ಆ್ಯಪ್ನಗರ

ಆಭರಣ ಪ್ರಿಯರಿಗೆ ಶಾಕ್‌: ಬೆಂಗಳೂರಿನಲ್ಲಿ 40 ಸಾವಿರ ಗಡಿ ದಾಟಿದ ಚಿನ್ನದ ಬೆಲೆ, ಬೆಳ್ಳಿ ಬೆಲೆ ಮತ್ತಷ್ಟು ಗಗನಕ್ಕೆ

ದೇಶದ ಚಿನ್ನದ ಮತ್ತು ಬೆಳ್ಳಿ ಬೆಲೆಯಲ್ಲಿ ಏರಿಳಿತದ ಹಾವು ಏಣಿ ಆಟ ಮುಂದುವರೆಸಿದೆ. ಆಯಾಯ ರಾಜ್ಯಗಳಲ್ಲಿ ಅಲ್ಲಿನ ಬೇಡಿಕೆಗೆ ತಕ್ಕಂತೆ ಹಳದಿಲೋಹದ ಬೆಲೆಯಲ್ಲಿ ವ್ಯತ್ಯಾಸವಿದೆ. ದೇಶದ ಇಂದಿನ ಚಿನ್ನ ಮತ್ತು ಬೆಳ್ಳಿ ಬೆಲೆ ವಿವರ ಇಲ್ಲಿದೆ.

Vijaya Karnataka Web 23 Feb 2020, 1:31 pm
ಬೆಂಗಳೂರು: ಆಭರಣ ಬೆಲೆಯಲ್ಲಿ ಮತ್ತೆ ಏರಿಕೆ ಕಂಡಿದೆ. ಭಾನುವಾರ ದೇಶದ 1 ಗ್ರಾಂ ಚಿನ್ನದ ಬೆಲೆ 4151 ರೂ. ಆಗಿದೆ. ಇನ್ನು, ಬೆಂಗಳೂರಿನಲ್ಲಿ ಗ್ರಾಂ ಚಿನ್ನದ ದರ 4 ಸಾವಿರ ರೂ ಗಡಿ ದಾಟಿದ್ದು, 4,001 ರೂ. ದಾಖಲಾಗಿದೆ. ಇದೇ ರೀತಿ ಕೆಜಿ ಬೆಳ್ಳಿ ಬೆಲೆ ಸಹ 50 ಸಾವಿರದ ಗಡಿ ದಾಟಿದ್ದು, 51,000 ರೂ ದಾಖಲಾಗಿದೆ.
Vijaya Karnataka Web gold et market


ಕರ್ನಾಟಕದ ರಾಜಧಾನಿ ಬೆಂಗಳೂರಿನಲ್ಲಿ 22 ಕ್ಯಾರೆಟ್‌ನ 10 ಗ್ರಾಂ ಚಿನ್ನದ ಬೆಲೆ 40,010 ರೂ. ದಾಖಲಾಗಿದೆ. ಇನ್ನು, ಇದೇ ರೀತಿ 1 ಕೆಜಿ ಬೆಳ್ಳಿ ಬೆಲೆ 51,000 ರೂ. ಆಗಿದೆ.

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 10 ಗ್ರಾಂ ಚಿನ್ನದ ಬೆಲೆ 10 ರೂ ಏರಿಕೆ ಕಂಡು 41,610 ರೂಪಾಯಿ ತಲುಪಿದೆ. ಒಂದು ಕೆ.ಜಿ. ಬೆಳ್ಳಿ ದರ 51,000 ರೂಪಾಯಿ ಇದೆ.

ವಾಣಿಜ್ಯ ನಗರಿ ಮುಂಬಯಿನಲ್ಲಿ 22 ಕ್ಯಾರೆಟ್‌ನ 10 ಗ್ರಾಂ ಚಿನ್ನದ ಬೆಲೆ 10 ರೂ ಏರಿಕೆ ಕಂಡು 41,510 ರೂಪಾಯಿ ದಾಖಲಾಗಿದೆ. ಇನ್ನು, ಒಂದು ಕೆ.ಜಿ. ಬೆಳ್ಳಿ ದರ 51,000 ರೂಪಾಯಿ ಇದೆ.

ದೇಶದ ಇತರೆ ಪ್ರಮುಖ ನಗರಗಳಲ್ಲಿ ಚಿನ್ನ, ಬೆಳ್ಳಿಯ ದರ ಎಷ್ಟಿದೆ?
ಪಶ್ಚಿಮ ಬಂಗಾಳದ ಕೋಲ್ಕತಾದಲ್ಲಿ ಇಂದು 10 ಗ್ರಾಂ ಆಭರಣದ ಬೆಲೆ 10 ರೂ. ಏರಿಕೆಯಾಗಿ 41,560 ರೂಪಾಯಿ ಮತ್ತು ಬೆಳ್ಳಿ ದರ 51,000 ರೂಪಾಯಿ ಇದೆ.

ತಮಿಳುನಾಡಿನ ಚೆನ್ನೈನಲ್ಲಿ ಇಂದಿನ ಬಂಗಾರದ ಬೆಲೆ 10 ಗ್ರಾಂಗೆ 10 ರೂ ಏರಿಕೆಯಾಗಿ 40,730 ರೂ ದಾಖಲಾಗಿದ್ದರೆ ಒಂದು ಕೆ.ಜಿ. ಬೆಳ್ಳಿ ದರ 51,000 ರೂಪಾಯಿ ಇದೆ.

ಒಟ್ಟಾರೆ ದೇಶದ ಪ್ರಮುಖ ಮಹಾನಗರಗಳಲ್ಲಿ ಹಳದಿ ಲೋಹದ ಬೆಲೆಯಲ್ಲಿ ಏರಿಕೆ - ಇಳಿಕೆಯ ಹಾವು ಏಣಿ ಆಟ ಇದೆ. ಬೆಳ್ಳಿ ದರ ಕೂಡ ಏರಿಳಿತ ಕಾಣುತ್ತಿದೆ. ಅಂತಾರಾಷ್ಟ್ರೀಯ ಟ್ರೆಂಡ್, ಚಿನ್ನದ ಮೇಲಿನ ಆಮದು ಸುಂಕ ಮತ್ತು ಡಾಲರ್ ಎದುರು ರೂಪಾಯಿ ಮೌಲ್ಯವನ್ನಾಧರಿಸಿ ಆಯಾ ದಿನದ ಬಂಗಾರ ಹಾಗೂ ಬೆಳ್ಳಿ ದರ ನಿರ್ಧಾರವಾಗುತ್ತದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ