Please enable javascript.RCB Vs DC,ಡೆಲ್ಲಿ ವಿರುದ್ಧದ ಇಂದಿನ ಪಂದ್ಯಕ್ಕೆ ಆರ್‌ಸಿಬಿ ಸಂಭಾವ್ಯ ಪ್ಲೇಯಿಂಗ್‌ XI ಇಂತಿದೆ.. - ipl 2021: rcb vs dc match preview, pitch report, head to head record, rcb playing xi - Vijay Karnataka

ಡೆಲ್ಲಿ ವಿರುದ್ಧದ ಇಂದಿನ ಪಂದ್ಯಕ್ಕೆ ಆರ್‌ಸಿಬಿ ಸಂಭಾವ್ಯ ಪ್ಲೇಯಿಂಗ್‌ XI ಇಂತಿದೆ..

Vijaya Karnataka Web 27 Apr 2021, 11:22 am
Embed

ಅಹ್ಮದಾಬಾದ್‌: ಚೆನ್ನೈ ಸೂಪರ್‌ ಕಿಂಗ್ಸ್ ವಿರುದ್ಧ ಪ್ರಸಕ್ತ ಆವೃತ್ತಿಯ ಇಂಡಿಯನ್‌ ಪ್ರೀಮಿಯರ್ ಲೀಗ್‌(ಐಪಿಎಲ್‌) ಟೂರ್ನಿಯಲ್ಲಿ ತನ್ನ ಮೊದಲನೇ ಸೋಲು ಅನುಭವಿಸಿದ್ದ ರಾಯಲ್‌ ಚಾಲೆಂಜರ್ಸ್ ಬೆಂಗಳೂರು ತಂಡ ಇಂದು ಇಲ್ಲಿನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಸೆಣಸಲು ಸಜ್ಜಾಗುತ್ತಿದೆ.

ಇದುವರೆಗೂ ಆಡಿರುವ ಐದು ಪಂದ್ಯಗಳಲ್ಲಿ ವಿರಾಟ್‌ ಕೊಹ್ಲಿ ನಾಯಕತ್ವದ ಆರ್‌ಸಿಬಿ ನಾಲ್ಕು ಪಂದ್ಯಗಳಲ್ಲಿ ಗೆದ್ದು ಒಂದೇ ಒಂದು ಹಣಾಹಣಿಯಲ್ಲಿ ಸೋಲು ಅನುಭವಿಸಿದೆ. ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ಕಳೆದ ಪಂದ್ಯದಲ್ಲಿ ಸಿಎಸ್‌ಕೆ ವಿರುದ್ಧ ಆರ್‌ಸಿಬಿ 69 ರನ್‌ಗಳಿಂದ ಸೋತಿತ್ತು. ಆದರೆ, ಈ ಪಂದ್ಯದಲ್ಲಿ ಮೂರು ಓವರ್‌ಗಳನ್ನು ಅಚ್ಚುಕಟ್ಟಾಗಿ ಬೌಲಿಂಗ್‌ ಮಾಡಿದ್ದ ಹರ್ಷಲ್‌ ಪಟೇಲ್‌ ತನ್ನ ಕೊನೆಯ ಓವರ್‌ನಲ್ಲಿ ರವೀಂದ್ರ ಜಡೇಜಾಗೆ ನೀಡಿದ 37ರನ್‌ ಪಂದ್ಯದ ಮೇಲೆ ಗಂಭೀರ ಪರಿಣಾಮ ಬೀರಿತು ಎನ್ನಬಹುದಾಗಿದೆ.

ಕಳೆದ ಪಂದ್ಯದಲ್ಲಿ ಮಾಡಿದ್ದ ತಪ್ಪುಗಳನ್ನು ತಿದ್ದಿಕೊಂಡು ವಿರಾಟ್‌ ಕೊಹ್ಲಿ ನಾಯಕತ್ವದ ಆರ್‌ಸಿಬಿ ಇಂದು ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಗೆಲುವಿನ ಲಯಕ್ಕೆ ಮರಳಲು ಎದುರು ನೋಡುತ್ತಿದೆ. ಇದರ ನಡುವೆ, ಸ್ಪಿನ್ನರ್‌ ಆಡಂ ಝಾಂಪ ಹಾಗೂ ವೇಗಿ ಕೇನ್ ರಿಚರ್ಡ್ಸನ್‌ ಅವರು ವೈಯಕ್ತಿಕ ಕಾರಣಗಳಿಂದ ಐಪಿಎಲ್‌ ಟೂರ್ನಿಯಿಂದ ಹೊರ ನಡೆದಿದ್ದಾರೆ. ಇದು ತಂಡದ ಬೌಲಿಂಗ್‌ ಆಯ್ಕೆಗಳ ಮೇಲೆ ಮುಂದಿನ ಪಂದ್ಯಗಳಲ್ಲಿ ವ್ಯತ್ಯಾಸಗಳನ್ನುಂಟು ಮಾಡಬಹುದು.

ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಇಂದಿನ ಪಂದ್ಯಕ್ಕೆ ಆರ್‌ಸಿಬಿ ಸಂಭಾವ್ಯ ಪ್ಲೇಯಿಂಗ್‌ XI ಹೀಗಿದೆ..


ಮತ್ತೊಂದೆಡೆ ರಿಷಭ್‌ ಪಂತ್‌ ನಾಯಕತ್ವದ ಡೆಲ್ಲಿ ಕ್ಯಾಪಿಟಲ್ಸ್ ತಂಡ ತನ್ನ ಕಳೆದ ಪಂದ್ಯದಲ್ಲಿ ಸೂಪರ್‌ ಓವರ್‌ನಲ್ಲಿ ಸನ್‌ರೈಸರ್ಸ್ ಹೈದರಾಬಾದ್‌ ವಿರುದ್ಧ ರೋಚಕ ಗೆಲುವು ಪಡೆದಿತ್ತು.ಆ ಮೂಲಕ ಪಾಯಿಂಟ್ಸ್‌ ಟೇಬಲ್‌ನಲ್ಲಿ ರನ್‌ರೇಟ್‌ ಆಧಾರದ ಮೇಲೆ ಆರ್‌ಸಿಬಿಯನ್ನು ಹಿಂದಿಕ್ಕಿ ಎರಡನೇ ಸ್ಥಾನಕ್ಕೇರಿತ್ತು.

ಡೆಲ್ಲಿ ಕ್ಯಾಪಿಟಲ್ಸ್ ಆಡಿರುವ ಐದು ಪಂದ್ಯಗಳಲ್ಲಿ ನಾಲ್ಕರಲ್ಲಿ ಗೆಲುವಿನ ನಗೆ ಬೀರಿದೆ. ಇದೀಗ ಎರಡೂ ತಂಡಗಳು ಪಂದ್ಯವನ್ನು ಗೆದ್ದು ಪಾಯಿಂಟ್ಸ್‌ ಟೇಬಲ್‌ನಲ್ಲಿ ಅಗ್ರ ಸ್ಥಾನವನ್ನು ಅಲಂಕರಿಸಲು ಎದುರು ನೋಡುತ್ತಿವೆ.

2021ರ ಐಪಿಎಲ್‌ ಅಂಕಪಟ್ಟಿ

ಪಿಚ್‌ ರಿಪೋರ್ಟ್: ನೂತನವಾಗಿ ನಿರ್ಮಿಸಿರುವ ನರೇಂದ್ರ ಮೋದಿ ಕ್ರಿಕೆಟ್‌ ಕ್ರೀಡಾಂಗಣವು ಬ್ಯಾಟಿಂಗ್‌ ಸ್ನೇಹಿಯಾಗಿದ್ದು, ಐಪಿಎಲ್‌ ಆರಂಭಕ್ಕೂ ಮುನ್ನ ಮುಕ್ತಾಯವಾಗಿದ್ದ ಭಾರತ ಹಾಗೂ ಇಂಗ್ಲೆಂಡ್‌ ತಂಡಗಳ ನಡುವಿನ ಐದು ಪಂದ್ಯಗಳ ಟಿ20 ಸರಣಿ ಇದಕ್ಕೆ ಸಾಕ್ಷಿ. ಮೊದಲು ಬ್ಯಾಟಿಂಗ್‌ ಮಾಡುವ ತಂಡ 160ಕ್ಕೂ ಹೆಚ್ಚಿನ ರನ್‌ ಗಳಿಸಿದರೆ, ದ್ವಿತೀಯ ಇನಿಂಗ್ಸ್‌ನಲ್ಲಿ ಇದನ್ನು ಚೇಸ್‌ ಮಾಡುವುದು ಕಷ್ಟ.