ಆ್ಯಪ್ನಗರ

ಅಲ್ಪ ಏರಿಕೆ ಕಂಡ ಚಿನ್ನದ ಬೆಲೆ..! ಬೆಳ್ಳಿ ಬಂಗಾರದ ಇಂದಿನ ಬೆಲೆ ವಿವರ ಇಲ್ಲಿದೆ

ದೇಶದ ಚಿನ್ನದ ಮತ್ತು ಬೆಳ್ಳಿ ಬೆಲೆಯಲ್ಲಿ ಏರಿಳಿತದ ಹಾವು ಏಣಿ ಆಟ ಮುಂದುವರೆದಿದೆ. ಆಯಾಯ ರಾಜ್ಯಗಳಲ್ಲಿ ಅಲ್ಲಿನ ಬೇಡಿಕೆಗೆ ತಕ್ಕಂತೆ ಹಳದಿ ಲೋಹದ ಬೆಲೆಯಲ್ಲಿ ವ್ಯತ್ಯಾಸವಿದೆ. ದೇಶದ ಇಂದಿನ ಚಿನ್ನ ಮತ್ತು ಬೆಳ್ಳಿ ಬೆಲೆ ವಿವರ ಇಲ್ಲಿದೆ.

Vijaya Karnataka Web 13 Oct 2020, 9:02 am
ಬೆಂಗಳೂರು: ಚಿನ್ನ ಮತ್ತು ಬೆಳ್ಳಿ ಬೆಲೆಯಲ್ಲಿ ಹಾವು ಏಣಿ ಆಟ ಮುಂದುವರೆದಿದೆ. ಮಂಗಳವಾರ ದೇಶದಲ್ಲಿ ಗ್ರಾಂ ಚಿನ್ನದ ಬೆಲೆ 4,815ರೂ ದಾಖಲಾಗಿದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ ನಿನ್ನೆಗಿಂತ ತುಸು ಏರಿಕೆ ಕಂಡಿದೆ. ಬೆಂಗಳೂರಿನಲ್ಲಿ ಗ್ರಾಂ ಚಿನ್ನದ ದರ ಇಂದು 4,815ರೂ. ದಾಖಲಾಗಿದೆ. ಇದೇ ರೀತಿ ಕೆಜಿ ಬೆಳ್ಳಿ ಬೆಲೆ ಕೂಡ ಏರಿಕೆ ಕಂಡಿದ್ದು ಕೆಜಿ ಗೆ 63,800 ರೂ ದಾಖಲಾಗಿದೆ.
Vijaya Karnataka Web gold


ಮಂಗಳವಾರ ದೇಶದ ಮಹಾನಗರಗಳಲ್ಲಿ ಪೆಟ್ರೋಲ್‌, ಡೀಸೆಲ್‌ ದರ ಎಷ್ಟಿದೆ? ಇಲ್ಲಿದೆ ಮಾಹಿತಿ!

ರಾಷ್ಟ್ರ ರಾಜಧಾನಿ ದಿಲ್ಲಿಯಲ್ಲಿ 22 ಕ್ಯಾರಟ್‌ ಚಿನ್ನದ ದರವು 10 ಗ್ರಾಮ್‌ಗೆ 49,800ರೂಗೆ ಏರಿಕೆಯಾಗಿದೆ. ಬೆಳ್ಳಿ ದರವು 63,800 ರೂ.ಗೆ ತಲುಪಿದೆ.

ಕರ್ನಾಟಕದ ರಾಜಧಾನಿ ಬೆಂಗಳೂರಿನಲ್ಲಿ 10 ಗ್ರಾಂ ಚಿನ್ನದ ಬೆಲೆ ಏರಿಕೆ ಕಂಡು 48,150 ರೂ. ದಾಖಲಾಗಿದೆ. ಇನ್ನು, ಇದೇ ರೀತಿ 1 ಕೆಜಿ ಬೆಳ್ಳಿ ಬೆಲೆ 62,900 ರೂ. ಆಗಿದೆ.

ವಾಣಿಜ್ಯ ನಗರಿ ಮುಂಬಯಿನಲ್ಲಿ 22 ಕ್ಯಾರಟ್‌ನ 10 ಗ್ರಾಂ ಚಿನ್ನದ ಬೆಲೆ 49,540 ರೂಪಾಯಿ ದಾಖಲಾಗಿದೆ. ಇನ್ನು, ಒಂದು ಕೆ.ಜಿ. ಬೆಳ್ಳಿ ದರ 63,800 ರೂಪಾಯಿ ಇದೆ.

ತ್ರಿಪುರಾ ಬಿಜೆಪಿಯಲ್ಲಿ ಭುಗಿಲೆದ್ದ ಭಿನ್ನಮತ; ಸಿಎಂ ವಿರುದ್ಧ ತೊಡೆ ತಟ್ಟಿದ 12 ಶಾಸಕರು ದಿಲ್ಲಿಗೆ ದೌಡು

ದೇಶದ ಇತರೆ ಪ್ರಮುಖ ನಗರಗಳಲ್ಲಿ ಚಿನ್ನ, ಬೆಳ್ಳಿಯ ದರ ಎಷ್ಟಿದೆ?

ಪಶ್ಚಿಮ ಬಂಗಾಳದ ಕೋಲ್ಕತಾದಲ್ಲಿ ಇಂದು 10 ಗ್ರಾಂ ಆಭರಣದ ಬೆಲೆ 50,350 ರೂಪಾಯಿ ದಾಖಲಾಗಿದೆ. ಬೆಳ್ಳಿ ದರ 63,800 ರೂಪಾಯಿ ಇದೆ.

ತಮಿಳುನಾಡಿನ ಚೆನ್ನೈನಲ್ಲಿ ಇಂದಿನ ಬಂಗಾರದ ಬೆಲೆ 10 ಗ್ರಾಂಗೆ 48,870 ರೂ ದಾಖಲಾಗಿದೆ. ಒಂದು ಕೆ.ಜಿ. ಬೆಳ್ಳಿ ದರ 63,800 ರೂಪಾಯಿ ಇದೆ.

ಒಟ್ಟಾರೆ ದೇಶದ ಪ್ರಮುಖ ಮಹಾನಗರಗಳಲ್ಲಿ ಹಳದಿ ಲೋಹದ ಬೆಲೆಯಲ್ಲಿ ಏರಿಕೆ - ಇಳಿಕೆಯ ಹಾವು ಏಣಿ ಆಟ ಇದೆ. ನಿನ್ನೆಗೆ ಹೋಲಿಸಿದರೆ ಬಂಗಾರ ಮತ್ತು ಬೆಳ್ಳಿ ದರ ಕೂಡ ಏರಿಕೆ ಕಾಣುತ್ತಿದೆ. ಅಂತಾರಾಷ್ಟ್ರೀಯ ಟ್ರೆಂಡ್, ಚಿನ್ನದ ಮೇಲಿನ ಆಮದು ಸುಂಕ ಮತ್ತು ಡಾಲರ್ ಎದುರು ರೂಪಾಯಿ ಮೌಲ್ಯವನ್ನಾಧರಿಸಿ ಆಯಾ ದಿನದ ಬಂಗಾರ ಹಾಗೂ ಬೆಳ್ಳಿ ದರ ನಿರ್ಧಾರವಾಗುತ್ತದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ