ಆ್ಯಪ್ನಗರ

ಬೆಂಗಳೂರಿನಲ್ಲಿ ಇಂದು ಚಿನ್ನದ ಬೆಲೆ ಅಲ್ಪ ಏರಿಕೆ

ನಿನ್ನೆಗಿಂತ ಇಂದು ಬಂಗಾರದ ಬೆಲೆ ಏರಿಕೆ ಕಂಡಿದೆ, ಆದರೆ ಬೆಳ್ಲಿ ಹಲವು ದಿನಗಳಿಂದ ಬೆಲೆಯಲ್ಲಿ ಸ್ಥಿರತೆ ಕಾದುಕೊಂಡಿದೆ.

Agencies 11 Jul 2019, 2:59 pm
ಸ್ವರ್ಣದ ಬೆಲೆಯಲ್ಲಿ ಇಂದು ಸ್ವಲ್ಪ ಏರಿಕೆಯಾಗಿದೆ. ಆದರೆ ಬೆಳ್ಳಿ ಬೆಲೆಯಲ್ಲಿ ಯಾವುದೇ ವ್ಯತ್ಯಾಸವಾಗಿಲ್ಲ.
Vijaya Karnataka Web Gold price


ಬೆಂಗಳೂರಿನಲ್ಲಿ 22 ಕ್ಯಾರೆಟ್‌ನ 1 ಗ್ರಾಂ ಚಿನ್ನದ ಬೆಲೆ ₹ 3,235 ಇದ್ದು 10 ಗ್ರಾಂ ಚಿನ್ನಕ್ಕೆ ಮಾರುಕಟ್ಟೆ ಬೆಲೆ ₹32,350 ಇದೆ. 10ಗ್ರಾಂ ಶುದ್ಧ ಚಿನ್ನದ ಬೆಲೆ ₹ 34,599 ಇದೆ

ಇನ್ನು ಬೆಳ್ಳಿ ಬೆಲೆ ಸ್ಥಿರವಾಗಿದ್ದು ಬೆಳ್ಳಿ 1 ಕೆಜಿ ಬೆಳ್ಳಿಗೆ ₹ 40,600 ಇದೆ.

ಅಂತಾರಾಷ್ಟ್ರೀಯ ಮಟ್ಟದಲ್ಲಿ ಯುಎಸ್ ಮತ್ತು ಇರಾನ್ ನಡುವಿನ ಮುಸುಕಿನ ಗುದ್ದಾಟ ಚಿನ್ನದ ಬೆಲೆಯಲ್ಲಿ ಏರುಪೇರಾಗಲು ಒಂದು ಕಾರಣವಾಗಿದೆ.

ಬೆಂಗಳೂರಿನಲ್ಲಿ ಆಯಾ ದಿನದ ಚಿನ್ನದ ಬೆಲೆಯನ್ನು ಚಿನ್ನದ ವ್ಯಾಪಾರಿಗಳ ಒಕ್ಕೂಟ ಅಥವಾ ಸ್ವತಃ ಚಿನ್ನದ ವ್ಯಾಪಾರಿಗಳು ನಿರ್ಧರಿಸುತ್ತಾರೆ. ದೈನಂದಿನ ಚಿನ್ನದ ಬೆಲೆ ಅಂತಾರಾಷ್ಟ್ರೀಯ ಟ್ರೆಂಡ್ ಮತ್ತು ಚಿನ್ನದ ಮೇಲಿನ ಆಮದು ಸುಂಕವನ್ನು ಆಧರಿಸಿರುತ್ತದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ