ಆ್ಯಪ್ನಗರ

ಬೆಂಗಳೂರು ಸೇರಿ ದೇಶದ ಮಹಾನಗರಗಳಲ್ಲಿ ಪೆಟ್ರೋಲ್‌, ಡೀಸೆಲ್‌ ದರ ಎಷ್ಟಿದೆ? ಇಲ್ಲಿದೆ ಮಾಹಿತಿ!

ಕಳೆದ ಎರಡು ವಾರಗಳಿಂದ ಕೊಂಚ ಕೊಂಚವಾಗಿ ಏರಿಕೆ ಕಾಣುತ್ತಿದ್ದ ಪೆಟ್ರೋಲ್‌ ಹಾಗೂ ಡೀಸೆಲ್‌ ದರ ಮಂಗಳವಾರ ಸ್ಥಿರವಾಗಿದೆ. ಅಂತರಾಷ್ಟ್ರೀಯ ಕಚ್ಚಾತೈಲ ಮಾರುಕಟ್ಟೆಯಲ್ಲಿ ಯಾವುದೇ ಬದಲಾವಣೆ ಆಗದ ಕಾರಣ ಇಲ್ಲಿಯು ಇದರ ಪರಿಣಾಮ ಬಿದ್ದಿದೆ ಎನ್ನಲಾಗಿದೆ. ಹಾಗಾದರೆ ಇಂದಿನ ದರ ಎಷ್ಟಿದೆ? ಇಲ್ಲಿದೆ ಈ ಬಗ್ಗೆ ಮಾಹಿತಿ.

Vijaya Karnataka Web 6 Oct 2020, 7:52 am
ಬೆಂಗಳೂರು: ದೇಶದ ಮಹಾನಗರಗಳಲ್ಲಿ ಮಂಗಳವಾರ ಪೆಟ್ರೋಲ್‌, ಡೀಸೆಲ್‌ ದರದಲ್ಲಿ ಯಾವುದೇ ಬದಲಾವಣೆ ಕಂಡುಬಂದಿಲ್ಲ. ಎಲ್ಲಾ ನಗರಗಳಲ್ಲಿಯು ಇಂಧನ ದರ ಸ್ಥಿರವಾಗಿದೆ. ಮುಂದಿನ ದಿನಗಳಲ್ಲಿ ಪೆಟ್ರೋಲ್‌, ಡೀಸೆಲ್‌ ದರ ಇಳಿಯುವ ಸಾಧ್ಯತೆ ಇದೆ ಎಂದು ಮಾರುಕಟ್ಟೆ ಪರಿಣಿತರು ಅಂದಾಜಿಸಿದ್ದಾರೆ.
Vijaya Karnataka Web Petrol
(Representative image)


ಕಳೆದ ಎರಡು ವಾರಗಳಿಂದ ಕೊಂಚ ಕೊಂಚವಾಗೇ ಪೆಟ್ರೋಲ್‌, ಡೀಸೆಲ್‌ ದರದಲ್ಲಿ ಇಳಿಕೆ ಕಾಣುತ್ತಿತ್ತು. ಇನ್ನು ಎಲ್ಲಾ ಪ್ರಮುಖ ನಗರಗಳಲ್ಲಿ ಪೆಟ್ರೋಲ್‌ ದರ 80ರ ಗಡಿ ದಾಟಿದ್ದು ಇಳಿಯುವ ನಿರೀಕ್ಷೆಯಲ್ಲಿ ಜನ ಸಾಮಾನ್ಯರಿದ್ದಾರೆ. ಹಾಗಾದರೆ ಅಕ್ಟೋಬರ್‌ 6ರ ಮಂಗಳವಾರ ದೇಶದ ಮಹಾನಗರಗಳಲ್ಲಿ ತೈಲ ದರ ಎಷ್ಟಿದೆ? ಇಲ್ಲಿದೆ ಈ ಬಗ್ಗೆ ಮಾಹಿತಿ.


ಬೆಲೆ ಪರಿಷ್ಕರಣೆಗೊಂಡ ಬಳಿಕ ದೇಶದ ಮಹಾನಗರಗಳಲ್ಲಿ ಇಂದಿನ ತೈಲ ದರಗಳತ್ತ ಗಮನಹರಿಸುವುದಾದರೆ.


ಸಿಲಿಕಾನ್ ಸಿಟಿ ಬೆಂಗಳೂರು
ಪೆಟ್ರೋಲ್: 83.69 ರೂ.
ಡೀಸೆಲ್: 74.63 ರೂ.

ರಾಷ್ಟ್ರ ರಾಜಧಾನಿ ನವದೆಹಲಿ
ಪೆಟ್ರೋಲ್: 81.06 ರೂ.
ಡೀಸೆಲ್: 70.46 ರೂ.

ಮಹಾರಾಷ್ಟ್ರ ರಾಜಧಾನಿ ಮುಂಬಯಿ
ಪೆಟ್ರೋಲ್: 87.74 ರೂ.
ಡೀಸೆಲ್: 76.86 ರೂ.

ತಮಿಳುನಾಡು ರಾಜಧಾನಿ ಚೆನ್ನೈ
ಪೆಟ್ರೋಲ್:84.14 ರೂ.
ಡೀಸೆಲ್: 75.95 ರೂ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ