ಆ್ಯಪ್ನಗರ

ಚಿನ್ನ, ಬೆಳ್ಳಿ ಬೆಲೆ ಕುಸಿತ: ಬೆಂಗಳೂರಿನಲ್ಲಿ ಗ್ರಾಂ ಚಿನ್ನದ ಬೆಲೆ ₹ 2980

ಬೆಂಗಳೂರಿನಲ್ಲಿ ಚಿನ್ನದ ಬೆಲೆ ಬುಧವಾರದಷ್ಟೇ ಇದ್ದರೂ, ಬೆಳ್ಳಿ ಬೆಲೆ ಕುಸಿತ ಕಂಡಿದೆ. 22 ಕ್ಯಾರೆಟ್‍ನ 1 ಗ್ರಾಂ ಚಿನ್ನದ ಬೆಲೆ ₹ 2980ರಷ್ಟಿದೆ. ಅದೇ ರೀತಿ 1 ಕೆಜಿ ಬೆಳ್ಳಿ ಬೆಲೆ ₹ 39,440ರಷ್ಟಿದೆ.

Vijaya Karnataka Web 30 May 2019, 6:01 pm
ಹೊಸದಿಲ್ಲಿ: ಜಾಗತಿಕ ಮಾರುಕಟ್ಟೆಯಲ್ಲಿ ಚಿನ್ನದ ಮೇಲೆ ಹೂಡಿಕೆದಾರರು ಅಷ್ಟಾಗಿ ಆಸಕ್ತಿ ತೋರದ ಹಿನ್ನೆಲೆಯಲ್ಲಿ ಹಾಗೂ ದುರ್ಬಲ ಬೇಡಿಕೆ ಕಾರಣ ಚಿನ್ನದ ಬೆಲೆ ಇಂದು (ಮೇ 30) ಕುಸಿತ ಕಂಡಿದೆ.
Vijaya Karnataka Web gold


ಜಾಗತಿಕ ಮಾರುಕಟ್ಟೆಯಲ್ಲಿ ಡಾಲರ್ ಮೌಲ್ಯ ಹೆಚ್ಚಾದ ಕಾರಣ ಚಿನ್ನದ ಸೂಚ್ಯಂಕ ಇಳಿಮುಖವಾಗಿದೆ. ಜತೆಗೆ, ಆರ್ಥಿಕ ಹಿಂಜರಿತದ ಭೀತಿಯೂ ಉಂಟಾಗಿರುವ ಕಾರಣ ಬೆಲೆ ಕಡಿಮೆಯಾಗಿದೆ. ಡಾಲರ್ ಮೌಲ್ಯ ಹೆಚ್ಚಾದಂತೆ ಚಿನ್ನದ ಮೌಲ್ಯ ಕುಸಿತ ಕಾಣುವುದನ್ನು ಜಾಗತಿಕ ಮಾರುಕಟ್ಟೆಯಲ್ಲಿ ಕಾಣಬಹುದು.

ಇನ್ನು, ಸ್ಟಾಟ್‌ ಮಾರ್ಕೆಟ್‌ನಲ್ಲಿ ಡಿಮ್ಯಾಂಡ್‌ ಕಡಿಮೆಯಾದ ಹಾಗೂ ಬೆಳ್ಳಿಗೆ ಬೇಡಿಕೆ ಇಲ್ಲದ ಕಾರಣ ಬೆಳ್ಳಿ ಬೆಲೆ ಸಹ ಕುಸಿತ ಕಂಡಿದೆ. ಮಲ್ಟಿ ಕಮಾಡಿಟಿ ಎಕ್ಸ್‌ಚೇಂಜ್‌ನಲ್ಲಿ 10 ಗ್ರಾಂ ಚಿನ್ನದ ಬೆಲೆ ₹ 143 ರಷ್ಟು ಕುಸಿದು ₹ 31,590ರಷ್ಟಾಗಿದೆ. ಅದೇ ರೀತಿ ಮಲ್ಟಿ ಕಮಾಡಿಟಿ ಎಕ್ಸ್‌ಚೇಂಜ್‌ನಲ್ಲಿ ಒಂದು ಕೆಜಿ ಬೆಳ್ಳಿ ಬೆಲೆ ₹ 195ರಷ್ಟು ಕುಸಿದಿದ್ದು ₹ 36,091 ರಷ್ಟಾಗಿದೆ.

ಬೆಂಗಳೂರಿನಲ್ಲಿ 22 ಮತ್ತು 24 ಕ್ಯಾರೆಟ್ ಚಿನ್ನದ ಬೆಲೆ ಕ್ರಮವಾಗಿ ₹ 29,800 ಹಾಗೂ ₹32,500 ರಷ್ಟಿದೆ. 22 ಕ್ಯಾರೆಟ್‍ನ 1 ಗ್ರಾಂ ಚಿನ್ನದ ಬೆಲೆ ₹ 2980ರಷ್ಟಿದೆ. ಅದೇ ರೀತಿ 1 ಕೆಜಿ ಬೆಳ್ಳಿ ಬೆಲೆ ₹ 39,440ರಷ್ಟಿದೆ.

ಬೆಂಗಳೂರಿನಲ್ಲಿ ಆಯಾ ದಿನದ ಚಿನ್ನದ ಬೆಲೆಯನ್ನು ಚಿನ್ನದ ವ್ಯಾಪಾರಿಗಳ ಒಕ್ಕೂಟ ಅಥವಾ ಸ್ವತಃ ಚಿನ್ನದ ವ್ಯಾಪಾರಿಗಳು ನಿರ್ಧರಿಸುತ್ತಾರೆ. ದೈನಂದಿನ ಚಿನ್ನದ ಬೆಲೆ ಅಂತಾರಾರಾಷ್ಟ್ರೀಯ ಟ್ರೆಂಡ್ ಮತ್ತು ಚಿನ್ನದ ಮೇಲಿನ ಆಮದು ಸುಂಕವನ್ನು ಆಧರಿಸಿರುತ್ತದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ