ಆ್ಯಪ್ನಗರ

ದೋಸ್ತಿ ಸರಕಾರದ ಬಜೆಟ್‌ಗೆ ಕಾಂಗ್ರೆಸಿಗರ ಅಸಮಾಧಾನ

ಜಮೀರ್‌, ಖಾದರ್‌, ಎಚ್‌.ಕೆ. ಪಾಟೀಲ್‌ ಅಪಸ್ವರ

Vijaya Karnataka Web 5 Jul 2018, 7:12 pm
ಬೆಂಗಳೂರು: ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಮಂಡಿಸಿದ ಕಾಂಗ್ರೆಸ್‌ ಮತ್ತು ಜೆಡಿಎಸ್‌ ಸಮ್ಮಿಶ್ರ ಸರಕಾರದ ಚೊಚ್ಚಲ ಬಜೆಟ್‌ಗೆ ಕಾಂಗ್ರೆಸಿಗರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
Vijaya Karnataka Web ವಿಧಾನಸೌಧ
ವಿಧಾನಸೌಧ


ಸಚಿವರಾದ ಯು.ಟಿ. ಖಾದರ್‌, ಜಮೀರ್‌ ಪಾಷಾ, ಹಿರಿಯ ಶಾಸಕ ಎಚ್‌.ಕೆ. ಪಾಟೀಲ್‌ ಬಜೆಟ್‌ ಬಗ್ಗೆ ಬಹಿರಂಗವಾಗಿಯೇ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಅಲ್ಪಸಂಖ್ಯಾತದ ಅಭಿವೃದ್ಧಿಗೆ ಹೆಚ್ಚುವರಿ ಅನುದಾನ ಘೋಷಣೆ ಮಾಡಿಲ್ಲ ಎಂದು ಜಮೀರ್‌ ಪಾಷಾ, ಖಾದರ್‌ ಮುಖ್ಯಮಂತ್ರಿ ಸಿದ್ದರಾಮಯ್ಯ ಬಳಿಯೇ ಅಸಮಾಧಾನ ತೋಡಿಕೊಂಡಿದ್ದಾರೆ.

ಇಬ್ಬರನ್ನೂ ಸಮಾಧಾನಪಡಿಸಿರುವ ಕುಮಾರಸ್ವಾಮಿ, ಮುಂದಿನ ಬಾರಿ ಹೆಚ್ಚುವರಿ ಅನುದಾನ ಮಂಜೂರು ಮಾಡಲಾಗುವುದು ಎಂದು ತಿಳಿಸಿದ್ದಾರೆ ಎಂದು ಹೇಳಲಾಗಿದೆ.

ಈ ನಡುವೆ ಮಾತನಾಡಿದ ಸಚಿವ ಯುಟಿ ಖಾದರ್‌, ಕರಾವಳಿ ಪ್ರದೇಶವನ್ನು ಮುಖ್ಯಮಂತ್ರಿ ಕುಮಾರಸ್ವಾಮಿ ನಿರ್ಲಕ್ಷ್ಯ ಮಾಡಿಲ್ಲ ಎಂದು ಹೇಳಿದ್ದಾರೆ.

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಬಜೆಟ್‌ನಲ್ಲಿ ಘೋಷಿಸಿದ್ದ ಯೋಜನೆಗಳನ್ನು ಮುಂದುವರಿಸಿಕೊಂಡು ಹೋಗಲಾಗಿದೆ. ರೈತರಿಗೆ ಅನುಕೂಲ ಮಾಡಿಕೊಡಲಾಗಿದೆ ಎಂದು ಖಾದರ್‌ ತಿಳಿಸಿದ್ದಾರೆ.

ಇನ್ನು ಉತ್ತರ ಕರ್ನಾಟಕಕ್ಕೆ ಬಜೆಟ್‌ನಲ್ಲಿ ಏನು ನಿರೀಕ್ಷಿಸುವಂತಿಲ್ಲ. ಉತ್ತರ ಕರ್ನಾಟಕಕ್ಕೆ ಈ ಬಾರಿಯ ಬಜೆಟ್‌ನಲ್ಲಿ ಭಾರಿ ಅನ್ಯಾಯವಾಗಿದೆ ಎಂದು ಹಿರಿಯ ಶಾಸಕ ಎಚ್‌.ಕೆ. ಪಾಟೀಲ್ ಬಹಿರಂಗವಾಗಿ ಅಪಸ್ವರ ಎತ್ತಿದ್ದಾರೆ.

ಈಗಾಗಲೇ ಸಚಿವ ಸ್ಥಾನದಿಂದ ವಂಚಿತಗೊಂಡಿರುವ ಎಚ್ಕೆ ಪಾಟೀಲ್‌ಗೆ ಈ ಬಜೆಟ್‌ ಕಂಡು ಮತ್ತಷ್ಟು ಅಸಮಾಧಾನಕ್ಕೊಳಗಾಗಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ