ಆ್ಯಪ್ನಗರ

ದೇಶದ ಪ್ರಮುಖ ನಗರಗಳಲ್ಲಿ ಯಥಾಸ್ಥಿತಿ ಕಾಯ್ದುಕೊಂಡ ಚಿನ್ನ, ಬೆಳ್ಳಿ

ಬೆಂಗಳೂರಲ್ಲಿ ಬುಧವಾರ 10 ಗ್ರಾಂ ಆಭರಣ ಚಿನ್ನದ ಬೆಲೆ 34,800ರೂ. ಇದ್ದರೆ, 1 ಕೆಜಿ ಬೆಳ್ಳಿಯ ಬೆಲೆ 48,100 ರೂಪಾಯಿ ಇದೆ.

Vijaya Karnataka Web 3 Oct 2019, 7:38 am
ಬೆಂಗಳೂರು: ದೈನಂದಿನ ಬೆಲೆ ಏರಿಕೆ ಪ್ರಕ್ರಿಯೆಯಲ್ಲಿ ಇಂದು (ಗುರುವಾರ) ರಾಜಧಾನಿ ಬೆಂಗಳೂರಿನಲ್ಲಿ 22 ಕ್ಯಾರೆಟ್‌ನ 10 ಗ್ರಾಂ ಚಿನ್ನದ ಬೆಲೆ 34,800 ರೂಪಾಯಿ ಮತ್ತು ಒಂದು ಕೆ.ಜಿ. ಬೆಳ್ಳಿ ದರ 48,100 ರೂಪಾಯಿ ಇದೆ. ನಿನ್ನೆಯ (ಬುಧವಾರ) ಬೆಲೆಗೆ ಹೋಲಿಸಿದರೆ, ಅಮೂಲ್ಯ ಲೋಹಗಳಾದ ಚಿನ್ನ, ಬೆಳ್ಳಿ ಬೆಲೆ ಯಥಾಸ್ಥಿತಿ ಕಾಯ್ದುಕೊಂಡಿದೆ.
Vijaya Karnataka Web gold


ಕಳೆದ ತಿಂಗಳ ಆರಂಭದಲ್ಲಿ ಆಕಾಶಕ್ಕೇರಿದ್ದ ಬೆಳ್ಳಿ, ಬಂಗಾರದ ಬೆಲೆ, ಬಳಿಕ ನಿಧಾನಗತಿಯಲ್ಲಿ ಇಳಿಕೆ ಕಂಡಿತ್ತು.

ದೇಶದ ಪ್ರಮುಖ ನಗರಗಳಲ್ಲಿ ಚಿನ್ನ, ಬೆಳ್ಳಿಯ ದರ ಎಷ್ಟಿದೆ?

ರಾಷ್ಟ್ರ ರಾಜಧಾನಿ ದಿಲ್ಲಿಯಲ್ಲಿ 10 ಗ್ರಾಂ ಆಭರಣ ಚಿನ್ನದ ಬೆಲೆ 36,200 ರೂಪಾಯಿ ಇದ್ದರೆ, ಒಂದು ಕೆ.ಜಿ ಬೆಳ್ಳಿ ಬೆಲೆ 48,100 ರೂಪಾಯಿ ಇದೆ. ವಾಣಿಜ್ಯ ನಗರಿ ಮುಂಬಯಿನಲ್ಲಿ 22 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 36,250 ರೂಪಾಯಿ ಮತ್ತು ಬೆಳ್ಳಿ ಬೆಲೆ 48,100 ರೂಪಾಯಿ ಇದೆ.

ಪಶ್ಚಿಮ ಬಂಗಾಳದ ಕೋಲ್ಕತಾದಲ್ಲಿ 10 ಗ್ರಾಂ ಆಭರಣ ಚಿನ್ನದ ಬೆಲೆ 36,500 ರೂಪಾಯಿ ಮತ್ತು ಬೆಳ್ಳಿ ದರ 48,100 ರೂಪಾಯಿ ಇದೆ. ತಮಿಳುನಾಡಿನ ಚೆನ್ನೈ ಮಹಾನಗರದಲ್ಲಿ 22 ಕ್ಯಾರೆಟ್‌ನ 10 ಗ್ರಾಂ ಬಂಗಾರದ ಬೆಲೆ 35,450 ರೂಪಾಯಿ ಹಾಗೂ ಒಂದು ಕೆ.ಜಿ ಬೆಳ್ಳಿ ದರ 48,100 ರೂಪಾಯಿ ಇದೆ.

ಈ ಮೂಲಕ ದೇಶದ ಪ್ರಮುಖ ಮಹಾನಗರಗಳಲ್ಲಿ ಚಿನ್ನದ ದರದಲ್ಲಿ ಸ್ವಲ್ಪ ವ್ಯತ್ಯಾಸ ಕಂಡು ಬಂದಿದ್ದರೆ, ಬೆಳ್ಳಿ ದರ ಒಂದೇ ರೀತಿಯಲ್ಲಿದೆ.

ಅಂತಾರಾಷ್ಟ್ರೀಯ ಟ್ರೆಂಡ್, ಚಿನ್ನಾಭರಣದ ಮೇಲಿನ ಆಮದು ಸುಂಕ ಮತ್ತು ಡಾಲರ್ ಎದುರು ರೂಪಾಯಿ ಮೌಲ್ಯ ಆಧರಿಸಿ ಆಯಾ ದಿನದ ಬೆಳ್ಳಿ ಹಾಗೂ ಬಂಗಾರದ ಬೆಲೆ ನಿರ್ಧಾರವಾಗುತ್ತದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ