ಆ್ಯಪ್ನಗರ

'ಭಾರತ ಬಿಟ್ಟು ಬೇರೆ ದೇಶದ ಪರ ಕ್ರಿಕೆಟ್‌ ಆಡಿ': ಅವಕಾಶ ವಂಚಿತ ಸಂಜು ಸ್ಯಾಮ್ಸನ್‌ಗೆ ಫ್ಯಾನ್ಸ್‌ ಆಗ್ರಹ!

IND vs WI, Sanju samson: ವೆಸ್ಟ್‌ ಇಂಡೀಸ್‌ ವಿರುದ್ಧ ಮೂರನೇ ಟಿ20 ಪಂದ್ಯದಲ್ಲಿಯೂ ಸಂಜು ಸ್ಯಾಮ್ಸನ್‌ ಅವರನ್ನು ಬೆಂಚ್‌ ಕಾಯಿಸಿದ ಹೆಡ್‌ ಕೋಚ್‌ ರಾಹುಲ್‌ ದ್ರಾವಿಡ್‌ ಹಾಗೂ ನಾಯಕ ರೋಹಿತ್‌ ಶರ್ಮಾ ಒಳಗೊಂಡ ಟೀಮ್‌ ಮ್ಯಾನೇಜ್‌ಮೆಂಟ್‌ ವಿರುದ್ಧ ಅಭಿಮಾನಿಗಳು ಕಿಡಿ ಕಾರಿದ್ದಾರೆ. ಸತತ ಬ್ಯಾಟಿಂಗ್‌ ವೈಫಲ್ಯ ಅನುಭವಿಸಿದ ಹೊರತಾಗಿಯೂ ಶ್ರೇಯಸ್‌ ಅಯ್ಯರ್‌ ಅವರನ್ನು ಬೆಂಬಲಿಸಲಾಗುತ್ತಿದೆ. ಆದರೆ, ಉತ್ತಮ ಫಾರ್ಮ್‌ನಲ್ಲಿದ್ದರೂ ಸಂಜುಗೆ ಆಡುವ ಬಳಗದಲ್ಲಿ ಚಾನ್ಸ್‌ ನೀಡುತ್ತಿಲ್ಲವೆಂಬುದು ಅಭಿಮಾನಿಗಳ ವಾದ.

Authored byರಮೇಶ ಕೋಟೆ | Vijaya Karnataka Web 3 Aug 2022, 8:20 pm

ಹೈಲೈಟ್ಸ್‌:

  • ಭಾರತ ಹಾಗೂ ವೆಸ್ಟ್‌ ಇಂಡೀಸ್‌ ನಡುವಣ ಐದು ಪಂದ್ಯಗಳ ಟಿ20 ಕ್ರಿಕೆಟ್‌ ಸರಣಿ.
  • ಮೂರನೇ ಟಿ20 ಪಂದ್ಯದಲ್ಲಿ 7 ವಿಕೆಟ್‌ಗಳ ಗೆಲುವು ಪಡದಿದ್ದ ಭಾರತ ತಂಡ.
  • 3ನೇ ಪಂದ್ಯದಲ್ಲಿಯೂ ಸಂಜು ಸ್ಯಾಮ್ಸನ್‌ರನ್ನು ಬೆಂಚ್‌ ಕಾಯಿಸಿದ್ದ ಫ್ಯಾನ್ಸ್‌ ಕಿಡಿ.
ಹೈಲೈಟ್ಸ್‌ ಮಾತ್ರವೇ ಓದಲು ಆ್ಯಪ್‌ ಡೌನ್‌ಲೋಡ್‌ ಮಾಡಿ
Vijaya Karnataka Web Sanju samson
ಸಂಜು ಸ್ಯಾಮ್ಸನ್ (ಚಿತ್ರ: ಟ್ವಿಟರ್‌)
ಸೇಂಟ್‌ ಕಿಟ್ಸ್‌ (ವೆಸ್ಟ್‌ ಇಂಡೀಸ್‌): ವೆಸ್ಟ್ ಇಂಡೀಸ್‌ ವಿರುದ್ದ ಮೂರನೇ ಟಿ20 ಪಂದ್ಯದಲ್ಲಿಯೂ ಸಂಜು ಸ್ಯಾಮ್ಸನ್‌ ಅವರನ್ನು ಬೆಂಚ್‌ ಕಾಯಿಸಿದ ಟೀಮ್‌ ಮ್ಯಾನೇಜ್‌ಮೆಂಟ್‌ ವಿರುದ್ಧ ಅಭಿಮಾನಿಗಳು ಟ್ವಿಟರ್‌ ಸೇರಿದಂತೆ ಸೋಶಿಯಲ್‌ ಮೀಡಿಯಾದಲ್ಲಿ ಭಾರಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಎರಡನೇ ಟಿ20 ಪಂದ್ಯದಲ್ಲಿ ಭಾರತ ತಂಡ ಐದು ವಿಕೆಟ್‌ಗಳಿಂದ ಸೋಲು ಅನುಭವಿಸಿತ್ತು. ಆ ಮೂಲಕ ಮೂರನೇ ಪಂದ್ಯದ ಭಾರತ ಪ್ಲೇಯಿಂಗ್‌ ಇಲೆವೆನ್‌ನಲ್ಲಿ ಔಟ್‌ ಆಫ್‌ ಫಾರ್ಮ್‌ ಶ್ರೇಯಸ್‌ ಅಯ್ಯರ್‌ ಅವರ ಸ್ಥಾನದಲ್ಲಿ ಸಂಜು ಸ್ಯಾಮ್ಸನ್‌ ಅವರಿಗೆ ಅವಕಾಶ ನೀಡಬಹುದೆಂದು ಊಹಿಸಲಾಗಿತ್ತು. ಆದರೆ, ರವೀಂದ್ರ ಜಡೇಜಾ ಅವರಿಗೆ ವಿಶ್ರಾಂತಿ ನೀಡಿ ದೀಪಕ್‌ ಹೂಡ ಅವರನ್ನು ಕರೆಸಿಕೊಳ್ಳಲಾಯಿತೇ ಹೊರತು ಔಟ್‌ ಆಫ್‌ ಫಾರ್ಮ್‌ ಶ್ರೇಯಸ್‌ ಅಯ್ಯರ್‌ ಅವರನ್ನು ಮುಂದುವರಿಸಲಾಯಿತು.

ಈ ಕಾರಣದಿಂದಾಗಿ ಸಿಡಿದೆದ್ದ ಅಭಿಮಾನಿಗಳು ಸಂಜು ಸ್ಯಾಮ್ಸನ್‌ಗೆ ತಂಬಾ ಅನ್ಯಾಯ ಮಾಡಲಾಗುತ್ತಿದೆ ಎಂದು ದೂರಿದರು ಹಾಗೂ ಭಾರತವನ್ನು ಬಿಟ್ಟು ಬೇರೆ ಯಾವುದಾದರೂ ದೇಶದ ಪರ ಕ್ರಿಕೆಟ್‌ ಆಡಿ ಎಂದು ಅಭಿಮಾನಿಗಳು ಕೇರಳ ಮೂಲದ ಬ್ಯಾಟ್ಸ್‌ಮನ್‌ಗೆ ಸಲಹೆ ನೀಡಿದರು. ಇನ್ನೂ ಕೆಲವರು, ಸಂಜು ಸ್ಯಾಮ್ಸನ್‌ ಕ್ರಿಕೆಟ್‌ ವೃತ್ತಿ ಜೀವನವನ್ನು ಟೀಮ್‌ ಮ್ಯಾನೇಜ್‌ಮೆಂಟ್‌ ಹಾಳು ಮಾಡುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
IND vs WI: ಸೂರ್ಯನ ಆಸರೆಯಲ್ಲಿ ಗೆದ್ದು ಬೀಗಿದ ಟೀಮ್‌ ಇಂಡಿಯಾ!ಅಂದಹಾಗೆ ಕೆ.ಎಲ್‌ ರಾಹುಲ್‌ ಸಂಪೂರ್ಣ ಫಿಟ್‌ ಇಲ್ಲದ ಕಾರಣ ವೆಸ್ಟ್‌ ಇಂಡೀಸ್‌ ವಿರುದ್ಧ ಟಿ20 ಸರಣಿಯಿಂದ ಹೊರಗುಳಿದಿದ್ದರು. ಈ ಹಿನ್ನೆಲೆಯಲ್ಲಿ ಕೆ.ಎಲ್‌ ರಾಹುಲ್‌ ಸ್ಥಾನಕ್ಕೆ ಸಂಜು ಸ್ಯಾಮ್ಸನ್‌ ಅವರನ್ನು ಆಯ್ಕೆ ಮಾಡಲಾಗಿತ್ತು. ಆದರೆ, ಸತತ ಮೂರೂ ಪಂದ್ಯಗಳಲ್ಲಿ ಸಂಜು ಬೆಂಚ್‌ ಕಾಯಬೇಕಾಯಿತು.



ವೆಸ್ಟ್‌ ಇಂಡೀಸ್‌ ವಿರುದ್ಧ ಓಡಿಐ ಸರಣಿಯಲ್ಲಿ ಸಂಜು ಸ್ಯಾಮ್ಸನ್‌ ಯೋಗ್ಯ ಬ್ಯಾಟಿಂಗ್‌ ಪ್ರದರ್ಶನ ತೋರಿದ್ದರು ಹಾಗೂ ಅರ್ಧ ಶತಕ ಗಳಿಸಿದ್ದರು. ಇದಕ್ಕೂ ಮುನ್ನ ಐರ್ಲೆಂಡ್‌ ವಿರುದ್ಧ ಮ್ಯಾಚ್‌ ವಿನ್ನಿಂಗ್‌ 77 ರನ್‌ ಸಿಡಿಸಿದ್ದರು. ಇದರ ಹೊರತಾಗಿಯೂ ಕೇರಳ ಮೂಲದ ಬ್ಯಾಟ್ಸ್‌ಮನ್ ಅನ್ನು ಟಿ20 ಸರಣಿಯ ಪ್ಲೇಯಿಂಗ್‌ ಇಲೆವೆನ್‌ಗೆ ಟೀಮ್ ಮ್ಯಾನೇಜ್‌ಮೆಂಟ್‌ ಪರಿಗಣಿಸಲಿಲ್ಲ.


ಭಾರತಕ್ಕೆ 7 ವಿಕೆಟ್‌ ಜಯ

ಮೂರನೇ ಟಿ20 ಪಂದ್ಯದಲ್ಲಿ ಟಾಸ್‌ ಸೋತು ಮೊದಲು ಬ್ಯಾಟ್‌ ಮಾಡುವಂತಾಗಿದ್ದ ವೆಸ್ಟ್‌ ಇಂಡೀಸ್ ತಂಡ ತನ್ನ ಪಾಲಿನ 20 ಓವರ್‌ಗಳಿಗೆ 5 ವಿಕೆಟ್‌ ನಷ್ಟಕ್ಕೆ 164 ರನ್‌ ಗಳಿಸಿತು. ಆ ಮೂಲಕ ಭಾರತ ತಂಡಕ್ಕೆ 165 ರನ್‌ ಸ್ಪರ್ಧಾತ್ಮಕ ಗುರಿ ನೀಡಿತ್ತು. ವಿಂಡೀಸ್‌ ಪರ ಕೈಲ್‌ ಮೇಯರ್ಸ್‌ 50 ಎಸೆತಗಳಲ್ಲಿ 73 ರನ್‌ ಸಿಡಿಸಿದ್ದರು.


ಬಳಿಕ 165 ರನ್‌ ಗುರಿ ಹಿಂಬಾಲಿಸಿದ ಭಾರತ ತಂಡ ಸೂರ್ಯಕುಮಾರ್‌ ಯಾದವ್(76) ಅವರ ಅರ್ಧಶತಕದ ಬಲದಿಂದ 19 ಓವರ್‌ಗಳಿಗೆ 3 ವಿಕೆಟ್‌ ನಷ್ಟಕ್ಕೆ 165 ರನ್‌ ಗಳಿಸಿ ಗೆಲುವಿನ ನಗೆ ಬೀರಿತು. ಸೂರ್ಯಕುಮಾರ್‌ ಜೊತೆಗೆ ರಿಷಭ್‌ ಪಂತ್‌ ಅಜೇಯ 33 ರನ್‌ ಗಳಿಸಿದ್ದರು. ಈ ಪಂದ್ಯದಲ್ಲಿ ಶ್ರೇಯಸ್‌ 24 ರನ್‌ಗಳಿಗೆ ಸೀಮಿತರಾದರು. ಈ ಪಂದ್ಯದ ಗೆಲುವಿನ ಮೂಲಕ ಭಾರತ ತಂಡ ಟಿ20 ಸರಣಿಯಲ್ಲಿ 2-1 ಮುನ್ನಡೆ ಪಡೆದಿದೆ.
ಲೇಖಕರ ಬಗ್ಗೆ
ರಮೇಶ ಕೋಟೆ
ವಿಜಯ ಕರ್ನಾಟಕ ಡಿಜಿಟಲ್‌ನಲ್ಲಿ 2020ರ ಮಾರ್ಚ್‌ನಿಂದ ಕ್ರೀಡಾ ಪತ್ರಕರ್ತರಾಗಿ ಇವರು ಕೆಲಸ ಮಾಡುತ್ತಿದ್ದಾರೆ. ಇದಕ್ಕೂ ಮುನ್ನ ವಿಶ್ವವಾಣಿ ದಿನ ಪತ್ರಿಕೆ, ಯುನೈಟೆಡ್‌ ನ್ಯೂಸ್‌ ಆಫ್‌ ಇಂಡಿಯಾ ಸುದ್ದಿ ಸಂಸ್ಥೆ, ಸಂಜೆ ವಾಣಿ ಹಾಗೂ ಈ ಸಂಜೆ ಪತ್ರಿಕೆಗಳಲ್ಲಿ ಕೆಲಸ ಮಾಡಿರುವ ಅನುಭವವನ್ನು ಇವರು ಹೊಂದಿದ್ದಾರೆ. ಕ್ರೀಡಾ ಸುದ್ದಿ, ಕ್ರೀಡಾ ಲೇಖನ ಹಾಗೂ ಅಂಕಣಗಳನ್ನು ಬರೆಯುವುದು ಇವರ ಆಸಕ್ತದಾಯಕ ವಿಷಯಗಳು. ಕನ್ನಡ ಸಾಹಿತ್ಯ ಓದುವುದು, ಕ್ರಿಕೆಟ್‌ ಆಡುವುದು, ಟ್ರೆಕ್ಕಿಂಗ್‌, ಬೈಕ್‌ ರೈಡಿಂಗ್‌, ಫೋಟೋಗ್ರಫಿ ಇವು ಇವರ ನೆಚ್ಚಿನ ಹವ್ಯಾಸಗಳು.... ಇನ್ನಷ್ಟು ಓದಿ

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ
ಟ್ರೆಂಡಿಂಗ್‌