ಆ್ಯಪ್ನಗರ

ಇಳಿಕೆ ಕಂಡ ಚಿನ್ನ ಮತ್ತು ಬೆಳ್ಳಿ ಬೆಲೆ

ದೇಶದ ಚಿನ್ನದ ಬೆಲೆಯಲ್ಲಿ ಮತ್ತೆ ಏರಿಳಿತ ಆರಂಭವಾಗಿದೆ. ಶನಿವಾರ 10 ಗ್ರಾಂ ಚಿನ್ನದ ಬೆಲೆಯಲ್ಲಿ 35 ರೂ ಇಳಿಕೆಯಾಗಿ, ಒಂದು ಗ್ರಾಂ ಚಿನ್ನದ ಬೆಲೆ 3,725 ರೂ ಇದೆ. ಬೆಳ್ಳಿ ಬೆಲೆ ಕೆಜಿಗೆ 50 ರೂ ಇಳಿಕೆಯಾಗಿ 48,650 ರೂ ದಾಖಲಾಗಿದೆ. ದೇಶದ ಇಂದಿನ ಚಿನ್ನ ಮತ್ತು ಬೆಳ್ಳಿ ಬೆಲೆ ವಿವರ ಇಲ್ಲಿದೆ.

Vijaya Karnataka Web 9 Nov 2019, 1:50 pm
ಬೆಂಗಳೂರು: ದೇಶದಲ್ಲಿ ಶುಕ್ರವಾರ 10 ಗ್ರಾಂ ಚಿನ್ನದ ಬೆಲೆಯಲ್ಲಿ 35 ರೂ ಇಳಿಕೆಯಾಗಿ 37,250 ರೂ ಇದ್ದು, ಬೆಳ್ಳಿ ಬೆಲೆ ಕೆಜಿಗೆ 50 ರೂ ಇಳಿಕೆ ಕಂಡು 48,650 ರೂ ಇದೆ.
Vijaya Karnataka Web today gold and silver price at bangalore 9th november 2019
ಇಳಿಕೆ ಕಂಡ ಚಿನ್ನ ಮತ್ತು ಬೆಳ್ಳಿ ಬೆಲೆ


ಕರ್ನಾಟಕದ ರಾಜಧಾನಿ ಬೆಂಗಳೂರಿನಲ್ಲಿ ಶುಕ್ರವಾರ ಚಿನ್ನದ ಬೆಲೆ ಗ್ರಾಂ ಗೆ 5 ರೂ ಇಳಿಕೆಯಾಗಿದೆ . ಹೀಗಾಗಿ ಬೆಂಗಳೂರಿನಲ್ಲಿ ಇಂದಿನ ಚಿನ್ನದ ಬೆಲೆ 10 ಗ್ರಾಂ ಗೆ 35,600 ರೂ ಇದೆ. ಕೆಜಿ ಬೆಳ್ಳಿ ಬೆಲೆ 48,650 ರೂ ಇದೆ.

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಚಿನ್ನದ ಬೆಲೆ 10 ಗ್ರಾಂ ಗೆ 50 ರೂ ಇಳಿಕೆ ಕಂಡು 37,050 ರೂಪಾಯಿ ಮತ್ತು ಒಂದು ಕೆ.ಜಿ. ಬೆಳ್ಳಿ ದರ 48,650 ರೂಪಾಯಿ ಇದೆ.

ವಾಣಿಜ್ಯ ನಗರಿ ಮುಂಬಯಿನಲ್ಲಿ 22 ಕ್ಯಾರೆಟ್‌ನ 10 ಗ್ರಾಂ ಚಿನ್ನದ ಬೆಲೆ 37,250 ರೂಪಾಯಿ ದಾಖಲಾಗಿದೆ. ಮತ್ತು ಒಂದು ಕೆ.ಜಿ. ಬೆಳ್ಳಿ ದರ 48,650 ರೂಪಾಯಿ ಇದೆ.

ದೇಶದ ಪ್ರಮುಖ ನಗರಗಳಲ್ಲಿ ಚಿನ್ನ, ಬೆಳ್ಳಿಯ ದರ ಎಷ್ಟಿದೆ?
ಪಶ್ಚಿಮ ಬಂಗಾಳದ ಕೋಲ್ಕತಾದಲ್ಲಿ 10 ಗ್ರಾಂ ಆಭರಣದ ಬೆಲೆ 37,490 ರೂಪಾಯಿ ಮತ್ತು ಬೆಳ್ಳಿ ದರ 48,650 ರೂಪಾಯಿ ಇದೆ.

ತಮಿಳುನಾಡಿನ ಚೆನ್ನೈನಲ್ಲಿ ಇಂದಿನ ಬಂಗಾರದ ಬೆಲೆಯಲ್ಲಿ ಗ್ರಾಂ ಗೆ 36,300 ರೂ ಇದೆ. ಒಂದು ಕೆ.ಜಿ. ಬೆಳ್ಳಿ ದರ 48,650 ರೂಪಾಯಿ ಇದೆ.

ಒಟ್ಟಾರೆ ದೇಶದ ಪ್ರಮುಖ ಮಹಾನಗರಗಳಲ್ಲಿ ಹಳದಿ ಲೋಹದ ಬೆಲೆಯಲ್ಲಿ ಏರಿಕೆ - ಇಳಿಕೆಯ ಹಾವು ಏಣಿ ಆಟ ಇದೆ. ಬೆಳ್ಳಿ ದರ ಕೂಡ ಏರಿಳಿತ ಕಾಣುತ್ತಿದೆ. ಅಂತಾರಾಷ್ಟ್ರೀಯ ಟ್ರೆಂಡ್, ಚಿನ್ನದ ಮೇಲಿನ ಆಮದು ಸುಂಕ ಮತ್ತು ಡಾಲರ್ ಎದುರು ರೂಪಾಯಿ ಮೌಲ್ಯವನ್ನಾಧರಿಸಿ ಆಯಾ ದಿನದ ಬಂಗಾರ ಹಾಗೂ ಬೆಳ್ಳಿ ದರ ನಿರ್ಧಾರವಾಗುತ್ತದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ