ಆ್ಯಪ್ನಗರ

ಕಿಂಗ್ಸ್‌ ಇಲೆವೆನ್‌ ಪಂಜಾಬ್‌ ತಂಡಕ್ಕೆ ಸೆಹ್ವಾಗ್‌ ಕೋಚ್‌?

ಇಂಡಿಯನ್‌ ಪ್ರೀಮಿಯರ್‌ ಲೀಗ್‌ನ ಹಿಂದಿನ ಎರಡು ಆವೃತ್ತಿಗಳಲ್ಲಿ ನೀರಸ ಪ್ರದರ್ಶನ ನೀಡಿರುವ ಕಿಂಗ್ಸ್‌ ಇಲೆವೆನ್‌ ಪಂಜಾಬ್‌ ತಂಡದ ಕೋಚ್‌ ಸ್ಥಾನಕ್ಕೆ ಭಾರತ ತಂಡದ ಮಾಜಿ ಆಟಗಾರ ವೀರೇಂದ್ರ ಸೆಹ್ವಾಗ್‌ ನೇಮಕ ಗೊಳ್ಳುವ ಸಾಧ್ಯತೆ ಇದೆ.

ವಿಕ ಸುದ್ದಿಲೋಕ 26 Dec 2016, 2:40 pm

ಮುಂಬಯಿ: ಇಂಡಿಯನ್‌ ಪ್ರೀಮಿಯರ್‌ ಲೀಗ್‌ನ ಹಿಂದಿನ ಎರಡು ಆವೃತ್ತಿಗಳಲ್ಲಿ ನೀರಸ ಪ್ರದರ್ಶನ ನೀಡಿರುವ ಕಿಂಗ್ಸ್‌ ಇಲೆವೆನ್‌ ಪಂಜಾಬ್‌ ತಂಡದ ಕೋಚ್‌ ಸ್ಥಾನಕ್ಕೆ ಭಾರತ ತಂಡದ ಮಾಜಿ ಆಟಗಾರ ವೀರೇಂದ್ರ ಸೆಹ್ವಾಗ್‌ ನೇಮಕ ಗೊಳ್ಳುವ ಸಾಧ್ಯತೆ ಇದೆ.

ಕೋಚ್‌ ಸಂಜಯ್‌ ಬಂಗಾರ್‌ ಸ್ಥಾನವನ್ನು ಸೆಹ್ವಾಗ್‌ ವಹಿಸಿಕೊಳ್ಳಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ಕಳೆದ ಎರಡು ಆವೃತ್ತಿಗಳಲ್ಲಿ ಬಂಗಾರ್‌ ಸಾರಥ್ಯದ ಕಿಂಗ್ಸ್‌ ಇಲೆವೆನ್‌ ಪಂಜಾಬ್‌ ತಂಡ ನಿರೀಕ್ಷಿತ ಪ್ರದರ್ಶನ ನೀಡುವಲ್ಲಿ ಎಡವಿದೆ. ಜತೆಗೆ ಅಂಕಪಟ್ಟಿಯಲ್ಲಿ ಕೊನೆಯ ಸ್ಥಾನದಲ್ಲೇ ಮುಂದುವರಿದಿದೆ.

2014ರಿಂದ ತಂಡದ ಕೋಚ್‌ ಆಗಿರುವ ಬಂಗಾರ್‌, ಇದೇ ಆವೃತ್ತಿಯಲ್ಲಿ ತಂಡವನ್ನು ಫೈನಲ್‌ಗೆ ಕೊಂಡೊಯ್ಯುವಲ್ಲಿ ಯಶಸ್ವಿಯಾಗಿದ್ದರು. ಹೀಗಾಗಿ ಭಾರತ ತಂಡದ ಸಹಾಯಕ ಕೋಚ್‌ ಆಗಿ ನೇಮಕಗೊಂಡಿದ್ದರು. ಆದರೆ ಕೆಳದೆರಡು ಆವೃತ್ತಿಗಳಲ್ಲಿ ತಂಡ ನಿರೀಕ್ಷಿತ ಪ್ರದರ್ಶನ ನೀಡುವಲ್ಲಿ ವಿಫಲಗೊಂಡಿದೆ. ಈ ನಡುವೆ ಕಳೆದ ತಿಂಗಳು ಕೋಚ್‌ ಸ್ಥಾನ ತ್ಯಜಿಸಲು ಬಂಗಾರ್‌ ಒಲವು ವ್ಯಕ್ತಪಡಿಸಿದ್ದರು. ಆದರೆ ಇದು ಇನ್ನು ಅಂತಿಮಗೊಂಡಿಲ್ಲ. ಈ ಮಧ್ಯೆ ಸೆಹ್ವಾಗ್‌ ತಂಡದ ನೂತನ ಕೋಚ್‌ ಆಗಿ ಒಪ್ಪಂದ ಮಾಡಿಕೊಳ್ಳಲಿದ್ದಾರೆ ಎಂದು ಹೇಳಲಾಗಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ
ಟ್ರೆಂಡಿಂಗ್‌