ಆ್ಯಪ್ನಗರ

32 ಕಲ್ಯಾಣಿಗಳಲ್ಲಿ ಗಣೇಶ ಮೂರ್ತಿ ವಿಸರ್ಜನೆ

ನಗರದಲ್ಲಿ ಗಣೇಶ ಮೂರ್ತಿ ವಿಸರ್ಜನೆಗೆ 32 ಕಲ್ಯಾಣಿ, 100 ಮೊಬೈಲ್‌ ಟ್ಯಾಂಕರ್‌ಗಳನ್ನು ನಿಯೋಜಿಸಲಾಗಿದೆ.

Vijaya Karnataka 23 Aug 2019, 1:16 pm
ಬೆಂಗಳೂರು: ಪರಿಸರ ಸ್ನೇಹಿ ಗಣೇಶ ಹಬ್ಬ ಆಚರಿಸುವ ನಿಟ್ಟಿನಲ್ಲಿರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷ ಡಾ.ಕೆ.ಸುಧಾಕರ್‌ ಬಿಬಿಎಂಪಿ, ಪೊಲೀಸ್‌ ಇಲಾಖೆ, ನಗರಾಭಿವೃದ್ಧಿ ಇಲಾಖೆ, ಪೌರಾಡಳಿತ ನಿರ್ದೇಶನಾಲಯ ಅಧಿಕಾರಿಗಳೊಂದಿಗೆ ಶುಕ್ರವಾರ ಸಭೆ ನಡೆಸಿದರು. ಸಭೆಯಲ್ಲಿಗಣೇಶ ಮೂರ್ತಿಗಳನ್ನು ಜಲಮೂಲಗಳಲ್ಲಿವಿಸರ್ಜಿಸುವುದರಿಂದ ಉಂಟಾಗುವ ಮಾಲಿನ್ಯ ಹಾಗೂ ಜಲಮೂಲಗಳ ಸಂರಕ್ಷಿಸುವ ನಿಟ್ಟಿನಲ್ಲಿಕೈಗೊಳ್ಳಬೇಕಾದ ಅಗತ್ಯ ಕ್ರಮಗಳ ಕುರಿತು ಚರ್ಚೆ ನಡೆಸಿ ತೀರ್ಮಾನ ಕೈಗೊಳ್ಳಲಾಯಿತು. ಅವುಗಳಲ್ಲಿಪ್ರಮುಖವಾಗಿ ಪಿಒಪಿ ವಿಗ್ರಹಗಳನ್ನು ತಯಾರಿಸುವ ಮತ್ತು ಮಾರಾಟ ಮಾಡುವ ವ್ಯಕ್ತಿ ಹಾಗೂ ಸಂಸ್ಥೆಗಳಿಗೆ ಪರವಾನಗಿ ನೀಡದಿರುವುದು. ಜತೆಗೆ ಅನಧಿಕೃತವಾಗಿ ತಯಾರಿ ಅಥವಾ ಮಾರಾಟ ಮಾಡುವ ವ್ಯಕ್ತಿ ಮಾಡುವ ವ್ಯಕ್ತಿ ಅಥವಾ ಸಂಸ್ಥೆಗಳ ಮೇಲೆ ಕಾನೂನು ಕ್ರಮ ಜರುಗಿಸುವಂತೆ ಸೂಚಿಸಲಾಯಿತು. ನಗರದಲ್ಲಿಗಣೇಶ ಮೂರ್ತಿ ವಿಸರ್ಜನೆಗೆ 32 ಕಲ್ಯಾಣಿ, 100 ಮೊಬೈಲ್‌ ಟ್ಯಾಂಕರ್‌ಗಳನ್ನು ನಿಯೋಜಿಸಲಾಗಿದ್ದು, ವಾರ್ಡ್‌ಮಟ್ಟದಲ್ಲಿಪೊಲೀಸರ ಸಹಯೋಗದಲ್ಲಿಸಮಿತಿ ರಚಿಸಿ ಸೂಕ್ತ ವಿಲೇವಾರಿಗೆ ಕ್ರಮ ಕೈಗೊಳ್ಳುವ ತೀರ್ಮಾನಕ್ಕೆ ಬರಲಾಗಿದೆ. ಮೂರ್ತಿ ವಿಸರ್ಜನಾ ಸ್ಥಳ ಕುರಿತು ಸಾರ್ವಜನಿಕರಿಗೆ ಮಾಹಿತಿ ನೀಡಲು ಬಿಬಿಎಂಪಿ ಕ್ರಮವಹಿಸಬೇಕಿದೆ. ಜಲಮಾಲಿನ್ಯಕ್ಕೆ ಪ್ಲಾಸ್ಟರ್‌ ಆಫ್‌ ಪ್ಯಾರಿಸ್‌(ಪಿಒಪಿ) ಗಣೇಶ ಮೂರ್ತಿಗಳು ಹಾಗೂ ಮೂರ್ತಿಗೆ ಲೇಪಿಸಿದ ರಾಸಾಯನಿಕ ಬಣ್ಣಗಳು ಪ್ರಮುಖ ಕಾರಣವಾಗಿದ್ದು, ಸಾರ್ವಜನಿಕರು ಮಣ್ಣಿನ ಗಣಪತಿಯೊಂದಿಗೆ ಹಬ್ಬ ಆಚರಿಸಿ ಸ್ಥಳೀಯ ಸಂಸ್ಥೆ ನಿಯೋಜಿಸಿದ ಸ್ಥಳದಲ್ಲಿಯೇ ಮೂರ್ತಿ ವಿಸರ್ಜನೆ ಮಾಡಬೇಕು, ಸಾರ್ವಜನಿಕವಾಗಿ ಮೂರ್ತಿ ಕೂರಿಸಲು ಕಡ್ಡಾಯ ಅನುಮತಿ ಪಡೆಯುವಂತೆ ತಿಳಿಸಿದೆ. ರಾಜ್ಯದ ಎಲ್ಲಾಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿಈಗಾಗಲೇ ವಿಸರ್ಜಿಸದೆ ಉಳಿದಿರುವ ಪಿಒಪಿ ಅಥವಾ ಬಣ್ಣದ ವಿಗ್ರಹಗಳನ್ನು ತನಿಖೆ ಮಾಡಿ ತನ್ನ ಸುಪರ್ದಿಗೆ ತೆಗೆದುಕೊಂಡು ಮತ್ತು ಅಂತಹ ವಸ್ತುಗಳನ್ನು ಸ್ಥಳೀಯ ಸಂಸ್ಥೆಗಳಲ್ಲಿಇರುವ ಘನ ತ್ಯಾಜ್ಯ ವಿಲೇವಾರಿ ಘಟಕಗಳಿಗೆ ಸಾಗಿಸಬೇಕು. ಬೇರೆ ರಾಜ್ಯದಿಂದ ಬರುವಂತಹ ಪಿಒಪಿ ವಿಗ್ರಹಗಳನ್ನು ತಡೆಗಟ್ಟಲು ರಾಜ್ಯದ ಎಲ್ಲಾಜಿಲ್ಲೆಅಥವಾ ತಾಲ್ಲೂಕುಗಳಲ್ಲಿತಪಾಸಣಾ ಕೇಂದ್ರ ತೆರೆಯಲು ಜಿಲ್ಲಾಧಿಕಾರಿಗಳು ಕ್ರಮ ಕೈಗೊಳ್ಳುವಂತೆ ಸೂಚಿಸಲಾಗಿದೆ.
Vijaya Karnataka Web mud ganesha

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ