Please enable javascript.DMRC,ದಿಲ್ಲಿ ಮೆಟ್ರೋ ರೈಲುಗಳ ಸಂಖ್ಯೆ ಹೆಚ್ಚಳ: ಯಾಕೆ ಗೊತ್ತಾ? - delhi metro increases number of trains to fight air pollution - Vijay Karnataka

ದಿಲ್ಲಿ ಮೆಟ್ರೋ ರೈಲುಗಳ ಸಂಖ್ಯೆ ಹೆಚ್ಚಳ: ಯಾಕೆ ಗೊತ್ತಾ?

Vijaya Karnataka Web 1 Nov 2018, 4:25 pm
Embed

ದಿಲ್ಲಿ ಮೆಟ್ರೋ ರೈಲು ನಿಗಮ ವಾಯುಮಾಲಿನ್ಯವನ್ನು ತಡೆಯುವ ನಿಟ್ಟಿನಲ್ಲಿ 21 ಹೊಸ ರೈಲುಗಳನ್ನು ಸಂಚಾರಕ್ಕೆ ಅಣಿಗೊಳಿಸಿದೆ. ಮೆಟ್ರೋ ಬಳಕೆದಾರರ ಸಂಖ್ಯೆ ಹೆಚ್ಚಿಸುವ ಮೂಲಕ ವಾಯುಮಾಲಿನ್ಯ ತಡೆಗೆ ಕ್ರಮ ಕೈಗೊಳ್ಳಲಾಗಿದೆ. 21 ರೈಲುಗಳ ಮೂಲಕ 812 ಹೊಸ ಸಂಚಾರ ಕೈಗೊಳ್ಳಲು ಅನುಕೂಲವಾಗಲಿದೆ. ಸಾರ್ವಜನಿಕ ಸಾರಿಗೆ ಬಳಕೆ ಮಾಡುವಂತೆ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ ಸಾರ್ವಜನಿಕರಲ್ಲಿ ವಿನಂತಿಸಿದೆ.