಕ ಶತಕ ಸಿಡಿಸುವ ರಭಸದಲ್ಲಿ ಗ್ಲೆನ್ ಫಿಲಿಪ್ಸ್ ಹಿಡಿದ ಅದ್ಭುತ ಕ್ಯಾಚ್ ಗೆ ವಿಕೆಟ್ ಒಪ್ಪಿಸಿ 49ನೇ ಶತಕದೊಂದಿಗೆ ಸಚಿನ್ ತೆಂಡೂಲ್ಕರ್ ಅವರ ದಾಖಲೆ ಸರಿಗಟ್ಟುವ ಅವಕಾಶ ಕೈಚೆಲ್ಲಿಕೊಂಡರೂ ತಂಡವನ್ನು ಗೆಲುವಿನ ಹಂತಕ್ಕೆ ತಂದು ನಿಲ್ಲಿಸಿದ್ದರು.

Cricket World Cup: 48ನೇ ಒಡಿಐ ಶತಕ ಸಿಡಿಸಿ ಹಲವು ದಾಖಲೆಗಳನ್ನು ಬರೆದ ವಿರಾಟ್ ಕೊಹ್ಲಿ!

ವಿರಾಟ್ ಕೊಹ್ಲಿ ಚೇಸ್ ಮಾಸ್ಟರ್: ಗೌತಮ್ ಗಂಭೀರ್

ನ್ಯೂಜಿಲೆಂಡ್ ವಿರುದ್ಧ ವಿರಾಟ್ ಕೊಹ್ಲಿ ಸಿಡಿಸಿದ 95 ರನ್ ಗಳ ಪ್ರದರ್ಶನದ ಬಗ್ಗೆ ಟೀಮ್ ಇಂಡಿಯಾದ ಮಾಜಿ ನಾಯಕ ಗೌತಮ್ ಗಂಭೀರ್ ಸ್ಟಾರ್ ಸ್ಪೋರ್ಟ್ಸ್ ಜೊತೆ ಮಾತನಾಡಿದ್ದಾರೆ.

"ಆಧುನಿಕ ಕ್ರಿಕೆಟ್ ನಲ್ಲಿ ವಿರಾಟ್ ಕೊಹ್ಲಿಗಿಂತ ಅತ್ಯುತ್ತಮ ಫಿನಿಷರ್ ಆಟಗಾರ ಮತ್ತೊಬ್ಬರು ಸಿಗುವುದಿಲ್ಲ. 5 ರಿಂದ 7ನೇ ಕ್ರಮಾಂಕದಲ್ಲಿ ಬ್ಯಾಟ್ ಮಾಡುವ ಬ್ಯಾಟರ್ ಗಳಷ್ಟೇ‌ ಅಲ್ಲ. ಎಲ್ಲ ವಿಕೆಟ್ ಗಳ ಆಧಾರದಲ್ಲೂ ವಿರಾಟ್ ಕೊಹ್ಲಿ ಚೇಸಿಂಗ್ ಮಾಸ್ಟರ್ ಆಗಿದ್ದಾರೆ," ಎಂದು ಗೌತಮ್ ಗಂಭೀರ್ ಪ್ರಶಂಸಿಸಿದ್ದಾರೆ.

ಕಿವೀಸ್‌ ಎದುರು 4 ವಿಕೆಟ್‌ಗಳ ಜಯ ತಂದ ಕಿಂಗ್‌ ವಿರಾಟ್‌ ಕೊಹ್ಲಿ!

ರೋಹಿತ್ ಶರ್ಮಾಗೆ ಗಂಭೀರ್ ಶ್ಲಾಘನೆ

ನ್ಯೂಜಿಲೆಂಡ್ ವಿರುದ್ಧದ ಪಂದ್ಯದಲ್ಲಿ 40 ಎಸೆತಗಳಲ್ಲಿ 4 ಬೌಂಡರಿ 4 ಸಿಕ್ಸರ್ ನೆರವಿನಿಂದ 46 ರನ್ ಸಿಡಿಸಿದ ಟೀಮ್ ಇಂಡಿಯಾದ ನಾಯಕ ರೋಹಿತ್ ಶರ್ಮಾ ಅವರ ಆಟವನ್ನು ಕೂಡ ಗೌತಮ್ ಗಂಭೀರ್ ಪ್ರಶಂಸಿಸಿದ್ದಾರೆ. 2023ರ ವಿಶ್ವಕಪ್ ಟೂರ್ನಿಯಲ್ಲಿ ಅತ್ಯುತ್ತಮ ಪ್ರದರ್ಶನ ತೋರುತ್ತಿರುವ ಹಿಟ್ ಮ್ಯಾನ್ 133 ಸ್ಟ್ರೆಕ್ ರೇಟ್ ನಲ್ಲಿ 311 ರನ್ ಗಳನ್ನು ಗಳಿಸಿ, ವಿರಾಟ್ ಕೊಹ್ಲಿ ನಂತರ ಅತಿ ಹೆಚ್ಚು ರನ್ ಗಳಿಸಿದ ಬ್ಯಾಟರ್ ಆಗಿದ್ದಾರೆ.

"2023ರ ವಿಶ್ವಕಪ್ ಟೂರ್ನಿಯಲ್ಲಿ ರೋಹಿತ್ ಶರ್ಮಾ ಕೇವಲ ರನ್ ಗಳಿಸುವ ಮೂಲಕ ಮಾತ್ರ ಗಮನ ಸೆಳೆದಿಲ್ಲ. ಬದಲಿಗೆ ತಮ್ಮ ಸಿಡಿಲಬ್ಬರದ ಬ್ಯಾಟಿಂಗ್ ಪ್ರದರ್ಶನದಿಂದ ಎದುರಾಳಿ ತಂಡಕ್ಕೆ ಎಚ್ಚರಿಕೆಯ ಸಂದೇಶ ರವಾನಿಸಿದ್ದಾರೆ," ಎಂದು ಖ್ಯಾತ ಕ್ರಿಕೆಟ್ ವಿಶ್ಲೇಷಕ ಹೇಳಿದ್ದಾರೆ.

ವಿರಾಟ್ ಕೊಹ್ಲಿ ಸಿಂಗಲ್ಸ್ ತೆಗೆದುಕೊಳ್ಳದೆ ಇರಲು ಇದ್ದ ಕಾರಣ ತಿಳಿಸಿದ ಕೆಎಲ್ ರಾಹುಲ್!

ಸೆಮಿಫೈನಲ್ ಹಾದಿಯತ್ತ ಟೀಮ್ ಇಂಡಿಯಾ

ಐಸಿಸಿ ಆಯೋಜನೆಯ ಟೂರ್ನಿಗಳಲ್ಲಿ 20 ವರ್ಷಗಳ ನಂತರ ನ್ಯೂಜಿಲೆಂಡ್ ವಿರುದ್ಧ ಸೋಲಿನ ಸರಪಳಿ ಕಳಚಿರುವ ಟೀಮ್ ಇಂಡಿಯಾ, 2023ರ ವಿಶ್ವಕಪ್ ಟೂರ್ನಿಯಲ್ಲಿ ಆಡಿರುವ 5 ಪಂದ್ಯಗಳಲ್ಲೂ ಗೆಲುವು ಸಾಧಿಸಿ 10 ಅಂಕ (+1.353)ಗಳೊಂದಿಗೆ ಪಾಯಿಂಟ್ಸ್ ಪಟ್ಟಿಯಲ್ಲಿ ಅಗ್ರಸ್ಥಾನ ಅಲಂಕರಿಸಿದ್ದು, ಇನ್ನೆರಡು ಪಂದ್ಯಗಳಲ್ಲಿ ಗೆಲುವು ಸಾಧಿಸುವ ಮೂಲಕ ಸೆಮಿಫೈನಲ್ ಸ್ಥಾನವನ್ನು ಭದ್ರಪಡಿಸಿಕೊಳ್ಳುವತ್ತ ರೋಹಿತ್ ಶರ್ಮಾ ಪಡೆ ಹೊರಟಿದೆ.
ಲೇಖಕರ ಬಗ್ಗೆ
ವಿಜೇತ್ ಕುಮಾರ್‌ ಡಿ.ಎನ್
ವಿಜಯ ಕರ್ನಾಟಕ ವೆಬ್‌ನಲ್ಲಿ ಕ್ರೀಡಾ ವಿಭಾಗದ ಪತ್ರಕರ್ತರಾಗಿ 2019ರಿಂದ ಸೇವೆಯಲ್ಲಿದ್ದಾರೆ. ಇದಕ್ಕೂ ಮುನ್ನ ವಿಜಯ ಕರ್ನಾಟಕ ಪತ್ರಿಕೆಯಲ್ಲಿ ಕ್ರೀಡಾ ವರದಿಗಾರರಾಗಿ 7 ವರ್ಷಗಳ ಕಾಲ ಸೇವೆ ಸಲ್ಲಿಸಿದ್ದಾರೆ. ಸಂಜೆ ವಾಣಿ ಮತ್ತು ಒನ್‌ ಇಂಡಿಯಾ ಸಂಸ್ಥೆಗಳಲ್ಲಿ ಟೆಕ್‌, ಆಟೊಮೊಬೈಲ್ಸ್‌, ರಾಜಕೀಯ, ಸಿನಿಮಾ ಮತ್ತು ವಾಣಿಜ್ಯ ಕ್ಷೇತ್ರಗಳ ಬಗ್ಗೆ ವರದಿ ಮಾಡಿದ ಅನುಭವ ಹೊಂದಿದ್ದು, ಟೆನಿಸ್‌, ಬ್ಯಾಡ್ಮಿಂಟನ್‌ ಮತ್ತು ಕ್ರಿಕೆಟ್‌ ಇವರ ಅಚ್ಚುಮೆಚ್ಚಿನ ಕ್ರೀಡೆಗಳು. ಪವರ್‌ಲಿಫ್ಟಿಂಗ್ ಇವರ ಹೊಸ ಪ್ರವೃತ್ತಿ, ವ್ಯಾಯಾಮ, ಸಾಹಿತ್ಯ ಓದು, ಪ್ರವಾಸ, ಬೈಕಿಂಗ್‌ ಹಾಗೂ ಚಾರಣ ಇವರ ನೆಚ್ಚಿನ ಹವ್ಯಾಸಗಳು.... ಇನ್ನಷ್ಟು ಓದಿ

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ
ಟ್ರೆಂಡಿಂಗ್‌