ಆ್ಯಪ್ನಗರ

ಉಜ್ವಲ ಯೋಜನೆಯಲ್ಲಿ 5 ಕೆಜಿ ಎಲ್ಪಿಜಿ ಸಿಲಿಂಡರ್‌ ಬಳಕೆ

ಉಜ್ವಲ ಯೋಜನೆಯ ಅಡಿಯಲ್ಲಿ ಬಡ ಮಹಿಳೆಯರಿಗೆ ಅಡುಗೆ ಅನಿಲ ಸಂಪರ್ಕ ಕಲ್ಪಿಸುವ ಕಾರ್ಯಕ್ರಮವನ್ನು ಮತ್ತಷ್ಟು ಬಲಪಡಿಸಲು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎರಡನೇ ಅವಧಿಯ ಸರಕಾರ ಸಿದ್ಧತೆ ನಡೆಸಲಿದೆ ಎಂದು ವರದಿಯಾಗಿದೆ.

Vijaya Karnataka Web 29 May 2019, 5:00 am
ಹೊಸದಿಲ್ಲಿ: ಪ್ರಧಾನ ಮಂತ್ರಿ ಉಜ್ವಲ ಯೋಜನೆಯ ಅಡಿಯಲ್ಲಿ ಬಡ ಮಹಿಳೆಯರಿಗೆ ಅಡುಗೆ ಅನಿಲ ಸಂಪರ್ಕ ಕಲ್ಪಿಸುವ ಕಾರ್ಯಕ್ರಮವನ್ನು ಮತ್ತಷ್ಟು ಬಲಪಡಿಸಲು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎರಡನೇ ಅವಧಿಯ ಸರಕಾರ ಸಿದ್ಧತೆ ನಡೆಸಲಿದೆ ಎಂದು ವರದಿಯಾಗಿದೆ. ಈ ನಿಟ್ಟಿನಲ್ಲಿ 5 ಕೆ.ಜಿ ಎಲ್ಪಿಜಿ ಸಿಲಿಂಡರ್‌ಗಳ ಬಳಕೆಯನ್ನು ಹೆಚ್ಚಿಸುವ ನಿರೀಕ್ಷೆ ಇದೆ. ಇದರಿಂದ ಹೆಚ್ಚು ಮಂದಿಗೆ ಯೋಜನೆ ವಿಸ್ತರಿಸಬಹುದು. ಈ ಯೋಜನೆಯಡಿ ಬಡ ಮಹಿಳೆಯರ ಕುಟುಂಬಕ್ಕೆ ಎಲ್ಪಿಜಿ ಸಂಪರ್ಕ ಒದಗಿಸಲು 1,600 ರೂ. ನೆರವನ್ನು ಸರಕಾರ ಒದಗಿಸುತ್ತದೆ. 8 ಕೋಟಿ ಎಲ್ಪಿಜಿ ಸಂಪರ್ಕ ಒದಗಿಸಿದ ನಂತರ 5 ಕೆ.ಜಿ ಸಿಲಿಂಡರ್‌ಗಳನ್ನು ಬಳಸಲು ಸರಕಾರ ನಿರ್ಧರಿಸುವ ಸಾಧ್ಯತೆ ಇದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ