ಆ್ಯಪ್ನಗರ

ಬೆಂಗಳೂರಿನಲ್ಲಿ ಇಂದು ಚಿನ್ನದ ಬೆಲೆ ಎಷ್ಟಿದೆ?

ಕೇಂದ್ರ ಬಜೆಟ್ ಮಂಡನೆ ಹಿನ್ನೆಲೆಯಲ್ಲಿ ಚಿನ್ನದ ಏರಿಕೆ ಕಂಡಿದೆ.

Agencies 5 Jul 2019, 12:30 pm
ನರೇಂದ್ರ ಮೋದಿ ಸರ್ಕಾರದ ಎರಡನೇ ಅವಧಿಯ ಮೊದಲ ಸಾಮಾನ್ಯ ಬಜೆಟ್ ಅನ್ನು ಹಣಕಾಸು ಸಚಿವ ನಿರ್ಮಲಾ ಸೀತಾರಾಮನ್ ಮಂಡಿಸುತ್ತಿದ್ದಾರೆ. ಪ್ರತಿಯೊಂದು ಕ್ಷೇತ್ರದವರು ಈ ಬಜೆಟ್‌ ತಮಗೆಷ್ಟು ಪೂರಕವಾಗಿರಲಿದೆ ಎಂದು ದೃಷ್ಟಿ ನೆಟ್ಟು ಕುಳಿತಿದ್ದಾರೆ. ಪ್ರತಿ ವಲಯದ ಜನರು ಸಹ ಈ ಬಜೆಟ್‌ ಮೇಲೆ ಸಾಕಷ್ಟು ನಿರೀಕ್ಷೆಗಳನ್ನು ಇಟ್ಟುಕೊಂಡಿದ್ದಾರೆ. ರತ್ನ ಮತ್ತು ಆಭರಣ ಉದ್ಯಮ ಸಹ ಚಿನ್ನದ ಮೇಲಿನ ಆಮದು ಸುಂಕವನ್ನು ಕಡಿಮೆಯಾಗಲಿ ಎಂದು ಕಾದಿದೆ.
Vijaya Karnataka Web Gold


ಬೆಂಗಳೂರಿನಲ್ಲಿ 22 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ ಮಾರುಕಟ್ಟೆ ಬೆಲೆ ₹ 32,000 ಇದೆ. ಅದೇ ರೀತಿ 10ಗ್ರಾಂ ಶುದ್ಧ ಚಿನ್ನದ ಬೆಲೆ ₹ 34,225 ಇದೆ.

ಇನ್ನು ಬೆಳ್ಳಿ ಬೆಲೆ ಸ್ಥಿರವಾಗಿದ್ದು ಬೆಳ್ಳಿ 1 ಕೆಜಿ ಬೆಳ್ಳಿಗೆ ₹ 40,400 ಇದೆ.

ಬೆಂಗಳೂರಿನಲ್ಲಿ ಆಯಾ ದಿನದ ಚಿನ್ನದ ಬೆಲೆಯನ್ನು ಚಿನ್ನದ ವ್ಯಾಪಾರಿಗಳ ಒಕ್ಕೂಟ ಅಥವಾ ಸ್ವತಃ ಚಿನ್ನದ ವ್ಯಾಪಾರಿಗಳು ನಿರ್ಧರಿಸುತ್ತಾರೆ. ದೈನಂದಿನ ಚಿನ್ನದ ಬೆಲೆ ಅಂತಾರಾಷ್ಟ್ರೀಯ ಟ್ರೆಂಡ್ ಮತ್ತು ಚಿನ್ನದ ಮೇಲಿನ ಆಮದು ಸುಂಕವನ್ನು ಆಧರಿಸಿರುತ್ತದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ