ಆ್ಯಪ್ನಗರ

ಸೌತಡ್ಕ ದೇವಸ್ಥಾನದ ಮೂಲ ಸೌಕರ್ಯಕ್ಕೆ ಆದ್ಯತೆ

ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದ ಮೂಲ ಸೌಕರ್ಯ ಅಭಿವೃದ್ಧಿಗೆ ತಾವು ಸಂಪೂರ್ಣ ಸಹಕಾರ ನೀಡುವುದಾಗಿ ಶಾಸಕ ಹರೀಶ್‌ ಪೂಂಜ ಹೇಳಿದ್ದಾರೆ.

Vijaya Karnataka 3 Aug 2019, 5:35 pm
ಕೊಕ್ಕಡ:ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದ ಮೂಲ ಸೌಕರ್ಯ ಅಭಿವೃದ್ಧಿಗೆ ತಾವು ಸಂಪೂರ್ಣ ಸಹಕಾರ ನೀಡುವುದಾಗಿ ಶಾಸಕ ಹರೀಶ್‌ ಪೂಂಜ ಹೇಳಿದ್ದಾರೆ.
Vijaya Karnataka Web PTR-2NLD SOWTHADKA

ಅವರು ಶುಕ್ರವಾರ ಸೌತಡ್ಕ ದೇವಸ್ಥಾನಕ್ಕೆ ಭೇಟಿ ನೀಡಿ ಆಡಳಿತ ಮಂಡಳಿ ಸಭೆಯಲ್ಲಿ ಮಾತನಾಡಿದರು.
ಕ್ಷೇತ್ರಕ್ಕೆ ಪ್ರವಾಸೋದ್ಯಮ ಇಲಾಖೆಯಿಂದ ಮಂಜೂರುಗೊಂಡ ವಸತಿಗೃಹದ ಕಾಮಗಾರಿಯ ನಿಧಾನಗತಿಯಿಂದ ಆಗುತ್ತಿರುವ ಕುರಿತು ಕಾರ್ಯನಿರ್ವಹಣಾಧಿಕಾರಿ ಹರೀಶ್ಚಂದ್ರ ಶಾಸಕರ ಗಮನಕ್ಕೆ ತಂದರು. ಈ ಕುರಿತು ಗುತ್ತಿರಗೆಯನ್ನು ಪಡೆದ ನಿರ್ಮಿತಿ ಕೇಂದ್ರ ಹಾಗೂ ಗುತ್ತಿಗೆದಾರರಿಗೆ ಮಾಹಿತಿ ನೀಡಿ ಶೀಘ್ರ ಕಾಮಗಾರಿ ಮುಗಿಸುವಂತೆ ತಿಳಿಸುವುದಾಗಿ ಹೇಳಿದರು.
ಕ್ಷೇತ್ರಕ್ಕೆ 25 ಲಕ್ಷ ರೂ. ವೆಚ್ಚದಲ್ಲಿ ಶೌಚಾಲಯ ನಿರ್ಮಾಣಕ್ಕೆ ಪ್ರವಾಸೋದ್ಯಮ ಇಲಾಖೆಯಿಂದ ಅನುದಾನ ಮಂಜೂರಾಗಿದ್ದು, ಶೀಘ್ರ ಕಾಮಗಾರಿ ಆರಂಭವಾಗಲಿದೆ ಎಂದು ಶಾಸಕರು ತಿಳಿಸಿದರು.
5 ವರ್ಷಕ್ಕಿಂತ ಹೆಚ್ಚು ಸೇವೆ ಮಾಡಿರುವ ಕ್ಷೇತ್ರದ ನೌಕರರ ಖಾಯಂ ಮಾಡುವುದು, ಕ್ಷೇತ್ರದ ಎದುರಿಗೆ ಹೈಮಾಸ್ಕ್‌ ದೀಪ ಅಳವಡಿಕೆ , ಸಂಪರ್ಕ ರಸ್ತೆಗಳ ಅಭಿವೃದ್ಧಿ, ಕ್ಷೇತ್ರದ ಗೋಶಾಲೆಯ ಅಭಿವೃದ್ಧಿ ಕುರಿತು ಹೆಚ್ಚಿನ ಮುತುವರ್ಜಿ ವಹಿಸುವುದಾಗಿ ತಿಳಿಸಿದರು.
ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಸುಬ್ರಹ್ಮಣ್ಯ ಶಬರಾಯ, ಪ್ರಧಾನ ಅರ್ಚಕ ಸತ್ಯಪ್ರಿಯ ಕಲ್ಲೂರಾಯ, ತಾಲೂಕು ಪಂಚಾಯಿತಿ ಸದಸ್ಯ ಲಕ್ಷ್ಮೀನಾರಾಯಣ, ಕೊಕ್ಕಡ ಸಹಕಾರಿ ಬ್ಯಾಂಕ್‌ ಅಧ್ಯಕ್ಷ ನಾರಾಯಣ ಗೌಡ ಇದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ