Please enable javascript.ಹೈಕೋರ್ಟ್‌ ಮೆಟ್ಟಿಲೇರಿದ ಕವಿತಾಳ ಪ. ಪಂ ಗೆ ಅಪ್ರಾಪ್ತೆ ಆಯ್ಕೆ ವಿವಾದ - High Court, Choose , minor, dispute - Vijay Karnataka

ಹೈಕೋರ್ಟ್‌ ಮೆಟ್ಟಿಲೇರಿದ ಕವಿತಾಳ ಪ. ಪಂ ಗೆ ಅಪ್ರಾಪ್ತೆ ಆಯ್ಕೆ ವಿವಾದ

ವಿಕ ಸುದ್ದಿಲೋಕ 11 May 2016, 4:00 am
Subscribe

ರಾಯಚೂರು ಜಿಲ್ಲೆಯ ಕವಿತಾಳ ಪಟ್ಟಣ ಪಂಚಾಯಿತಿಗೆ ಇತ್ತೀಚೆಗೆ ನಡೆದ ಚುನಾವಣೆಯಲ್ಲಿ ವಾರ್ಡ್‌ ನಂಬರ್‌ 7ರಿಂದ ಅಪ್ರಾಪ್ತೆ ಆಯ್ಕೆಯಾಗಿದ್ದಾರೆ ಎನ್ನುವ ವಿವಾದ ಇದೀಗ ಹೈಕೋರ್ಟ್‌ ಮೆಟ್ಟಿಲೇರಿದೆ.

high court choose minor dispute
ಹೈಕೋರ್ಟ್‌ ಮೆಟ್ಟಿಲೇರಿದ ಕವಿತಾಳ ಪ. ಪಂ ಗೆ ಅಪ್ರಾಪ್ತೆ ಆಯ್ಕೆ ವಿವಾದ

ಬೆಂಗಳೂರು: ರಾಯಚೂರು ಜಿಲ್ಲೆಯ ಕವಿತಾಳ ಪಟ್ಟಣ ಪಂಚಾಯಿತಿಗೆ ಇತ್ತೀಚೆಗೆ ನಡೆದ ಚುನಾವಣೆಯಲ್ಲಿ ವಾರ್ಡ್‌ ನಂಬರ್‌ 7ರಿಂದ ಅಪ್ರಾಪ್ತೆ ಆಯ್ಕೆಯಾಗಿದ್ದಾರೆ ಎನ್ನುವ ವಿವಾದ ಇದೀಗ ಹೈಕೋರ್ಟ್‌ ಮೆಟ್ಟಿಲೇರಿದೆ.

ಸ್ಥಳೀಯರಾದ ಕಾಶೀನಾಥ್‌ ಎಂಬುವರು ಸಲ್ಲಿಸಿದ್ದ ಅರ್ಜಿ ಮಂಗಳವಾರ ನ್ಯಾ.ರವಿ ಮಳೀಮಠ್‌ ಅವರಿದ್ದ ಏಕಸದಸ್ಯಪೀಠದ ಮುಂದೆ ವಿಚಾರಣೆಗೆ ಬಂದಿತು. ನ್ಯಾಯಪೀಠ ಸರಕಾರಕ್ಕೆ ಆ ಬಗ್ಗೆ ಮಾಹಿತಿ ನೀಡುವಂತೆ ಮೌಖಿಕ ಸೂಚನೆ ನೀಡಿ ವಿಚಾರಣೆಯನ್ನು ಮೇ 12 ಕ್ಕೆ ನಿಗದಿಪಡಿಸಿತು.

''ವಾರ್ಡ್‌ ನಂಬರ್‌ ಏಳರಿಂದ ಕಾಂಗ್ರೆಸ್‌ ಪಕ್ಷದ ಅಭ್ಯರ್ಥಿಯಾಗಿ ಹೀನಾ ಸುಲ್ತಾನ ಅವರು 160 ಮತಗಳ ಅಂತರದಿಂದ ಬಿಜೆಪಿಯ ಹುಸೇನಮ್ಮ ಅವರನ್ನು ಮಣಿಸಿ ಆಯ್ಕೆಯಾಗಿದ್ದಾರೆ. ಶಾಲಾ ದಾಖಲೆಗಳ ಪ್ರಕಾರ ಅವರ ವಯಸ್ಸು ಕೇವಲ 17 ವರ್ಷ. ಆದರೂ ಅವರು ಚುನಾವಣೆ ವೇಳೆ ತಮಗೆ 18 ವರ್ಷ ಪೂರೈಸಿದೆ ಎಂದು ಸುಳ್ಳು ಪ್ರಮಾಣಪತ್ರ ಸಲ್ಲಿಕೆ ಮಾಡಿ ಆಯ್ಕೆಯಾಗಿದ್ದಾರೆ. ಹೀಗಾಗಿ ಪಟ್ಟಣ ಪಂಚಾಯಿತಿ ಅಧ್ಯಕ್ಷ ಆಯ್ಕೆಗೆ ನಡೆಯಲಿರುವ ಚುನಾವಣೆಯಲ್ಲಿ ಅವರಿಗೆ ಮತದಾನ ಮಾಡದಂತೆ ನಿರ್ಬಂಧ ವಿಧಿಸಬೇಕು,'' ಎಂದು ಅರ್ಜಿದಾರರು ನ್ಯಾಯಪೀಠವನ್ನು ಕೋರಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ