ಆ್ಯಪ್ನಗರ

ಕರ್ನಾಟಕದ ಫಲಿತಾಂಶದತ್ತ ಷೇರುಪೇಟೆ ಚಿತ್ತ

ಕರ್ನಾಟಕ ವಿಧಾನಸಭೆ ಚುನಾವಣೆಯ ಫಲಿತಾಂಶ ಮಂಗಳವಾರ ಪ್ರಕಟವಾಗಲಿರುವ ಹಿನ್ನೆಲೆಯಲ್ಲಿ ಷೇರು ಪೇಟೆಯಲ್ಲಿ ಹೂಡಿಕೆದಾರರು ಕಾತುರದಿಂದ ನಿರೀಕ್ಷಿಸುತ್ತಿದ್ದಾರೆ. ಹೀಗಾಗಿ ಸೋಮವಾರ ಷೇರು ಸೂಚ್ಯಂಕದಲ್ಲಿ ಹೆಚ್ಚಿನ ಏರಿಳಿತ ಕಂಡು ಬರಲಿಲ್ಲ.

TNN & Agencies 15 May 2018, 7:32 am
ಮುಂಬಯಿ :ಕರ್ನಾಟಕ ವಿಧಾನಸಭೆ ಚುನಾವಣೆಯ ಫಲಿತಾಂಶ ಮಂಗಳವಾರ ಪ್ರಕಟವಾಗಲಿರುವ ಹಿನ್ನೆಲೆಯಲ್ಲಿ ಷೇರು ಪೇಟೆಯಲ್ಲಿ ಹೂಡಿಕೆದಾರರು ಕಾತುರದಿಂದ ನಿರೀಕ್ಷಿಸುತ್ತಿದ್ದಾರೆ. ಹೀಗಾಗಿ ಸೋಮವಾರ ಷೇರು ಸೂಚ್ಯಂಕದಲ್ಲಿ ಹೆಚ್ಚಿನ ಏರಿಳಿತ ಕಂಡು ಬರಲಿಲ್ಲ. ಎಲ್ಲರೂ ಮಂಗಳವಾರದ ಫಲಿತಾಂಶವನ್ನೇ ಎದುರು ನೋಡುತ್ತಿದ್ದಾರೆ. ಮತ್ತೊಂದು ಕಡೆ ಚುನಾವಣೋತ್ತರ ಫಲಿತಾಂಶ ಹೂಡಿಕೆದಾರರಲ್ಲಿ ಗೊಂದಲ ಸೃಷ್ಟಿಸಿದೆ. ಬಹುತೇಕ ಸಮೀಕ್ಷೆಗಳು ಅತಂತ್ರ ಫಲಿತಾಂಶವನ್ನು ಬಿಂಬಿಸಿವೆ. ಬಿಜೆಪಿ-ಕಾಂಗ್ರೆಸ್‌ ನಡುವೆ ತೀವ್ರ ಹಣಾಹಣಿ ನಿರೀಕ್ಷಿಸಲಾಗಿದೆ. ಇದರ ಪರಿಣಾಮ ಸೋಮವಾರ ಹೂಡಿಕೆದಾರರು ಯಾವುದೇ ರಿಸ್ಕ್‌ ತೆಗೆದುಕೊಳ್ಳಲಿಲ್ಲ.
Vijaya Karnataka Web bse-sensex


ಸೆನ್ಸೆಕ್ಸ್‌ ಆರಂಭಿಕ ವಹಿವಾಟಿನಲ್ಲಿ ಏರಿದರೂ, ಅಂತಿಮವಾಗಿ 20 ಅಂಕ ಗಳಿಸಿ 35,642ಕ್ಕೆ ಸ್ಥಿರವಾಯಿತು. ನಿಫ್ಟಿ ಕೇವಲ 0.10 ಅಂಕ ಗಳಿಸಿ 10,806ಕ್ಕೆ ವಹಿವಾಟು ಮುಕ್ತಾಯಗೊಳಿಸಿತು. ಈ ನಡುವೆ ಕಳೆದ ಶುಕ್ರವಾರ ವಿದೇಶಿ ಸಾಂಸ್ಥಿಕ ಹೂಡಿಕೆದಾರರು 1,163 ಕೋಟಿ ರೂ. ಮೌಲ್ಯದ ಷೇರುಗಳನ್ನು ಖರೀದಿಸಿದರು.

ಸಗಟು ಹಣದುಬ್ಬರ ಏಪ್ರಿಲ್‌ನಲ್ಲಿ ಶೇ.3.18ಕ್ಕೆ ಏರಿಕೆಯಾಗಿರುವುದು ಕೂಡ ವಹಿವಾಟಿನ ಮೇಲೆ ಪ್ರಭಾವ ಬೀರಿತು. ತೈಲ ದರ ಏರಿಕೆಯ ಪರಿಣಾಮ ಸಾರ್ವಜನಿಕ ತೈಲ ಕಂಪನಿಗಳ ಷೇರು ದರ ಮಾತ್ರ ಜಿಗಿಯಿತು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ