ಆ್ಯಪ್ನಗರ

ಬೆಂಗಳೂರಲ್ಲಿ ಇಂದು ಚಿನ್ನದ ದರ ಇಳಿಕೆ, ಬೆಳ್ಳಿ ದರ ಸ್ಥಿರ

ಚಿನ್ನದ ಬೆಲೆಯಲ್ಲಿ ಅತ್ಯಲ್ಪ ಇಳಿಕೆಯಾಗಿದ್ದು, ಬೆಳ್ಳಿ ಬೆಲೆ ಸ್ಥಿರವಾಗಿದೆ. ಗುರುವಾರಕ್ಕಿಂತ ಇಂದು ಚಿನ್ನದ ಬೆಲೆಯಲ್ಲಿ 1 ಗ್ರಾಂಗೆ 30 ರೂ ಇಳಿಕೆಯಾಗಿದೆ.

Agencies 20 Sep 2019, 9:54 am
ಬೆಂಗಳೂರು: ಅಮೂಲ್ಯ ಲೋಹಗಳಾದ ಚಿನ್ನ ಮತ್ತು ಬೆಳ್ಳಿ ದರದರಲ್ಲಿ ಏರಿಳಿತ ಸಾಮಾನ್ಯವಾಗಿದ್ದು , ಇಂದು (ಶುಕ್ರವಾರ) ಬೆಂಗಳೂರಿನಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ 1 ಗ್ರಾಂಗೆ 3650 ರೂ ಇದೆ. ಅಂದರೆ ನಿನ್ನೆಗಿಂತ 30ರೂ ಇಳಿಕೆ ಕಂಡಿದೆ. ಅಂದರೆ 100ಗ್ರಾಂ ಚಿನ್ನಕ್ಕೆ 3000 ರೂ ಇಳಿಕೆಯಾದಂತಾಗಿದೆ
Vijaya Karnataka Web Gold


24 ಕ್ಯಾರೆಟ್ 1 ಗ್ರಾಂ ಚಿನ್ನಕ್ಕೆ ನಗರದಲ್ಲಿ 3750ರೂ ಇದೆ, ಗುರುವಾರ 3780 ರೂ ಇತ್ತು.

ಬೆಳ್ಳಿ ಬೆಲೆಯಲ್ಲಿ ಯಾವುದೇ ಬದಲಾವಣೆಯಾಗಿಲ್ಲ. ಗುರುವಾರ 1 ಗ್ರಾಂ ಬೆಳ್ಳಿ ದರ 48.77 ರೂ ಇತ್ತು. ಇಂದು ಕೂಡ ಅಷ್ಟೇ ಇದೆ. ಅಂದರೆ 1 ಕೆಜಿ ಬೆಳ್ಳಿ ದರ 48,765ರೂ ಇದೆ.

ಬೆಂಗಳೂರಿನಲ್ಲಿ ಆಯಾ ದಿನದ ಚಿನ್ನ ಹಾಗೂ ಬೆಳ್ಳಿ ದರವನ್ನು ಚಿನ್ನದ ವ್ಯಾಪಾರಿಗಳ ಒಕ್ಕೂಟ ಅಥವಾ ಸ್ವತಃ ಚಿನ್ನದ ವ್ಯಾಪಾರಿಗಳು ನಿರ್ಧರಿಸುತ್ತಾರೆ. ದೈನಂದಿನ ಚಿನ್ನದ ಬೆಲೆ ಅಂತಾರಾಷ್ಟ್ರೀಯ ಟ್ರೆಂಡ್ ಮತ್ತು ಚಿನ್ನದ ಮೇಲಿನ ಆಮದು ಸುಂಕವನ್ನು ಆಧರಿಸಿರುತ್ತದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ